ಹರ್ಷ ಕೊಲೆಗೆ ಬಳಸಿದ್ದು ಬೇರೆ ರಾಜ್ಯದ ಕಾರು! ವಿಡಿಯೋ ಕಾಲ್ ಮಾಡಿದವರ ಪತ್ತೆ ಮಾಡಿದ್ದೇವೆ!
ಶಿವಮೊಗ್ಗ ಎಸ್ ಪಿ ಲಕ್ಷ್ಮೀಪ್ರಸಾದ್ ಮಾಹಿತಿ
Team Udayavani, Feb 25, 2022, 1:18 PM IST
ಶಿವಮೊಗ್ಗ: ಹಿಂದೂ ಪರ ಸಂಘಟನೆ ಕಾರ್ಯಕರ್ತ ಹರ್ಷ ಕೊಲೆ ಮಾಡಲು ಆರೋಪಿಗಳು ಒಂದು ತಿಂಗಳಿನಿಂದಲೇ ಯೋಜನೆ ಹಾಕಿಕೊಂಡಿದ್ದರು. ಮಾತ್ರವಲ್ಲದೆ ಹತ್ಯೆಗೆ ಛತ್ತಿಸ್‌ಗಡ ನೋಂದಣಿಯ ಕಾರು ಬಳಕೆಯಾಗಿದ್ದು, ಕೊಲೆ ಮಾಡಿದ ಆರೋಪಿಗಳು ಇನ್ನೊಂದು ಕಾರು ಹಾಗೂ ಬೈಕ್ ಬಳಸಿ ಪರಾರಿಯಾಗಿದ್ದರು. ಕೃತ್ಯಕ್ಕೆ ಬಳಕೆಯಾಗಿದ್ದ ಈ ಮೂರು ವಾಹನಗಳನ್ನು ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹತ್ತು ಜನರನ್ನು ಬಂಧಿಸಲಾಗಿದೆ. ಕೊಲೆ ಮಾಡಲು ಹಾಗೂ ಕೊಲೆ ಮಾಡಿದ ಬಳಿಕ ತಪ್ಪಿಸಿಕೊಳ್ಳಲು ಬಳಸಿದ್ದ ವಾಹನಗಳನ್ನೂ ವಶಕ್ಕೆ ಪಡೆಯಲಾಗಿದೆ. ಬಂಧಿ ತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಇದೀಗ 10 ಆರೋಪಿಗಳನ್ನು ನ್ಯಾಯಾಂಗ ಬಂಧನದಿಂದ 11 ದಿನಗಳ ಕಾಲ ಪೊಲೀಸರು ವಶಕ್ಕೆ ಪಡೆದಿದ್ದು, ಇನ್ನಷ್ಟು ವಿಚಾರಣೆ ನಡೆಸಲಿದ್ದಾರೆ. ಆಗ ಮತ್ತಷ್ಟು ಜನರ ಬಂಧನವಾಗುವ ಸಾಧ್ಯತೆಯಿದೆ. ಆರೋಪಿಗಳಿಗೆ ಫಂಡಿಂಗ್ ಮಾಡಿದವರು, ಹರ್ಷನ ಕೊಲೆ ಮಾಡಲು ಕುಮ್ಮಕ್ಕು ನೀಡಿದವರನ್ನೂ ಬಂಧಿ ಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.
ಸೆಕೆಂಡ್ ಹ್ಯಾಂಡ್ ಕಾರು
ಆರೋಪಿಗಳು ಹರ್ಷ ಕೊಲೆಗಾಗಿ ಛತ್ತೀಸ್‌ಗಡ ನೋಂದಣಿಯ ಕಾರನ್ನು ಬಳಸಿಕೊಂಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ನಾವು ಸೆಕೆಂಡ್ ಹ್ಯಾಂಡ್ ಕಾರನ್ನು ಸೇಲ್ ಮಾಡುತ್ತಿದ್ದೆವು ಎಂದು ಆರೋಪಿಗಳು ಹೇಳುತ್ತಿದ್ದಾರೆ. ಅಕ್ಕಪಕ್ಕದ ರಾಜ್ಯದ ಕಾರುಗಳನ್ನು ತಂದು ಇಲ್ಲಿ ಮಾರಾಟ ಮಾಡುವುದು ಸರಿ. ಆದರೆ ಛತ್ತೀಸಗಡ ಕಾರನ್ನು ಇವರು ಎಲ್ಲಿಂದ ಖರೀದಿಸಿ ತಂದರು ಎನ್ನುವುದು ಪೊಲೀಸರಿಗೆ ಯಕ್ಷ ಪ್ರಶ್ನೆಯಾಗಿದೆ. ಇದೇ ಕಾರಣದಿಂದಲೇ ಕಾರಿನ ಮಾಲಕರ ಪತ್ತೆಗೆ ಪೊಲೀಸರು ಮುಂದಾಗಿದ್ದು, ತನಿಖೆ ಬಳಿಕ ಮತ್ತಷ್ಟು ವಿವರ ಸಿಗಲಿದೆ.
ಇದನ್ನೂ ಓದಿ :ರಷ್ಯಾ-ಉಕ್ರೇನ್ ನಡುವೆ ಯುದ್ಧ: ಮಾಹಿತಿ ಕಲೆ ಹಾಕಲು ಕಂಟ್ರೋಲ್ ರೂಂ ಸ್ಥಾಪನೆ
ವೀಡಿಯೋ ಕಾಲ್ ಮಾಡಿದ್ದ
ಯುವತಿಯರ ವಿವರ ಪತ್ತೆ?
ಹರ್ಷ ಸಾಯುವ ಕೆಲವೇ ನಿಮಿಷಗಳ ಹಿಂದೆ ವೀಡಿಯೋ ಕರೆ ಮಾಡಿದ್ದ ಯುವತಿಯರ ವಿವರಗಳು ಪೊಲೀಸರಿಗೆ ದೊರಕಿದೆ. ಈ ಪ್ರಕರಣದಲ್ಲಿ ಆ ಯುವತಿಯರ ಪಾತ್ರ ಇಲ್ಲ ಎನ್ನುವುದು ಮೇಲ್ನೋಟಕ್ಕೆ ತಿಳಿದುಬಂದಿದೆ. ಕರೆ ಮಾಡಿದವರು ಸೋಷಿಯಲ್ ಮೀಡಿಯಾದಲ್ಲಿ ಹರ್ಷ ´ೋಟೋಗಳನ್ನು ನೋಡಿ ಸ್ನೇಹ ಬೆಳೆಸಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ. ದುರಾದೃಷ್ಟಕ್ಕೆ ಅದೇ ಗಳಿಗೆಯಲ್ಲಿ ಹರ್ಷ ಹತ್ಯೆ ಆಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಎಲ್ಲ ಬೆಳವಣಿಗೆ ಮಧ್ಯೆ ಹರ್ಷ ಮೊಬೈಲ್ ಮಾತ್ರ ಸಿಕ್ಕಿಲ್ಲ ಎನ್ನುತ್ತಿರುವುದು ಕುತೂಹಲ ಮೂಡಿಸಿದೆ. ಹೀಗಾಗಿ ಪೊಲೀಸರು ಆತನ ಮೊಬೈಲ್‌ಗೆ ಬಂದಿರುವ ಕರೆಗಳು ಹಾಗೂ ಚಾಟಿಂಗ್ ವಿವರ ಪಡೆಯಲು ಪ್ರಯತ್ನಿಸುತ್ತಿದ್ದಾರೆ.
ಫೆ. 28ರ ವರೆಗೂ ನಿಷೇಧಾಜ್ಞೆ
ಹರ್ಷ ಅಂತಿಮ ಯಾತ್ರೆ ವೇಳೆ ನಡೆದ ಕಲ್ಲು ತೂರಾಟಕ್ಕೆ ಸಂಬಂಧಿಸಿ ಗಲಾಟೆ ನಡೆಸಿದವರ ಪತ್ತೆಗೆ ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ. ಜತೆಗೆ ಶಿವಮೊಗ್ಗದಲ್ಲಿ ನಡೆದ ಗಲಭೆ ವೇಳೆ ಪೊಲೀಸರಿಗೆ ಮಚ್ಚು ತೋರಿಸಿದವರನ್ನು ಪತ್ತೆ ಮಾಡಿರುವ ಪೊಲೀಸರು ಅವರ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ. ಶನಿವಾರದಿಂದ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಲಾಗಿದ್ದರೂ ಜಿಲ್ಲೆಯಲ್ಲಿ ಇನ್ನೂ ಎರಡು ದಿನ ನಿಷೇಧಾಜ್ಞೆ ಮುಂದುವರೆಸಲಾಗಿದೆ. ಫೆ. 28ರ ಬೆಳಗ್ಗೆ 9 ಗಂಟೆವರೆಗೆ ನಿಷೇಧಾಜ್ಞೆ ವಿಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ
Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ
ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?
Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ
MUST WATCH
ಹೊಸ ಸೇರ್ಪಡೆ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.