ಪೊಲೀಸ್ ಸೋಗಿನಲ್ಲಿ ಬಂದು ಅಂಗಡಿಗಳಲ್ಲಿ ಹಣ ವಸೂಲಿ: ಆರೋಪಿ ಬಂಧನ
Team Udayavani, Feb 26, 2022, 12:59 PM IST
ಬೆಂಗಳೂರು: ಪೊಲೀಸರ ಸೋಗಿನಲ್ಲಿ ಅಂಗಡಿಗಳಲ್ಲಿ ಹಣ ವಸೂಲಿ ಮಾಡುತ್ತಿದ್ದ ಆರೋಪಿಯನ್ನು ಸಿಟಿ ಮಾರ್ಕೆಟ್ ವ್ಯಾಪಾರಿಗಳು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ.
ಶ್ರೀರಾಮಪುರದ ನಿವಾಸಿ ವಿಘ್ನೇಶ್(23) ಬಂಧಿತ. ಆರೋಪಿಗಳಿಂದ 4.5 ಸಾವಿರ ರೂ., ಮೊಬೈಲ್ ಜಪ್ತಿ ಮಾಡಲಾಗಿದೆ.
ಗುರುವಾರ ಬೆಳಗ್ಗೆ 8.30ರಲ್ಲಿ ಜೆ.ಪಿ. ಸ್ಟ್ರೀಟ್ನಲ್ಲಿ ಅಂಗಡಿಗೆ ತೆರಳಿರುವ ಆರೋಪಿ, ನಾನು ಪೊಲೀಸ್ ಅಧಿಕಾರಿಯಾಗಿದ್ದು, ಪೊಲೀಸ್ ಕಮಿಷನರ್ ಕಚೇರಿಯಿಂದ ಬಂದಿರುವುದಾಗಿ ಹೇಳಿದ್ದ. ನಿಮ್ಮ ಅಂಗಡಿಯನ್ನು ತಪಾಸಣೆ ಮಾಡಬೇಕೆಂದು ತಂಬಾಕು ಉತ್ಪನ್ನಗಳನ್ನು ತಪಾಸಣೆ ಮಾಡಲು ಮುಂದಾಗಿದ್ದ. ಆ ವೇಳೆ ಅಂಗಡಿ ಮಾಲೀಕ ಅನುಮಾನಗೊಂಡು ಪೊಲೀಸ್ ಗುರುತಿನ ಚೀಟಿ ತೋರಿಸುವಂತೆ ಪ್ರಶ್ನಿಸಿದ್ದರು.
ಆರೋಪಿಯು ಗುರುತಿನ ಚೀಟಿ ತೋರಿಸದೆ ಅಂಗಡಿಯಲ್ಲಿದ್ದ ತಂಬಾಕು ಉತ್ಪನ್ನಗಳನ್ನು ತೆಗೆದುಕೊಂಡು ಹೋಗಲು ಮುಂದಾದಾಗ, ಸುತ್ತಮುತ್ತಲ ವ್ಯಾಪಾರಿಗಳಿಗೆ ಅನುಮಾನ ಬಂದು ಆತನನ್ನು ಹಿಡಿದು ಪೊಲೀಸ್ ಠಾಣೆಗೆ ಕರೆತಂದಿದ್ದರು. ಈ ವೇಳೆ ವಿಚಾರಣೆಗೆ ಒಳಪಡಿಸಿದಾಗಆರೋಪಿಯು ನಕಲಿ ಪೊಲೀಸ್ ಆಗಿದ್ದು, ವ್ಯಾಪಾರಿ ಗಳಿಂದ ಹಣ ವಸೂಲಿ ಮಾಡುತ್ತಿದ್ದ ಸಂಗತಿ ಬೆಳಕಿಗೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ
Road mishap: ಗೂಡ್ಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್ ಕಾನ್ಸ್ಟೇಬಲ್ ಸಾವು
Bengaluru: ಸ್ನೇಹಿತನ ಅಪ್ರಾಪ್ತ ಪುತ್ರಿ ಮೇಲೆ ರೇಪ್ ಮಾಡಿ ಗರ್ಭಿಣಿ ಮಾಡಿದ್ದ ಅಪರಾಧಿ
Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ
Bengaluru: ಬಸ್ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್ ಬಂಧನ
MUST WATCH
ಹೊಸ ಸೇರ್ಪಡೆ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.