ಕನ್ನಡ ವಿಶ್ವದ ಪ್ರಾಚೀನ ಭಾಷೆ

Team Udayavani, Feb 25, 2022, 5:55 PM IST

23kannada

ರಾಯಚೂರು: ವಿಶ್ವದಲ್ಲಿ ಸಾಹಿತ್ಯ ಇನ್ನೂ ಆರಂಭಿಕ ಹಂತದಲ್ಲಿರುವಾಗ ಕನ್ನಡ ನೆಲದ ಸಾಹಿತ್ಯ ಪ್ರೌಢಾವಸ್ಥೆಗೆ ತಲುಪಿದ್ದನ್ನು ನಮ್ಮ ಇತಿಹಾಸದ ದಾಖಲೆಗಳು ಸಾರಿ ಹೇಳುತ್ತವೆ ಎಂದು ಸರ್ಕಾರಿ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ| ದಸ್ತಗೀರ್‌ಸಾಬ್‌ ದಿನ್ನಿ ತಿಳಿಸಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಮಾತೃ ಭಾಷಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಕನ್ನಡ ಭಾಷೆಗೆ ಎರಡೂವರೆ ಸಾವಿರ ವರ್ಷಕ್ಕೂ ಹೆಚ್ಚು ಇತಿಹಾಸವಿದೆ. ಪ್ರಾಚೀನ ಕವಿತೆಗಳಲ್ಲಿ ಕನ್ನಡ ನುಡಿ-ನೆಲದ ಬಗ್ಗೆ ಹೊಗಳಿಕೆ ಹಾಗೂ ಹಿರಿಮೆ ಮಾತುಗಳಿವೆ ಎಂದರೆ ಕನ್ನಡ ಸಾಹಿತ್ಯದ ಮಹತ್ವ ಎಂಥದ್ದು ಎಂದು ತಿಳಿಯುತ್ತದೆ. ನಮ್ಮ ನೆಲದ ಭಾಷೆ ಹಾಗೂ ಹಿರಿಮೆ ಅರಿಯಲು, ಮುಂದಿನ ಜನಾಂಗಕ್ಕೆ ತಲುಪಿಸಲು ಭಾಷಾ ದಿವಸ್‌ ಆಚರಣೆ ಸಹಕಾರಿ. ಇಂತಹ ಕಾರ್ಯಕ್ರಮ ಆಚರಣೆಗೆ ಮುಂದಾದ ಕೇಂದ್ರ ಸರ್ಕಾರದ ನಡೆ ಪ್ರಶಂಸಾರ್ಹ ಎಂದರು.

ಕಾಲೇಜಿನ ಪ್ರಾಚಾರ್ಯ ಡಾ| ಯಂಕಣ್ಣ ಮಾತನಾಡಿ, ಕನ್ನಡ ನುಡಿ ಬಹಳ ಸರಳ. ಅದನ್ನು ಸುಲಿದ ಬಾಳೆಹಣ್ಣು ಎಂದು ಕವಿಗಳು ಕರೆದಿದ್ದಾರೆ. ಅಗಾಧ ಜ್ಞಾನ ಹಾಗೂ ಸದಭಿರುಚಿ ಸಾಹಿತ್ಯ ಹೊಂದಿರುವ ಕನ್ನಡ ಭಾಷಾ ಸಾಹಿತ್ಯ ಯಾವ ಪಾಶ್ಚಾತ್ಯ ಸಾಹಿತ್ಯಕ್ಕೂ ಕಡಿಮೆ ಏನಿಲ್ಲ. ಹಾಗೆ ನೋಡಿದರೆ ಹಿರಿಯಣ್ಣ ಸ್ಥಾನದಲ್ಲಿ ಕನ್ನಡ ನಿಲ್ಲುತ್ತದೆ ಎಂದು ಬಣ್ಣಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಸಾಂಸ್ಕೃತಿಕ ವಿಭಾಗದ ಸಂಚಾಲಕ ಹಾಗೂ ಕನ್ನಡ ಉಪನ್ಯಾಸಕ ಮಹಾದೇವಪ್ಪ, ಸಮಾಜಶಾಸ್ತ್ರ ವಿಭಾಗದ ಡಾ| ಜೆ.ಎಲ್‌. ಈರಣ್ಣ, ಐಕ್ಯುಎಸಿ ಸಂಚಾಲಕ ಮಹಾಂತೇಶ ಅಂಗಡಿ, ಸಹ ಸಂಚಾಲಕಿ ಇಶ್ರತ್‌ ಬೇಗಂ, ಸೈಯದ್‌ ಮಿನಾಜ್‌, ಉಪನ್ಯಾಸಕರಾದ ಆಯೇಷಾ ಸುಲ್ತಾನಾ, ಸುಜಾತಾ ಮಾಕಲ್‌, ಚಂದ್ರಶೇಖರ ಸಜ್ಜನ, ರಾಜಶೇಖರ್‌, ರವಿ ಸೇರಿದಂತೆ ಇತರರಿದ್ದರು. ಆ ಪ್ರಯುಕ್ತ ಕಾಲೇಜಿನಲ್ಲಿ ಹಲವು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು

ಟಾಪ್ ನ್ಯೂಸ್

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ

Naxaliam-End

Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

Horoscope: ಈ ರಾಶಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

Horoscope: ಈ ರಾಶಿಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

Karnataka: ವಿದ್ಯುತ್‌ ದರದಂತೆ ವರ್ಷವೂ ಬಸ್‌ ಯಾನ ದರ ಹೆಚ್ಚಳ?

CKM-darga

Dispute: ಚಿಕ್ಕಮಗಳೂರಲ್ಲಿ ತಾರಕಕ್ಕೇರಿದ ದರ್ಗಾ ವಿವಾದ: ಬಿಗು ಪರಿಸ್ಥಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichuru-Rims

Raichuru: ರಿಮ್ಸ್‌ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ

ಮುಂದಿನ ಅವಧಿಗೆ ನಾನೇ ಸಿಎಂ ಅಭ್ಯರ್ಥಿ: ಸತೀಶ್ ಜಾರಕಿಹೊಳಿ

Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Raichur: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ

Raichur: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ

Raichuru-hospi

ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ

Naxaliam-End

Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

Horoscope: ಈ ರಾಶಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

Horoscope: ಈ ರಾಶಿಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.