ತುಂಬಿದ ಚರಂಡಿ; ದಿಢೀರ್ ಹೆದ್ದಾರಿ ಬಂದ್-ಆಕ್ರೋಶ
Team Udayavani, Feb 25, 2022, 5:49 PM IST
ಮುದಗಲ್ಲ: ರಾಯಚೂರು-ಬೆಳಗಾವಿ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ ವಾರ್ಡ್ ನಂ.7ರ ನಿವಾಸಿಗಳು ಚರಂಡಿ ಸ್ವತ್ಛಗೊಳಿಸದ್ದರಿಂದ ಸೊಳ್ಳೆಕಾಟಕ್ಕೆ ಬೇಸತ್ತು ರಾಯಚೂರು-ಬೆಳಗಾವಿ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟಿಸಿ ಪುರಸಭೆ ಮುಖ್ಯಾಧಿಕಾರಿ ಹಾಗೂ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ವಾರ್ಡ್ ನಂ.7 ಹನುಮಂತ ದೇವರ ಗುಡಿ ಮುಂಭಾಗದಲ್ಲಿ ರಾಜ್ಯ ಹೆದ್ದಾರಿ ಅಭಿವೃದ್ಧಿ ಹಿನ್ನೆಲೆಯಲ್ಲಿ ನಿರ್ಮಿಸಿದ ಚರಂಡಿಗೆ ಸಂಪರ್ಕ ಕಲ್ಪಿಸದೇ ಹಳೇ ಚರಂಡಿಯಲ್ಲಿ ಪುರಸಭೆ ಮುಂದಿರುವ ಮೂತ್ರಾಲಯ ಹಾಗೂ ಶೌಚಾಲಯ ನೀರು ಹರಿದು ಹಳೇ ಚರಂಡಿಯಲ್ಲಿ ಕಳೆದ ನಾಲ್ಕಾರು ತಿಂಗಳಿಂದ ಅದರಲ್ಲಿಯೇ ಸಂಗ್ರಹವಾಗಿದೆ. ಇದು ಅಲ್ಲಿನ ನಿವಾಸಿಗೆ ತೊಂದರೆಯಾಗಿದೆ. ಹೀಗಾಗಿ ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ ಎಂದು ಆಕ್ರೋಶಗೊಂಡು ಏಕಾಏಕಿ ಒಂದು ಗಂಟೆ ಕಾಲ ಹೆದ್ದಾರಿ ಬಂದ್ ಮಾಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪಿಎಸೈ ಡಾಕೇಶ ಹಾಗೂ ಸಿಬ್ಬಂದಿ ಆಗಮಿಸಿ ಪ್ರತಿಭಟನಾಕಾರರ ಮನವೊಲಿಸುವಲ್ಲಿ ಯಶಸ್ವಿಯಾದರು. ಅಷ್ಟಾದರೂ ಮುಖ್ಯಾಧಿಕಾರಿಗಳ ಅನುಪಸ್ಥಿತಿಯಲ್ಲಿ ನೈರ್ಮಲ್ಯ ನಿರೀಕ್ಷಕಿ ಆರೀಫುನ್ನಿಸಾಬ ಆಗಮಿಸಿ ಒಂದು ಗಂಟೆಯಲ್ಲಿಯೇ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿ ಹಳೇ ಚರಂಡಿ ಮುಚ್ಚಿಸಿ ಜನರ ಸಮಸ್ಯೆಗೆ ಸ್ಪಂದಿಸಿದರು.
ಈ ವೇಳೆ ಭೀಮಣ್ಣ ಉಪ್ಪಾರ, ಲಿಂಗಪ್ಪ ಉಪ್ಪಾರ, ರಾಮು ಉಪ್ಪಾರ, ಶಂಕರ, ರಾಮಣ್ಣ ಉಪ್ಪಾರ, ಅಮೀನ ನದಾಫ್, ಆನಂದ ಮಡಿವಾಳ, ಶರಣು ಹೂಗಾರ, ಹೇಮಂತ ಪಾಟೀಲ್ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.