ಕುಡಿಯಲು ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಮಗನಿಂದ ತಾಯಿಯ ಹತ್ಯೆ
Team Udayavani, Feb 27, 2022, 9:13 AM IST
ಬೆಂಗಳೂರು: ಕುಡಿಯಲು ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಪುತ್ರನೇ ತಾಯಿಯನ್ನು ತಳ್ಳಿ ಕೊಂದಿರುವ ಘಟನೆ ಮಾರತ್ತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ತಡರಾತ್ರಿ ನಡೆದಿದೆ. ದೇವರಜೀವನಹಳ್ಳಿಯ ಜೋಪಡಿಯಲ್ಲಿ ವಾಸವಾಗಿದ್ದ ಯಮನಮ್ಮ(70) ಕೊಲೆಯಾದ ಮಹಿಳೆ.
ಈ ಸಂಬಂಧ ಆಕೆಯ ಪುತ್ರ ಅಂಬರೀಶ್(35) ಎಂಬಾತನನ್ನು ಬಂಧಿಸಲಾಗಿದೆ. ಆರೋಪಿ ಅಂಬರೀಶ್ ಕೂಲಿ ಕೆಲಸ ಮಾಡಿಕೊಂಡಿದ್ದು, ಜತೆಗೆ ವಿಪರೀತ ಮದ್ಯ ವ್ಯಸನಿಯಾಗಿದ್ದಾನೆ. ಈ ಮಧ್ಯೆ ಸರಿಯಾಗಿ ಕೆಲಸಕ್ಕೆ ಹೋಗುತ್ತಿರಲಿಲ್ಲ. ಮತ್ತೂಂದೆಡೆ ಪುತ್ರ ಸರಿಯಾಗಿ ನೋಡಿಕೊಳ್ಳದರಿಂದ ತಾಯಿ ಯಮನಮ್ಮ ರಸ್ತೆಗಳಲ್ಲಿ ಭಿಕ್ಷೆ ಬೇಡುತ್ತಿದ್ದರು.
ನಿತ್ಯ ಒಂದಿಲ್ಲೊಂದು ವಿಚಾರಕ್ಕೆ ತಾಯಿ ಜತೆ ಜಗಳ ಮಾಡುತ್ತಿದ್ದ. ಶನಿ ವಾರ ಕೂಡ ಭಿಕ್ಷೆ ಬೇಡಿ ಮನೆಗೆ ಬಂದ ಯಮನಮ್ಮ ಜತೆ ಆರೋಪಿ ವಾಗ್ವಾದ ನಡೆಸಿ, ಕುಡಿಯಲು ಹಣ ಕೊಡುವಂತೆ ಪೀಡಿಸಿದ್ದಾನೆ. ತಾಯಿ ನಿರಾಕರಿಸಿದಾಗ ಆಕೆ ಮೇಲೆ ಹಲ್ಲೆ ನಡೆಸಿ ದ್ದಾನೆ. ಬಳಿಕ ಜೋಪಡಿಯಿಂದ ಹೊರಕಡೆ ಕರೆತಂದು ಜಗಳವಾಡಿ ಜೋರಾಗಿ ತಳ್ಳಿದ್ದು,
ತಲೆಗೆ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವ ಉಂಟಾಗಿ ಯಮನಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ತೆರಳಿದ ಮಾರತ್ತಹಳ್ಳಿ ಪೊಲೀಸರು ಮದ್ಯದ ಅಮಲಿನಲ್ಲಿ ಬಿದ್ದಿದ್ದ ಆರೋಪಿಯನ್ನು ವಶಕ್ಕೆ ಪಡೆದು, ವೈದ್ಯಕೀಯ ತಪಾಸಣೆ ನಡೆಸಿ ಬಂಧಿಸಿದ್ದಾರೆ. ಪ್ರಕರಣ ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.