ಅಕ್ರಮ ಮದ್ಯ ಮಾರಾಟ ತಡೆಯಿರಿ
Team Udayavani, Feb 25, 2022, 10:00 AM IST
ಶಹಾಬಾದ: ತಾಲೂಕಿನ ಭಂಕೂರ ಜಿಲ್ಲಾ ಪಂಚಾಯತ್ ಕ್ಷೇತ್ರದಲ್ಲಿ ಬರುವ ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ, ಕಳ್ಳಭಟ್ಟಿ ಸಾರಾಯಿ, ಸೇಂದಿ ಮಾರಾಟ ತಡೆಯಬೇಕೆಂದು ಒತ್ತಾಯಿಸಿ ಗುರುವಾರ ಬಹುಜನ ಸಮಾಜ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಸುರೇಶ ವರ್ಮಾ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ಭಂಕೂರ ಜಿಲ್ಲಾ ಪಂಚಾಯಿತಿ ಕ್ಷೇತ್ರದಲ್ಲಿ ಬರುವ ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ, ಕಳ್ಳಭಟ್ಟಿ ಸಾರಾಯಿ, ಸೇಂದಿ ಮಾರಾಟ ನಡೆಯುತ್ತಿದೆ. ಭಂಕೂರ ಗ್ರಾಮದ ಓಣಿಗಳಲ್ಲಿ ಸುಮಾರು ದಿನಗಳಿಂದ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಅನಧಿಕೃತವಾಗಿ ಇಲ್ಲಿನ ಸ್ಥಳೀಯ ಬಾರ್‌ದವರು ಸರಬರಾಜು ಮಾಡುತ್ತಿದ್ದಾರೆ. ಆದ್ದರಿಂದ ಇಂತಹ ಬಾರ್‌ಗಳ ಪರವಾನಗಿ ರದ್ದು ಮಾಡಬೇಕು. ಈ ತಡೆಗೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಈಗಾಗಲೇ ದೇವನ ತೆಗನೂರ ಗ್ರಾಮದಲ್ಲಿ ಎರಡು ತಿಂಗಳಲ್ಲಿ ಇಬ್ಬರು ಯುವಕರು ಬಲಿಯಾಗಿದ್ದಾರೆ. ಅಲ್ಲದೇ ಆರ್ಥಿಕವಾಗಿ ಹಿನ್ನಡೆ ಉಂಟಾಗಿ, ಕುಟುಂಬಗಳು ಬೀದಿಗೆ ಬರುತ್ತಿವೆ. ಅಬಕಾರಿ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಬಹುಜನ ಸಮಾಜ ಪಕ್ಷದ ಅಧ್ಯಕ್ಷ ಶರಣಬಸಪ್ಪ ಸೂಗೂರ, ಕಿರಣಕುಮಾರ ಜಡಗಿಕರ್, ವಿಜಯಲಕ್ಷ್ಮೀ ವಗ್ಗನ್, ರಾಜಶೇಖರ ಪಗದವಾರ, ಅಜಗರ ಅಲಿ, ರವಿ ಪೂಜಾರಿ, ವಿಜಯ ಡಿಗ್ಗಿ, ಸುನೀಲ ಕಟ್ಟಿಮನಿ, ತಜಮಾಲ ಪಟೇಲ್, ಅಲ್ಯಾಣಿ ಅಲ್ಲೂರ, ಖಾಜಾ ಮೈನೋದ್ದಿನ್, ಅನಿಲ ಧನ್ನಾ, ಸಚಿನ್ ಹುಲಿ, ಸಿದ್ಧಮ್ಮ ಎಸ್. ದೇವನ, ಶಿವಕುಮಾರ ಯನಗುಂಟಿಕರ್ ಹಾಗೂ ಕಾರ್ಯಕರ್ತರು, ಮಹಿಳೆಯರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ
Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
MUST WATCH
ಹೊಸ ಸೇರ್ಪಡೆ
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.