ದೆಹಲಿಯಲ್ಲೂ ಹಿಜಾಬ್ ವಿವಾದ : ಸ್ಪಷ್ಟನೆ ನೀಡಿದ ಡಿಸಿಎಂ ಸಿಸೋಡಿಯಾ
Team Udayavani, Feb 24, 2022, 4:56 PM IST
ನವದೆಹಲಿ: ದೆಹಲಿಯ ಸರಕಾರಿ ಶಾಲೆಯ ವಿದ್ಯಾರ್ಥಿನಿಯೊಬ್ಬಳು ತನ್ನ ಶಿಕ್ಷಕರು ಹಿಜಾಬ್ ತೆಗೆಯುವಂತೆ ಕೇಳಿಕೊಂಡಿದ್ದರು ಎಂದು ಆರೋಪಿಸಿದ ಒಂದು ದಿನದ ನಂತರ, ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಅಂತಹ ಯಾವುದೇ ನಿರ್ಬಂಧಗಳನ್ನು ವಿಧಿಸಿಲ್ಲ ಮತ್ತು ಕೆಲವರು ಈ ವಿಷಯವನ್ನು ರಾಜಕೀಯಗೊಳಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಖಾತೆಯನ್ನು ಹೊಂದಿರುವ ಸಿಸೋಡಿಯಾ, ಎಎಪಿ ಎಲ್ಲಾ ಸಂಪ್ರದಾಯಗಳನ್ನು ಗೌರವಿಸುತ್ತದೆ ಮತ್ತು ಎಲ್ಲಾ ಧರ್ಮಗಳು ಮತ್ತು ಜಾತಿಗಳ ವಿದ್ಯಾರ್ಥಿಗಳನ್ನು ತನ್ನ ಶಾಲೆಗಳಲ್ಲಿ ಗೌರವದಿಂದ ನಡೆಸಿಕೊಳ್ಳಲಾಗುತ್ತದೆ ಎಂದು ಹೇಳಿದರು.
ಮುಸ್ತಫಾಬಾದ್‌ನ ದೆಹಲಿ ಸರ್ಕಾರಿ ಶಾಲೆಯೊಂದರ ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಯೊಬ್ಬಳು ಶಾಲೆಯಲ್ಲಿ ತನ್ನ ಸ್ಕಾರ್ಫ್ ಅನ್ನು ತೆಗೆದುಹಾಕಲು ಕೇಳಿಕೊಂಡಿದ್ದಾರೆ ಎಂದು ಆರೋಪಿಸಿದ ನಂತರ ಸಿಸೋಡಿಯಾ ಈ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಬಾಲಕಿ ಈ ಆರೋಪ ಮಾಡಿದ್ದಾಳೆ.
ದೆಹಲಿ ಶಾಲೆಗಳು ವಿದ್ಯಾರ್ಥಿಗಳಿಗೆ ಕಲಿಸಲು ಅತ್ಯುತ್ತಮವಾದ ವ್ಯವಸ್ಥೆಯನ್ನು ಹೊಂದಿವೆ. ಈ ಘಟನೆಗೆ ಸಂಬಂಧಿಸಿದಂತೆ..ವಿಷಯವನ್ನು ರಾಜಕೀಯಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ. ನಮ್ಮ ಶಾಲೆಗಳಲ್ಲಿ ಎಲ್ಲ ಧರ್ಮ, ಜಾತಿಯ ವಿದ್ಯಾರ್ಥಿಗಳನ್ನು ಗೌರವದಿಂದ ಕಾಣಲಾಗುತ್ತಿದೆ. ನಮ್ಮ ಕಡೆಯಿಂದ ಯಾವುದೇ ನಿರ್ಬಂಧಗಳಿಲ್ಲ ಮತ್ತು ಅವರ ಸಂಪ್ರದಾಯಗಳನ್ನು ಗೌರವಿಸಲಾಗುತ್ತದೆ ಎಂದು ಸಿಸೋಡಿಯಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.