ಉಳ್ಳಾಲದಲ್ಲಿ ಹಿಜಾಬ್ ವಿವಾದ: ವಿದ್ಯಾರ್ಥಿಗಳಿಂದ ಪ್ರತಿಭಟನೆ
Team Udayavani, Feb 25, 2022, 1:35 PM IST
ಉಳ್ಳಾಲ: ಇಲ್ಲಿನ ಖಾಸಗಿ ಕಾಲೇಜಿನಲ್ಲಿ ಶಿಕ್ಷಣ ಇಲಾಖೆಯ ಆದೇಶದಂತೆ ಹಿಜಾಬ್ ಧರಿಸಬೇಡಿ ಎಂದ ಕಾಲೇಜಿನ ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ಸೂಚನೆ ನೀಡಿರುವುದಕ್ಕೆ ವಿದ್ಯಾರ್ಥಿಗಳು ಪ್ರತಿಭಟಿಸಿ, ಕಾಲೇಜು ಆಡಳಿತ ಮಂಡಳಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ
ಶಿಕ್ಷಣ ಇಲಾಖೆಯ ಆದೇಶದಂತೆ ಕಾಲೇಜು ಆಡಳಿತ ವಿದ್ಯಾರ್ಥಿಗಳಿಗೆ ಹಾಗೂ ಉಪನ್ಯಾಸಕರಿಗೆ ಹಿಜಾಬ್ ತೆಗೆದು ಬರುವಂತೆ ಸೂಚನೆ ನೀಡಿದೆ. ಈ ವೇಳೆ ವಿದ್ಯಾರ್ಥಿಗಳು ಕೋರ್ಟ್ ಆದೇಶ ಬರಲಿ ಮತ್ತೆ ನೋಡೋಣ. ಅಲ್ಲಿಯವರೆಗೆ ಹಿಜಾಬ್ ಧರಿಸುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ.
ನಮಗೆ ಟಿ.ಸಿ ಕೊಡಿ. ಇಲ್ಲವೇ ಕೋರ್ಟ್ ಆದೇಶ ಬರುವವರೆಗೆ ರಜೆ ಕೊಡಿ ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.
ಇದನ್ನೂ ಓದಿ:ದಾವಣಗೆರೆ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಮೋಸ ಮಾಡಿ ಗೆದ್ದಿದೆ: ಶಾಮನೂರು ಶಿವಶಂಕರಪ್ಪ ಆಕ್ರೋಶ
ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿದ್ದು, ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆದಿದೆ.
ಈ ಸಂದರ್ಭ ಶಾಸಕ ಯುಟಿ ಖಾದರ್ ಕಾಲೇಜಿಗೆ ಭೇಟಿ ನೀಡಿ, ಕಾಲೇಜಿನ ಆಡಳಿತ ಮಂಡಳಿಯೊಂದಿಗೆ ಸಭೆ ನಡೆಸಿ, ವಿದ್ಯಾರ್ಥಿಗಳ ಭವಿಷ್ಯ ಮುಖ್ಯ. ವಿದ್ಯಾಭ್ಯಾಸ ಹಾಳಾಗಬಾರದು. ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳಳಬೇಕು ಎಂದರು.
ಎಲ್ಲವೂ ಸರಿ ಹೋಗುವ ವರೆಗೆ ಪಿಯು ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.