ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಾಕಾರಿಣಿ : ಆ್ಯಪ್‌ ಮೂಲಕ ಪರಿಷತ್‌ ಚುನಾವಣೆಗೆ ಆಕ್ಷೇಪ

Team Udayavani, Feb 25, 2022, 5:00 AM IST

ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಾಕಾರಿಣಿ : ಆ್ಯಪ್‌ ಮೂಲಕ ಪರಿಷತ್‌ ಚುನಾವಣೆಗೆ ಆಕ್ಷೇಪ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಬೈಲಾ ತಿದ್ದುಪಡಿ ಸಂಬಂಧಿದಂತೆ ಗುರುವಾರ ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಚೇರಿಯಲ್ಲಿ ಪರಿಷತ್ತಿನ ನೂತನ ಕಾರ್ಯಾಕಾರಿಣಿ ನಡೆಯಿತು. ಆ್ಯಪ್‌ ಮೂಲಕ ಚುನಾವಣೆ ನಡೆಸಲು ಮುಂದಾಗಿರುವ ಸಾಹಿತ್ಯ ಪರಿಷತ್‌ ಅಧ್ಯಕ್ಷರ ನಡೆಗೆ ಆಕ್ಷೇಪ ವ್ಯಕ್ತವಾಗಿದೆ.

ಪರಿಷತ್ತಿನ ಅಧ್ಯಕ್ಷ ಡಾ.ಮಹೇಶ ಜೋಶಿ ಸಮ್ಮುಖದಲ್ಲಿ ನಡೆದ ಈ ಸಭೆಯಲ್ಲಿ ಕಸಾಪದ ಎಲ್ಲಾ ಜಿಲ್ಲಾಧ್ಯಕ್ಷರುಗಳು ಭಾಗವಹಿಸಿದ್ದರು. ಗುರುವಾರ ಇಡೀ ದಿನ ನಡೆದ ಸಮಾಲೋಚನಾ ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವಕ್ಕೆ ಕಲಿಕಾ ಮಾನದಂಡ, ಆ್ಯಪ್‌ ಮೂಲಕ ಪರಿಷತ್ತಿನ ಚುನಾವಣೆ ಸೇರಿದಂತೆ ಕನ್ನಡ ಸಾಹಿತ್ಯ ಪರಿಷತ್ತಿನ ಬೈಲಾತಿದ್ದಪಡಿ ಸಂಬಂಧ ಕಾನೂನು ತಜ್ಞರ ಶಿಫಾರಸ್ಸುಗಳ ಬಗ್ಗೆ ಚರ್ಚೆ ನಡೆಸಿದರು. ಈ ಹಿಂದೆ ಸಮಾಲೋಚನಾ ಸಭೆಯಲ್ಲಿ ವಿವಿಧ ಕ್ಷೇತ್ರದ ಸಾಧಕರು ನೀಡಿದ ಸಲಹೆಗಳ ಬಗ್ಗೆ ಕೂಡ ಸಮಾಲೋಚನೆ ನಡೆಯಿತು.

ಇದೇ ವೇಳೆ ಆ್ಯಪ್‌ ಮೂಲಕ ಕನ್ನಡ ಸಾಹಿತ್ಯ ಪರಿಷತ್ತಿಗೆ ಚುನಾವಣೆ ನಡೆಸುವ ಬಗ್ಗೆ ಕಾರ್ಯಾಕಾರಿಣಿಯಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಯಿತು. ಹಲವು ಜಿಲ್ಲಾಧ್ಯಕ್ಷರು ಆ್ಯಪ್‌ ಬಳಕೆಯಿಂದ ಹಲವು ಸಮಸ್ಯೆಗಳು ಎದುರಾಗಬಹುದು ಆ ಹಿನ್ನೆಲೆಯಲ್ಲಿ ಆ್ಯಪ್‌ ಮೂಲಕ ಚುನಾವಣೆ ನಡೆಸುವ ನಿರ್ಧಾರಿಂದ ಹಿಂದೆ ಸರಿಯುವುದು ಒಳ್ಳೆಯದು ಎಂಬ ಸಲಹೆ ನೀಡಿದರು.

ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ತಾಲೂಕು ಘಟಕಗಳ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಇನ್ನೂ ಕೆಲವು ಜಿಲ್ಲೆಗಳಲ್ಲಿ ತಾಲೂಕು ಘಟಕಗಳ ಅಧ್ಯಕ್ಷರ ನೇಮಕಲಾಗಿಲ್ಲ. ಈ ವಿಚಾರದಲ್ಲಿ  ರಾಜ್ಯಾಧ್ಯಕ್ಷರ ಹಸ್ತಕ್ಷೇಪ ಒಳ್ಳೆಯದಲ್ಲ ಈ ಹಿಂದಿನ ಅಧ್ಯಕ್ಷರುಗಳು ಯಾವ ರೀತಿಯಲ್ಲಿ ನಡೆದು ಕೊಂಡಿದ್ದಾರೋ ಅದೇ ರೀತಿಯ ನಡೆದು ಕೊಳ್ಳಬೇಕು ಎಂದು ಕೆಲವು ಜಿಲ್ಲಾಧ್ಯಕ್ಷರುಗಳು ಸಭೆಯಲ್ಲಿ ಮನವಿ ಮಾಡಿದರು.

ಬೈಲಾ ಬದಲಾವಣೆಗೆ ಆತುರ ಏಕೆ?:  ಕನ್ನಡ ಸಾಹಿತ್ಯ ಪರಿಷತ್ತಿನ ಬೈಲಾ ತಿದ್ದುಪಡಿಯ ಬಗ್ಗೆ ಆತುರದ ನಿರ್ಧಾರ ಕೈಗೊಳ್ಳುತ್ತಿರುವುದು ಸರಿಯಲ್ಲ ಎಂಬ ಮಾತು ಕೂಡ ಕಾರ್ಯಾಕಾರಿಣಿಯಲ್ಲಿ ವ್ಯಕ್ತವಾಯಿತು. ಈ ಹಿಂದೆ ಮನು ಬಳಿಗಾರ್‌ ಅವರ ನೇತೃತ್ವದಲ್ಲಿ ಕೆಲವು ತಿದ್ದುಪಡಿಗಳು ಆಗಿವೆ. ನಾವು ಇನ್ನೂ ಪರಿಷತ್ತಿಗೆ ಅಡಿಯಿಟ್ಟು ಕೆಲವೇ ಕೆಲವು ತಿಂಗಳುಗಳು ಕಳೆದಿವೆ.ಇಂತಹ ಸಮಯದಲ್ಲಿ ಆತುರದಿಂದ  ಬೈಲಾ ತಿದ್ದುಪಡಿಗೆ ಕೈ ಹಾಕುವುದು ಒಳ್ಳೆಯದಲ್ಲ  ಎಂಬ ಮಾತುಗಳು ಸಭೆಯಲ್ಲಿ ವ್ಯಕ್ತವಾಯಿತು ಎಂದು ಮೂಲಗಳು ತಿಳಿಸಿವೆ.

ಯಾವುದೇ ಹೊಸ ಯೋಜನೆಗಳನ್ನು ರೂಪಿಸದೆ. ಪರಿಷತ್ತಿನ ಅಭಿವೃದ್ದಿ ಬಗ್ಗೆ ಯೋಜನೆ ಜಾರಿಗೊಳಿಸದೆ ಕೇವಲ ಬೈಲಾ ತಿದ್ದಪಡಿಗೆ ಮುಂದಾಗಿರುವ ಕಸಾಪ ಕಾರ್ಯ ವೈಖರಿ ಬಗ್ಗೆ ಕನ್ನಡ ಸಾಹಿತ್ಯ ಲೋಕದಲ್ಲಿ ಚರ್ಚೆ ಆರಂಭವಾಗಿದೆ. ಆ ಹಿನ್ನೆಲೆಯಲ್ಲಿ ಬೈಲಾ ತಿದ್ದುಪಡಿ ಬದಿಗಿಟ್ಟು ಹೊಸ ಕಾರ್ಯಕ್ರಮಗಳನ್ನು ರೂಪಿಸುವ ಬಗ್ಗೆ ಆಲೋಚಿಸೋಣ ಎಂಬ ಸಲಹೆಯನ್ನು ಹಲವು ಜಿಲ್ಲಾಧ್ಯಕ್ಷರು ಸಭೆಯಲ್ಲಿ  ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದಕ್ಕೂ ಮೊದಲ ಇತ್ತೀಚೆಗೆ ಅಗಲಿದೆ ಸಾಹಿತಿಗಳಿಗೆ ಮತ್ತು ಕನ್ನಡಪರ ಹೋರಾಟಗಾರರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಟಾಪ್ ನ್ಯೂಸ್

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Bengaluru: ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ

Bengaluru: ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ

2(1)

AI ಆರೋಗ್ಯ ರಕ್ಷಣೆಯ ವ್ಯವಸ್ಥೆಯಲ್ಲಿ ಸ್ವೀಕಾರದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆಯೇ?

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.