ಕುಡಿಯಲು ಹಣ ನೀಡದ್ದಕ್ಕೆ ತಾಯಿಯನ್ನೇ ಕೊಂದ ಮಗ
Team Udayavani, Feb 26, 2022, 9:00 PM IST
ಬೆಂಗಳೂರು: ಕುಡಿಯಲು ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಪುತ್ರನೇ ತಾಯಿಯನ್ನು ತಳ್ಳಿ ಕೊಂದಿರುವ ಘಟನೆ ಮಾರತ್ತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ದೇವರಜೀವನಹಳ್ಳಿಯ ಜೋಪಡಿಯಲ್ಲಿ ವಾಸವಾಗಿದ್ದ ಯಮನಮ್ಮ(70) ಕೊಲೆಯಾದ ಮಹಿಳೆ. ಈ ಸಂಬಂಧ ಆಕೆಯ ಪುತ್ರ ಅಂಬರೀಶ್(35) ಎಂಬಾತನನ್ನು ಬಂಧಿಸಲಾಗಿದೆ.
ಆರೋಪಿ ಅಂಬರೀಶ್ ಕೂಲಿ ಕೆಲಸ ಮಾಡಿಕೊಂಡಿದ್ದು, ಜತೆಗೆ ವಿಪರೀತ ಮದ್ಯ ವ್ಯಸನಿಯಾಗಿದ್ದಾನೆ. ಈ ಮಧ್ಯೆ ಸರಿಯಾಗಿ ಕೆಲಸಕ್ಕೆ ಹೋಗುತ್ತಿರಲಿಲ್ಲ. ಮತ್ತೊಂದೆಡೆ ಪುತ್ರ ಸರಿಯಾಗಿ ನೋಡಿಕೊಳ್ಳದರಿಂದ ತಾಯಿ ಯಮನಮ್ಮ ರಸ್ತೆಗಳಲ್ಲಿ ಭೀಕ್ಷೆ ಬೇಡುತ್ತಿದ್ದರು. ನಿತ್ಯ ಒಂದಿಲ್ಲೊಂದು ವಿಚಾರಕ್ಕೆ ತಾಯಿ ಜತೆ ಜಗಳ ಮಾಡುತ್ತಿದ್ದ.
ಶನಿವಾರ ಕೂಡ ಭೀಕ್ಷೆ ಬೇಡಿ ಮನೆಗೆ ಬಂದ ಯಮನಮ್ಮ ಜತೆ ಆರೋಪಿ ವಾಗ್ವಾದ ನಡೆಸಿ,ಕುಡಿಯಲು ಹಣ ಕೊಡುವಂತೆ ಪೀಡಿಸಿದ್ದಾನೆ. ತಾಯಿ ನಿರಾಕರಿಸಿದಾಗ ಆಕೆ ಮೇಲೆ ಹಲ್ಲೆ ನಡೆಸಿದ್ದಾನೆ. ಬಳಿಕ ಜೋಪಡಿಯಿಂದ ಹೊರಕಡೆ ಕರೆತಂದು ಜಗಳವಾಡಿ ಜೋರಾಗಿ ತಳ್ಳಿದ್ದು,ಪಕ್ಕದಲ್ಲೇ ಇದ್ದ ಚಪ್ಪಡಿ ಕಲ್ಲಿಗೆ ತಲೆಗೆ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವ ಉಂಟಾಗಿ ಯಮನಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ತೆರಳಿದ ಮಾರತ್ತಹಳ್ಳಿ ಪೊಲೀಸರು ಮದ್ಯದ ಅಮಲಿನಲ್ಲಿ ಬಿದ್ದಿದ್ದ ಆರೋಪಿಯನ್ನು ವಶಕ್ಕೆ ಪಡೆದು, ವೈದ್ಯಕೀಯ ತಪಾಸಣೆ ನಡೆಸಿ ಬಂಧಿಸಿದ್ದಾರೆ. ಪ್ರಕರಣ ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Manipal: ಮಾಹೆಯ ಪ್ರಸನ್ನ ಸ್ಕೂಲ್ ಆಪ್ ಪಬ್ಲಿಕ್ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ
Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.