ಜವಳಿ ಪಾರ್ಕ್ ಸ್ಥಾಪನೆಗೆ ಸರ್ಕಾರಕ್ಕೆ ಒತ್ತಡ
Team Udayavani, Feb 25, 2022, 9:33 AM IST
ಕಲಬುರಗಿ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ ನಿರ್ಮಿಸಲು ಉದ್ದೇಶಿರುವ ಜವಳಿ ಪಾರ್ಕ್‌ನ್ನು ಕಲ್ಯಾಣ ಕರ್ನಾಟಕ ಭಾಗದ ಕೇಂದ್ರ ಸ್ಥಾನವಾದ ಕಲಬುರಗಿಯಲ್ಲೇ ಸ್ಥಾಪಿಸಬೇಕೆಂದು ಒತ್ತಾಯಿಸಿ ಶೀಘ್ರವೇ ರಾಜ್ಯ ಮತ್ತು ಕೇಂದ್ರ ಸರ್ಕಾರದ ಬಳಿಗೆ ನಿಯೋಗ ತೆರಳಲಾಗುತ್ತದೆ ಎಂದು ಹೈದ್ರಾಬಾದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಪ್ರಶಾಂತ ಮಾನಕರ್, ಗೌರವ ಕಾರ್ಯದರ್ಶಿ ಶರಣು ಪಪ್ಪಾ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಜವಳಿ ಪಾರ್ಕ್ ಸ್ಥಾಪನೆ ಮಾಡುವುದಾಗಿ ರಾಜ್ಯ ಸರ್ಕಾರ ಹೇಳಿದೆ. ಆದರೆ, ಕೇಂದ್ರ ಸರ್ಕಾರಕ್ಕೆ ಕಲಬುರಗಿ, ವಿಜಯಪುರ, ತುಮಕೂರು ಸೇರಿದಂತೆ ಮೂರು ಜಿಲ್ಲೆಗಳ ಹೆಸರು ಶಿಫಾರಸು ಮಾಡಲಾಗಿದೆ. ಇದರ ನಡುವೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಧಾರವಾಡಕ್ಕೆ ಯೋಜನೆ ತೆಗೆದುಕೊಂಡು ಹೋಗುವ ಪ್ರಯತ್ನದಲ್ಲಿದ್ದಾರೆ. ಆದ್ದರಿಂದ ಈ ಭಾಗದ ಸಂಸದರು, ಶಾಸಕರು ಯೋಜನೆ ಕೈತಪ್ಪದಂತೆ ಎಚ್ಚರವಹಿಸಬೇಕೆಂದು ಆಗ್ರಹಿಸಿದರು.
ಕಲ್ಯಾಣ ಕರ್ನಾಟಕ ಭಾಗಕ್ಕೆ ಕೇಂದ್ರ ಸರ್ಕಾರದಿಂದ ಈ ಹಿಂದೆ ಮಂಜೂರಾಗಿದ್ದ ಐಐಟಿ, ಏಮ್ಸ್ ಸೇರಿದಂತೆ ಹಲವು ಯೋಜನೆಗಳು ಕೈಬಿಟ್ಟು ಹೋಗಿವೆ. ಈಗ ಉದ್ದೇಶಿತ ಯೋಜನೆಯನ್ನಾದರೂ ಉಳಿಸಿಕೊಳ್ಳುವ ಅನಿವಾರ್ಯತೆಯಿದೆ. ಈ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಪ್ರತಿಯೊಬ್ಬ ಜನಪ್ರತಿನಿಧಿಯೂ ಕೇಂದ್ರ, ರಾಜ್ಯ ಸರ್ಕಾರದ ಬಳಿ ಗಟ್ಟಿ ಧ್ವನಿ ಎತ್ತಬೇಕಿದೆ. ಜಿಲ್ಲೆಯ ಹೊನ್ನಕಿರಣಗಿ-ಫಿರೋಜಾಬಾದ್ ಬಳಿ ಜವಳಿ ಪಾರ್ಕ್ ಸ್ಥಾಪನೆಗೆ ಬೇಕಾದ 1,551 ಎಕರೆ ಜಮೀನು ಲಭ್ಯವಿದೆ. ಭೀಮಾ ನದಿ ಸಮೀಪವಿದ್ದು, ನೀರಿನ ಸೌಲಭ್ಯವೂ ಇದೆ. ಅಲ್ಲದೇ, 33/132 ಕೆವಿಎ ವಿದ್ಯುತ್ಛಕ್ತಿಯೂ ಲಭ್ಯವಿದೆ ಇದೆ ಎಂದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಹತ್ತಿ ಬೆಳೆಯಲಾಗುತ್ತದೆ. ಆದರೆ, ಇಲ್ಲಿ ಹತ್ತಿ ಸಂಸ್ಕರಿಸಲು ಬೇಕಾಗುವ ಜವಳಿ ಉದ್ಯಮ ಇಲ್ಲದೇ ಇರುವುದರಿಂದ ಗುಜರಾತ್ ಸೇರಿದಂತೆ ಬೇರೆ ರಾಜ್ಯಗಳಿಗೆ ರಫ್ತು ಮಾಡಲಾಗುತ್ತದೆ. ನಮ್ಮಲ್ಲಿಯೇ ಈ ಜವಳಿ ಉದ್ಯಮ ಆರಂಭವಾದರೆ, ಹತ್ತಿ ಬೆಳೆಗಾರರಿಗೆ ಅನುಕೂಲವಾಗುತ್ತದೆ. ಅಲ್ಲದೇ ಅಂದಾಜು 50 ಸಾವಿರ ಜನರಿಗೆ ಉದ್ಯೋಗ ದೊರಕುವ ನಿರೀಕ್ಷೆಯಿದೆ. ಇಂತಹ ಉದ್ಯಮವನ್ನು ಹಿಂದುಳಿದ ಭಾಗದಲ್ಲಿ ಸ್ಥಾಪನೆ ಮಾಡಿದರೆ ಉದ್ಯೋಗ ಸೃಷ್ಟಿಯಾಲಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಎಚ್ ಕೆಸಿಸಿಐ ಪದಾಧಿಕಾರಿಗಳಾದ ರಾಮಚಂದ್ರ ಕೋಸಗಿ, ಮಹಾದೇವ ತಾವಳಗೇರಿ, ಅಮಿತ ಪರಮಾರ ಇದ್ದರು.
ಜಿಲ್ಲೆಯಲ್ಲಿ ಜವಳಿ ಪಾರ್ಕ್ ಸ್ಥಾಪನೆಗೆ ಅಗತ್ಯವಾದ ಜಮೀನು ಸೇರಿದಂತೆ ವಿವಿಧ ಸಂಪನ್ಮೂಲಗಳು ಇವೆ. ಆದ್ದರಿಂದ ಉದ್ದೇಶಿತ ಈ ಯೋಜನೆಯನ್ನು ಜಿಲ್ಲೆಗೆ ಘೋಷಿಸುವ ನಿಟ್ಟಿನಲ್ಲಿ ನಿರಂತರವಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಾಗುತ್ತದೆ. ವಿವಿಧ ಸಂಘ-ಸಂಸ್ಥೆಗಳು ಮತ್ತು ಸಂಘಟನೆಗಳೊಂದಿಗೆ ಸಭೆ ನಡೆಸಿ ಹೋರಾಟ ರೂಪಿಸಲಾಗುವುದು. -ಪ್ರಶಾಂತ ಮಾನಕರ್, ಅಧ್ಯಕ್ಷ, ಎಚ್‌ಕೆಸಿಸಿಐ
ಜಿಲ್ಲೆಯಿಂದ ಈಗಾಗಲೇ ಅನೇಕ ಯೋಜನೆಗಳು ಕೈತಪ್ಪಿ ಹೋಗಿವೆ. ಇದಕ್ಕೆ ಇಲ್ಲಿನ ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯೇ ಕಾರಣವಾಗಿದೆ. ಇದೇ ರೀತಿಯ ನಿರ್ಲಕ್ಷ್ಯವನ್ನು ಜವಳಿ ಪಾರ್ಕ್ ವಿಷಯದಲ್ಲಿ ಯಾವ ಜನಪ್ರತಿನಿಧಿಯೂ ಮಾಡುವಂತಿಲ್ಲ. ಇಲ್ಲದಿದ್ದರೇ 371 (ಜೆ)ನೇ ಕಲಂ ಜಾರಿ ಹಾಗೂ ಹೈಕೋರ್ಟ್ ವಿಭಾಗೀಯ ಪೀಠಕ್ಕಾಗಿ ನಡೆದ ಹೋರಾಟದಂತೆ ಇದಕ್ಕೂ ಹೋರಾಟ ಮಾಡಬೇಕಾಗುತ್ತದೆ. -ಶರಣು ಪಪ್ಪಾ, ಗೌರವ ಕಾರ್ಯದರ್ಶಿ, ಎಚ್‌ಕೆಸಿಸಿಐ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.