ಮೂಡುಗಿಳಿಯಾರು ಅಭಿಮತ ಸಂಭ್ರಮ; ಡಾ| ರವೀಂದ್ರನಾಥ ಶ್ಯಾನುಭಾಗ್‌ಗೆ ಪುರಸ್ಕಾರ


Team Udayavani, Feb 26, 2022, 6:56 PM IST

ಮೂಡುಗಿಳಿಯಾರು ಅಭಿಮತ ಸಂಭ್ರಮ; ಡಾ| ರವೀಂದ್ರನಾಥ ಶ್ಯಾನುಭಾಗ್‌ಗೆ ಪುರಸ್ಕಾರ

ಕೋಟ: ಕಷ್ಟದಲ್ಲಿರುವವರಿಗೆ ಸಹಾಯ ಮಾಡುವುದು, ದೀನ ದಲಿತರಿಗೆ ಸಹಕಾರ ನೀಡುವುದೇ  ನಿಜವಾದ ಭಗವಂತನ ಆರಾಧನೆಯಾಗಿದ್ದು, ಇದರಿಂದಾಗಿ ದೇವರು ಸಂತೃಪ್ತಿಯನ್ನು ಹೊಂದುತ್ತಾನೆ ಎಂದು ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದರು.

ಅವರು ಕೋಟ ಮೂಡುಗಿಳಿಯಾರಿನ ಜನಸೇವಾ ಟ್ರಸ್ಟ್ ವತಿಯಿಂದ ಫೆ.26ರಂದು ಮೂಡುಗಿಳಿಯಾರಿನ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ನಡೆದ ಅಭಿಮತ ಸಂಭ್ರಮ ಕಾರ್ಯಕ್ರಮದಲ್ಲಿ ಆಶೀವರ್ಚನ ನೀಡಿ ಮಾತನಾಡಿದರು.

ಭಕ್ತಿ ಹಾಗೂ ಸೇವೆಯಿಂದ ಎಲ್ಲವನ್ನೂ ಗೆಲ್ಲಲು ಸಾಧ್ಯವಿದೆ. ಜನಸೇವಾ ಟ್ರಸ್ಟ್ ಕೈಗೊಳ್ಳುತ್ತಿರುವ ಭಕ್ತಿಪೂರ್ವಕ  ಸಾಮಾಜಿಕ ಸೇವೆ ಎಲ್ಲರಿಗೂ ಮಾದರಿಯಾದದ್ದು ಎಂದರು.

ಈ ಸಂದರ್ಭ ಬಸ್ರೂರು ಬಳಕೆದಾರರ ವೇದಿಕೆ ಮತ್ತು ಉಡುಪಿ ಮಾನವ ಹಕ್ಕುಗಳ ಪ್ರತಿಷ್ಟಾನದ ಸಂಚಾಲಕ ಡಾ| ರವೀಂದ್ರನಾಥ ಶಾನುಭಾಗ್ ಅವರಿಗೆ ಕೀರ್ತಿ ಕಲಶ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ನ್ಯಾಯ ಒದಗಿಸುವುದೇ ನಿಜವಾದ ಗೌರವ:

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ| ರವೀಂದ್ರನಾಥ ಶ್ಯಾನುಭಾಗರು, ನಾನು ಇದುವರೆಗೆ ಯಾವುದೇ ಪ್ರಶಸ್ತಿ ಪುರಸ್ಕಾರವನ್ನು ಪಡೆದವನಲ್ಲ; ಆದರೆ ಸಂಘಟಕರ ಮೇಲಿನ ಪ್ರೀತಿಯಿಂದ ಈ ಗೌರವಕ್ಕೆ ಒಪ್ಪಿದ್ದೇನೆ.  ಜನರಿಂದ ಒಂದೇ ಒಂದು ರೂ ಹಣವನ್ನು ಪಡೆಯದೆ 28 ಸಾವಿರಕ್ಕಿಂತ ಹೆಚ್ಚು ಪ್ರಕರಣಗಳಲ್ಲಿ ಹೋರಾಟ ನಡೆಸಿದ್ದು, ನೊಂದವರಿಗೆ ನ್ಯಾಯಕೊಡಿಸುವುದೇ ನನಗೆ ನಿಜವಾದ ಆತ್ಮತೃಪ್ತಿ ಹಾಗೂ ಗೌರವ ಎಂದರು.

ಈ ಸಂದರ್ಭ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡಿದ ಡಾ| ನಾಗೇಶ್, ಪತ್ರಿಕೋದ್ಯಮ ಕ್ಷೇತ್ರದ ಸಾಧಕ ಸತೀಶ್ ಬಿಲ್ಲಾಡಿ, ಸಾಮಾಜಿಕ ಸೇವೆಯಲ್ಲಿ ತೊಡಗಿಕೊಂಡ ತೆಕ್ಕಟ್ಟೆ ಫ್ರೆಂಡ್ಸ್ ಅವರಿಗೆ ಯಶೋಗಾಥೆ ಪುರಸ್ಕಾರ ನೀಡಿ ಗೌರವಿಸಲಾಯಿತು. ಉಪ್ಲಾಡಿ ತೆಂಕುಬೆಟ್ಟಿನ ಬಡಕುಟುಂಬವೊಂದಕ್ಕೆ ಜನಸೇವಾ ಟ್ರಸ್ಟ್ ವತಿಯಿಂದ ಮನೆ ನಿರ್ಮಿಸಲಾಗಿದ್ದು ಇದರ ಕೀಲಿ ಕೈ ಹಸ್ತಾಂತರ ನಡೆಯಿತು. ಆಸಕ್ತರಿಗೆ ಸಹಾಯಧನ ವಿತರಣೆ, ಮನೆ ನಿರ್ಮಾಣಕ್ಕೆ ಸಹಕಾರ ನಡೆಯಿತು.

ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ.ಕುಂದರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಗುರ್ಮೆ ಟ್ರಸ್ಟ್‌ನ ಅಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಬಂದೂರು ಶಾಸಕ ಬಿ.ಎಂ,  ಸುಕುಮಾರ್ ಶೆಟ್ಟಿ, ಮುಂಬ ಶೋಭಾ ಸಮೂಹ ಸಂಸ್ಥೆಯ ಮುಖ್ಯಸ್ಥ ರತ್ನಾಕರ ಜಿ. ಶೆಟ್ಟಿ, ಉದ್ಯಮಿಗಳಾದ ಕೃಷ್ಣಮೂರ್ತಿ ಮಂಜ, ಪಂಜುರ್ಲಿ ಗ್ರೂಪ್‌ನ ರಾಜೇಂದ್ರ ಶೆಟ್ಟಿ, ಉದ್ಯಮಿ ಬಡಾಮನೆ ರತ್ನಾಕರ ಶೆಟ್ಟಿ, ಫಾರ್ಚೂನ್ ಗ್ರೂಪ್‌ನ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ, ಉಳ್ತೂರು ಮೋಹನದಾಸ್ ಶೆಟ್ಟಿ,  ಮುಂಬ ಬಿಲ್ಲವ ಸಂಘದ  ಅಧ್ಯಕ್ಷ ಎನ್.ಟಿ ಪೂಜಾರಿ,  ಎಸ್.ಎನ್.ಸಿ.ಯ  ಪ್ರಶಾಂತ್ ಶೆಟ್ಟಿ, ಪೂನಾ ಬಂಟರಭವನದ ಅಧ್ಯಕ್ಷ ಇನ್ನಾ ಸಂತೋಷ್ ಶೆಟ್ಟಿ ಉಪಸ್ಥಿತರಿದ್ದರು.

ಅಭಿಮತ ಸಂಭ್ರಮದ  ಪ್ರಮುಖರಾದ ಉಳ್ತೂರು ಅರುಣ್ ಶೆಟ್ಟಿ ಸ್ವಾಗತಿಸಿ,  ಟೀಂ ಅಭಿಮತದ ಸಂಚಾಲಕ ವಸಂತ್ ಗಿಳಿಯಾರ್ ಪ್ರಾಸ್ತಾವಿಕ ಮಾತನಾಡಿದರು, ವಿದ್ಚಾನ್ ಆರ್. ದಾಮೋದರ ಶರ್ಮ ಕಾರ್ಯಕ್ರಮ ನಿರೂಪಿಸಿ, ಪತ್ರಕರ್ತ ಕೆ.ಸಿ. ರಾಜೇಶ್ ವಂದಿಸಿದರು.

ಮಂತ್ರಾಲಯದಿಂದ ಹರ್ಷ ಕುಟುಂಬಕ್ಕೆ ಐವತ್ತು ಸಾವಿರ ನೆರವು :

ಶಿವಮೊಗ್ಗದಲ್ಲಿ ದುಷ್ಕರ್ಮಿಗಳಿಂದ ಹತನಾದ ಹರ್ಷ ಕುಟುಂಬಕ್ಕೆ  ಶ್ರೀಮಂತ್ರಾಲಯ ಮಠದಿಂದ ಐವತ್ತು ಸಾವಿರ ರೂ ಸಹಾಯಧನ ನೀಡುವುದಾಗಿ ಶ್ರೀಗಳು ಕಾರ್ಯಕ್ರಮದಲ್ಲಿ ಘೋಷಿಸಿದರು ಹಾಗೂ ಜನಸೇವಾ ಟ್ರಸ್ಟ್ ವತಿಯಿಂದ ಇನ್ನೊಂದು ಬಡ ಕುಟುಂಬಕ್ಕೆ ಮನೆ ನಿರ್ಮಿಸಿಕೊಡಲು ೨ಲಕ್ಷ ರೂ ನೆರವು ನೀಡುವುದಾಗಿ ಘೋಷಿಸಿದರು.

ಟಾಪ್ ನ್ಯೂಸ್

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.