ಹಿಜಾಬ್ ವಿವಾದ: ವಾದ ಮುಕ್ತಾಯ, ಆದೇಶವನ್ನು ಕಾಯ್ದಿರಿಸಿದ ಹೈಕೋರ್ಟ್
Team Udayavani, Feb 25, 2022, 4:54 PM IST
ಬೆಂಗಳೂರು: ಇಡೀ ರಾಷ್ಟ್ರದಲ್ಲಿ ಸುದ್ದಿಯಾಗಿ, ಪ್ರಪಂಚದ ಗಮನೆ ಸೆಳೆದು ರಾಜ್ಯಾದ್ಯಂತ ಕಳೆದರಡು ತಿಂಗಳಿಂದ ಸಂಘರ್ಷದ ವಾತಾವರಣ ಹುಟ್ಟುಹಾಕಿರುವ ಹಿಜಾಬ್ ವಿವಾದಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧಿಸಿರುವ ಕ್ರಮ ಹಾಗೂ ಈ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ 11ನೇ ದಿನದ ವಿಚಾರಣೆಯನ್ನು ಶುಕ್ರವಾರ ಪೂರ್ಣಗೊಳಿಸಿರುವ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ಎಸ್. ದೀಕ್ಷಿತ್ ಹಾಗೂ ನ್ಯಾ. ಖಾಜಿ ಜೈಬುನ್ನಿಸಾ ಅವರಿದ್ದ ತ್ರಿಸದಸ್ಯ ನ್ಯಾಯಪೀಠ ತೀರ್ಪು ಕಾಯ್ದಿರಿಸುವುದಾಗಿ ಹೇಳಿತು.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಲ್ಲಿಕೆಯಾಗಿದ್ದ 10ಕ್ಕೂ ಹೆಚ್ಚು ಮುಖ್ಯ ಅರ್ಜಿಗಳು 25ಕ್ಕೂ ಹೆಚ್ಚು ಮಧ್ಯಂತರ ಅರ್ಜಿಗಳನ್ನು ಸತತ 11 ದಿನಗಳ ಕಾಲ 25 ತಾಸುಗಳಿಗೂ ಹೆಚ್ಚು ಸಮಯ ಹೈಕೋರ್ಟ್ ವಿಚಾರಣೆ ನಡೆಸಿದೆ. ಆರಂಭದ ವಾದ-ಪ್ರತಿವಾದದ ಬಳಿಕ ಶುಕ್ರವಾರ ಉಭಯ ಕಡೆಯ ವಕೀಲರ ಅಂತಿಮ ವಾದಗಳನ್ನು ನ್ಯಾಯಪೀಠ ಶುಕ್ರವಾರ ಆಲಿಸಿತು.
ಅರ್ಜಿದಾರರು ಅಲ್ಲದೇ ಸರ್ಕಾರ, ಕಾಲೇಜು ಅಭಿವೃದ್ಧಿ ಸಮಿತಿ, ಶಿಕ್ಷಕರು ಸೇರಿದಂತೆ ಉಳಿದ ಪ್ರತಿವಾದಿಗಳ ಪರವಾಗಿ ಒಟ್ಟು 25ಕ್ಕೂ ಹೆಚ್ಚು ವಕೀಲರು ತಮ್ಮ ವಾದಗಳನ್ನು ಮಂಡಿಸಿದ್ದಾರೆ. ಸರ್ಕಾರ ಮತ್ತು ಪ್ರತಿವಾದಿಗಳ ವಾದಗಳಿಗೆ ಗುರುವಾರ ದೇವದತ್ ಕಾಮತ್ ಪ್ರತಿವಾದ ಮಂಡಿಸಿದ್ದರು. ಶುಕ್ರವಾರ ಹಿರಿಯ ನ್ಯಾಯವಾದಿಗಳಾದ ಪ್ರೊ. ರವಿವರ್ಮ ಕುಮಾರ್, ಯೂಸೂಫ್ ಮುಚಾಲ ತಮ್ಮ ಪ್ರತಿವಾದಗಳನ್ನು ಪೂರ್ಣಗೊಳಿಸಿದರು.
ಉಡುಪಿಯ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನಲ್ಲಿ ಹಿಜಾಬ್ ನಿರ್ಬಂಧಿಸಿರುವುದನ್ನು ಪ್ರಶ್ನಿಸಿ ಕಾಲೇಜಿನ ಐವರು ವಿದ್ಯಾರ್ಥಿನಿಯರು, ಸಮವಸ್ತ್ರದ ಜೊತೆಗೆ ಹಿಜಾಬ್ ಧರಿಸಿ ತರಗತಿಗಳಿಗೆ ಹಾಜರಾಗಲು ಅನುಮತಿ ನೀಡುವಂತೆ ಕೋರಿ ಕುಂದಾಪುರದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಅರ್ಜಿಗಳನ್ನು ಸಲ್ಲಿಸಿದ್ದರು. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧಿಸಿ ರಾಜ್ಯ ಸರ್ಕಾರ ಫೆ.5ರಂದು ಹೊರಡಿಸಿರುವ ಆದೇಶವನ್ನೂ ಅರ್ಜಿಗಳಲ್ಲಿ ಪ್ರಶ್ನಿಸಲಾಗಿದೆ.
ಏಕಸದಸ್ಯ ಪೀಠದಲ್ಲಿ ವಿಚಾರಣೆ:
ಈ ಅರ್ಜಿಗಳನ್ನು ಮೊದಲು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತ್ತು. ಎರಡು ದಿನ ವಾದ ಆಲಿಸಿದ್ದ ನ್ಯಾಯಪೀಠ, ಇದರಲ್ಲಿ ಸಾಂವಿಧಾನಿಕ ವಿಚಾರಗಳು ಅಡಕವಾಗಿರುವುದರಿಂದ ವಿಸ್ತೃತ ನ್ಯಾಯಪೀಠ ವಿಚಾರಣೆ ನಡೆಸುವುದು ಸೂಕ್ತ ಎಂದು ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾಯಿಸಿದ್ದರು. ಬಳಿಕ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ವಿಸ್ತೃತ ನ್ಯಾಯಪೀಠ ರಚನೆಯಾಗಿತ್ತು. ಫೆ.10ರಿಂದ ವಿಸ್ತೃತ ನ್ಯಾಯಪೀಠ ಅರ್ಜಿಗಳ ವಿಚಾರಣೆ ಆರಂಭಿಸಿತ್ತು.
ಮಧ್ಯಂತರ ಆದೇಶ:
ಹಿಜಾಬ್ ವಿವಾದ ಕುರಿತಂತೆ ಸಲ್ಲಿಕೆಯಾಗಿರುವ ಎಲ್ಲಾ ಅರ್ಜಿಗಳ ಕುರಿತ ಮುಂದಿನ ಆದೇಶವರೆಗೆ ಧರ್ಮ ಹಾಗೂ ನಂಬಿಕೆಯನ್ನು ಲೆಕ್ಕಿಸದೆ ಎಲ್ಲಾ ವಿದ್ಯಾರ್ಥಿಗಳು ತರಗತಿಯಲ್ಲಿ ಕೇಸರಿ ಶಾಲು, ಶಿರವಸ್ತ್ರ, ಹಿಜಾಬ್ ಮತ್ತು ಧಾರ್ಮಿಕ ಬಾವುಟಗಳನ್ನು ಧರಿಸುವುದನ್ನು ನಿರ್ಬಂಧಿಸಲಾಗಿದೆ. ಕಾಲೇಜು ಅಭಿವೃದ್ಧಿ ಸಮಿತಿಯು ವಿದ್ಯಾರ್ಥಿಗಳಿಗೆ ವಸ್ತ್ರ ಸಂಹಿತೆ ಮತ್ತು ಸಮವಸ್ತ್ರ ನಿಗದಿಪಡಿಸಿರುವ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಈ ಆದೇಶವನ್ನು ಸೀಮಿತಗೊಳಿಸಲಾಗಿದೆ ಎಂದು ವಿಸ್ತ್ರƒತ ನ್ಯಾಯಪೀಠ ಫೆ.11ರಂದು ಮಧ್ಯಂತರ ಆದೇಶ ಹೊರಡಿಸಿತ್ತು.
ಧಾರ್ಮಿಕ ಸ್ವಾತಂತ್ರ್ಯ ನಿರ್ಬಂಧಿಸುವಂತಿಲ್ಲ.
ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಮೊಹಮ್ಮದ್ ತಾಹಿರ್ “”ಹಿಜಾಬ್‌ಗ ಅವಕಾಶ ಕೊಟ್ಟರೆ, ಹಿಜಾಬ್ ಧರಿಸದ ಮುಸ್ಲಿಂರಿಗೆ ತೊಂದರೆಯಾಗುತ್ತೆಂದು ಅಡ್ವೋಕೇಟ್ ಜನರಲ್ ವಾದಿಸಿದ್ದಾರೆ. ಆದರೆ ಇಸ್ಲಾಂನಲ್ಲಿ ನಮಾಜ್ ಕಡ್ಡಾಯವಾಗಿದೆ. ಹಾಗೆಂದು ನಮಾಜ್ ಮಾಡದವರನ್ನು ಮುಸಲ್ಮಾನರಲ್ಲವೆಂದು ಹೇಳಲು ಸಾಧ್ಯವಿಲ್ಲ. ನಮ್ಮ ಶಿಕ್ಷಣ ಸಂಸ್ಥೆಗಳು ನಿಜಕ್ಕೂ ಜಾತ್ಯಾತೀತವಾಗಿವೆಯೇ. ಸರಸ್ವತಿ ಪೂಜೆ, ಆಯುಧ ಪೂಜೆಗಳು ನಡೆಯುತ್ತವೆ ಈ ಪ್ರಶ್ನೆ ಬಂದಾಗ ಯಾರ ಹಕ್ಕುಗಳಿಗೂ ಅಡ್ಡಿಯಾಗದ ಧಾರ್ಮಿಕ ಆಚರಣೆಗಳಿಗೆ ಅವಕಾಶ ನೀಡಬಹುದು ಎಂದು ಕೋರ್ಟ್ ಹೇಳಿದೆ. ಹಿಜಾಬ್ ನಂತಹ ಬೇರೆಯವರಿಗೆ ತೊಂದರೆಯಾಗದ ಸಂಪ್ರದಾಯಗಳಿಗೆ ಅವಕಾಶ ನೀಡಬೇಕು. ಜಾತ್ಯಾತೀತೆ ಹೆಸರಲ್ಲಿ ಏಕರೂಪತೆ ತರುವುದರಿಂದ ಅಲ್ಪಸಂಖ್ಯಾತರಿಗೆ ಸಮಸ್ಯೆಯಾಗಲಿದೆ. ನಾಳೆ ಮಾಲ್‌ಗಳೂ ಜಾತ್ಯಾತೀತ ಸ್ಥಳಗಳೆಂದು ಘೋಷಿಸಿದರೆ, ನಮ್ಮ ಧಾರ್ಮಿಕ ಸ್ವಾತಂತ್ರ್ಯ ಮನೆಯೊಳಗೆ ಸೀಮಿತವಾಗುವುದಿಲ್ಲವೇ. ಹಾಗಾಗಿ ಹಿಜಾಬ್‌ಗ ಅವಕಾಶ ನೀಡಬೇಕು”ಎಂದು ಕೋರಿದರು.
ಮಾಧ್ಯಮಗಳ ವಿರುದ್ಧದ ಅರ್ಜಿ ವಜಾ
ಹಿಜಾಬ್ ಧರಿಸಿರುವ ಹೆಣ್ಣು ಮಕ್ಕಳು ಮತ್ತು ಶಿಕ್ಷಕಿಯರ ವಿಡಿಯೋ ಹಾಗೂ ಫೋಟೋ ತೆಗೆದು ಪ್ರಸಾರ ಮಾಡದಂತೆ ಮಾಧ್ಯಮಗಳನ್ನು ನಿರ್ಬಂಧಿಸಬೇಕು ಎಂದು ವಕೀಲ ಎಸ್. ಬಾಲಕೃಷ್ಣನ್ ಮನವಿ ಮಾಡಿದರು. ಮಾಧ್ಯಮಗಳಲ್ಲಿ ವಿದ್ಯಾರ್ಥಿನಿಯರನ್ನು ಅವಮಾನಿಸಿ, ಅಪರಾಧಿಗಳಂತೆ ತೋರಿಸಲಾಗುತ್ತಿದೆ. ಜತೆಗೆ, ಇದರಲ್ಲಿ ಅವರ ಖಾಸಗಿತನದ ವಿಚಾರವೂ ಇದೆ. ಕಾಲೇಜುಗಳ ಮುಂದೆ ಶಿಕ್ಷಕಿಯರು ಹಾಗೂ ವಿದ್ಯಾರ್ಥಿನಿಯರು ಹಿಜಾಬ್/ಬುರ್ಕಾ ತೆಗೆಯುವುದನ್ನು ವಿಡಿಯೋ ಹಾಗೂ ಫೋಟೋ ತೆಗೆದು ಮಾಧ್ಯಮಗಳಲ್ಲಿ ಪ್ರಸಾರ ಮಾಡಲಾಗುತ್ತಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಿಡಿಯನ್ನು ನ್ಯಾಯಾಲಯಕ್ಕೆ ಒದಗಿಸಲಾಗಿದೆ ಎಂದರು.
ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯರೇ ಅರ್ಜಿ ಸಲ್ಲಿಸಿರುವಾಗ ನಿಮ್ಮ ಆಕ್ಷೇಪಣೆಗಳನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಡಿ ಪರಿಗಣಿಸಲು ಸಾಧ್ಯವಿಲ್ಲ ಎಂದ ನ್ಯಾಯಪೀಠ, ಹಾಗೊಂದು ವೇಳೆ, ನಿರ್ದಿಷ್ಟ ವ್ಯಕ್ತಿ ಅಥವಾ ಬೇರೆ ಯಾರಿಂದಲಾದರೂ ಸಮಸ್ಯೆಯಾಗಿದ್ದರೆ, ತೊಂದರೆಗೊಳಗಾದ ವ್ಯಕ್ತಿಗಳು ಸೂಕ್ತ ಪ್ರಾಧಿಕಾರದ ಮುಂದೆ ಮನವಿ ಸಲ್ಲಿಸಿ ಪರಿಹಾರ ಪಡೆದುಕೊಳ್ಳಬಹುದು. ಈ ವಿಚಾರದಲ್ಲಿ ನ್ಯಾಯಾಲಯ ಯಾವುದೇ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿ, ಅರ್ಜಿ ವಜಾಗೊಳಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.