ನಾಳೆಯಿಂದ ಬೆಳಗಾವಿಯಲ್ಲಿ ಭಾರತ-ಜಪಾನ್ ಮಹತ್ವದ ಜಂಟಿ ಸೇನಾಭ್ಯಾಸ
Team Udayavani, Feb 26, 2022, 11:11 AM IST
ಹೊಸದಿಲ್ಲಿ: ಕರ್ನಾಟಕದ ಬೆಳಗಾವಿಯಲ್ಲಿ ಫೆ.27ರಿಂದ ಮಾ. 10ರ ವರೆಗೆ ಭಾರತ ಮತ್ತು ಜಪಾನ್ ವಾರ್ಷಿಕ ಜಂಟಿ ಸೇನಾಭ್ಯಾಸ ನಡೆಸಲಿವೆ.
ವಿವಿಧ ದೇಶಗಳೊಂದಿಗೆ ಭಾರತ ಸೇನಾ ತರಬೇತಿ ಅಭ್ಯಾಸವನ್ನು ನಡೆಸುತ್ತಾ ಬಂದಿದ್ದು ಅದರಂತೆ ಈ ಬಾರಿ ಜಪಾನ್ ಜತೆಗೂಡಿ ಸೇನಾಭ್ಯಾಸ ನಡೆಸಲಿದೆ. ಸದ್ಯದ ಜಾಗತಿಕ ಸನ್ನಿವೇಶದಲ್ಲಿ ಉಭಯ ದೇಶಗಳು ಭದ್ರತಾ ಸವಾಲುಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಈ ಜಂಟಿ ಸೇನಾಭ್ಯಾಸ ಮಹತ್ವದ್ದು ಎಂದು ರಕ್ಷಣಾ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಶುಕ್ರವಾರ ಜಪಾನ್ ಸೇನೆ ಬೆಳಗಾವಿಗೆ ಆಗಮಿಸಿದ್ದು ರವಿವಾರ ಆರಂಭಗೊಳ್ಳಲಿರುವ “ಧರ್ಮ ಗಾರ್ಡಿಯನ್’ ಸೇನಾಭ್ಯಾಸದಲ್ಲಿ ಪಾಲ್ಗೊಳ್ಳಲಿದೆ. ಈ ವೇಳೆ ಎರಡೂ ದೇಶಗಳ ಯೋಧರು ಅರಣ್ಯ, ಅರೆ ನಗರ ಮತ್ತು ನಗರ ಪ್ರದೇಶದಲ್ಲಿ ಕೈಗೊಳ್ಳಲಾಗುವ ಸೇನಾ ಕಾರ್ಯಾಚರಣೆಯ ಅಭ್ಯಾಸ ನಡೆಸಲಿದ್ದಾರೆ. ಅರೆ ನಗರ ಪ್ರದೇಶಗಳಲ್ಲಿನ ಭಯೋತ್ಪಾದಕರ ಅಡಗುದಾಣ ಗಳ ಮೇಲೆ ದಾಳಿ, ಮನೆಗಳ ಶೋಧ ಕಾರ್ಯಾಚರಣೆ, ಪ್ರಥಮ ಚಿಕಿತ್ಸೆ, ಶಸ್ತ್ರರಹಿತ ಹೋರಾಟಗಳನ್ನು ಜಂಟಿಯಾಗಿ ಅಭ್ಯಸಿಸಲಾಗುವುದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.