ಅಂಬೇಡ್ಕರ್ ಸಮುದಾಯ ಭವನ ದುರಸ್ತಿಗೆ ವರ್ಷ ಬೇಕಾ? ಶೀಘ್ರ ದುರಸ್ತಿಪಡಿಸಿ ಬಳಕೆಗೆ ಅವಕಾಶ ನೀಡಿ
Team Udayavani, Feb 24, 2022, 1:59 PM IST
ಗುಂಡ್ಲುಪೇಟೆ: ದುರಸ್ತಿ ನೆಪದಲ್ಲಿ ಪಟ್ಟಣದ ಹೊರ ವಲಯದ ಊಟಿ ಸರ್ಕಲ್‌ಗೆ ಹೊಂದಿಕೊಂಡಿರುವ ಅಂಬೇಡ್ಕರ್ ಭವನ ಕಳೆದ ಒಂದು ವರ್ಷದಿಂದಲೂ ಬಾಗಿಲು ಮುಚ್ಚಿದೆ.
ತಾಲೂಕಿನಲ್ಲಿ 60-70 ಸಾವಿರಕ್ಕೂ ಅಧಿಕ ದಲಿತ ಸಮುದಾಯ ಜನ ಸಂಖ್ಯೆಯಿದೆ. ಇದರಲ್ಲಿ ಹೆಚ್ಚಿನ ಮಂದಿ ಭೂ ರಹಿತ ಕುಟುಂಬಗಳಿದ್ದು, ಶೇ.80ರಷ್ಟು ಜನರು ಕೂಲಿ ಅವಲಂಬಿಸಿದ್ದಾರೆ. ಇಂತಹ ಜನರಿಗೆ ಉಪಯೋಗವಾಗಲಿ ಎಂಬ ಉದ್ದೇಶದಿಂದ ನಿರ್ಮಿಸಿರುವ ಅಬೇಡ್ಕರ್ ಭವನವನ್ನು 10ರಿಂದ 15 ಸಾವಿರ ರೂ. ಬಾಡಿಗೆಗೆ ನೀಡುತ್ತಿದ್ದ ಹಿನ್ನೆಲೆ ತಾಲೂಕಿನ ಬಹುತೇಕ ಮಂದಿ ಮದುವೆ ಸೇರಿದಂತೆ ಇನ್ನಿತರ ಕಾರ್ಯ ಕ್ರಮಗಳನ್ನು ನಡೆಸುತ್ತಿದ್ದರು.
ಸಮಾಜ ಕಲ್ಯಾಣ ಇಲಾಖೆ ಇದರ ಮೇಲ್ವಿಚಾರಣೆ ಹೊತ್ತಿದೆ.
ಮೂಲಸೌಲಭ್ಯ ಕೊರತೆ: ಕಳೆದ ಮೂರ್‍ನಾಲ್ಕು ವರ್ಷದಿಂದ ವಿದ್ಯುತ್ ಸಮಸ್ಯೆ ಇದ್ದು, ಈ ಹಿನ್ನೆಲೆ ಸಭೆ ಸಮಾರಂಭ ಮಾಡುವವರು ಹೊರಗಿನಿಂದ ಜನರೇಟರ್ ತರಬೇಕಾಗಿದೆ.
ಭವನದಲ್ಲಿರುವ ಕಿರಿದಾದ ಒಂದೇ ಶೌಚಾಲಯ ಗಬ್ಬೆದ್ದು ನಾರುತ್ತಿದೆ. ಜೊತೆಗೆ ಶುದ್ಧ ಕುಡಿಯವ ನೀರಿನ ವ್ಯವಸ್ಥೆ ಕೂಡ ಇಲ್ಲ. ಹೊರಗಿನಿಂದ ನೀರು ತರಿಸಬೇಕಾದ ಪರಿಸ್ಥಿತಿ ಇದೆ.
ಕಟ್ಟಡ ಪಾಳು: ಭವನದ 10ಕ್ಕೂ ಹೆಚ್ಚು ಕಡೆ ಕಿಟಕಿ ಗಾಜುಗಳು ಒಡೆದಿವೆ. ಇದರಿಂದ ಅಕ್ಕಿ-ಪಕ್ಷಿಗಳು ಭವನದೊಳಗೆ ನುಗ್ಗಿ ಗೂಡು ಕಟ್ಟಿಕೊಂಡಿವೆ. ಭವನವು ಪಟ್ಟಣದ ಹೊರವಲಯದಲ್ಲಿರುವ ಕಾರಣ ರಾತ್ರಿ ವೇಳೆ ಕುಡುಕರು ಈ ಸ್ಥಳದಲ್ಲಿ ಮದ್ಯದ ಬಾಟಲಿ ಬಿಸಾಡುತ್ತಿದ್ದಾರೆ. ಭವನವು ತಗ್ಗಿನಲ್ಲಿರುವ ಕಾರಣ ಸುತ್ತಲೂ ಗಿಡಗಂಟಿಗಳು ಬೆಳೆದಿವೆ. ಕಟ್ಟಡ ಪಾಳು ಬಿದ್ದಂತೆ ಕಾಣುತ್ತಿದೆ. ಈ ಕುರಿತು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ತಕ್ಷಣ ಭವನವನ್ನು ದುರಸ್ತಿ ಪಡಿಸಿ, ಸಾರ್ವಜನಿಕರ ಬಳಕೆಗೆ ನೀಡಬೇಕು ಎಂದು ಸಾರ್ವಜನಿಕರು
ಆಗ್ರಹಿಸಿದ್ದಾರೆ.
– ಬಸವರಾಜು ಎಸ್.ಹಂಗಳ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ
Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ
Pegasus spyware ಬಗ್ಗೆ ಸುಪ್ರೀಂಕೋರ್ಟ್ ತನಿಖೆ ನಡೆಸಲಿ: ಸುರ್ಜೇವಾಲಾ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.