ಆಸ್ಪತ್ರೆಗೆ ಶಾಸಕ ದರ್ಶನಾಪುರ ಭೇಟಿ
Team Udayavani, Feb 27, 2022, 11:36 AM IST
ಶಹಾಪುರ: ದೋರನಹಳ್ಳಿಯ ಸೀಮಂತ ಕಾರ್ಯಕ್ರಮದಲ್ಲಿ ಸಿಲಿಂಡರ್ ಸೋರಿಕೆಯಿಂದ ನಡೆದ ಅವಘಡಕ್ಕೆ ಸಂಬಂಧಿಸಿ ಶನಿವಾರ ಮತ್ತೊಂದು ಸಾವು ಸಂಭವಿಸಿದೆ. ಈ ಮೂಲಕ 23 ಗಾಯಾಳುಗಳಲ್ಲಿ ನಾಲ್ವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ.
ಇತ್ತ ಇಡೀ ಗ್ರಾಮದಲ್ಲಿ ಸ್ಮಶಾನ ಮೌನ ಆವರಿಸಿದೆ. ಸಿಲಿಂಡರ್ ಸ್ಫೋಟದಿಂದ ಬೆಂಕಿ ಹೊತ್ತಿ ಉರಿದ ಪರಿಣಾಮ ಹಾಕಲಾದ ಟೆಂಟ್ ಸಮೇತ ಕುರ್ಚಿಗಳು ಸುಟ್ಟು ಕರಕಲಾಗಿವೆ. ಜೊತೆಗೆ ಸುಮಾರು ಜನರಿಗೆ ಸಣ್ಣಪುಟ್ಟ ಗಾಯಗಳಾದರೆ 23 ಜನರು ತೀವ್ರ ಗಾಯಗೊಂಡಿದ್ದಾರೆ. 10 ಜನರ ಸ್ಥಿತಿ ಚಿಂತಾಜನಕವಾಗಿದೆ. ಈಗಾಗಲೇ ಅದರಲ್ಲಿ ಇಬ್ಬರು ಮಕ್ಕಳು ಸೇರಿ ನಾಲ್ವರು ಮೃತಪಟ್ಟಿದ್ದಾರೆ.
ಇನ್ನೂ ಹಲವರ ಸ್ಥಿತಿ ಗಂಭೀರವಾಗಿದೆ. ಸಿಲಿಂಡರ್ ಸ್ಫೋಟ ದುರಂತದಿಂದಾಗಿ ಸದ್ಯ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ. ಸಂಭ್ರಮ ಸಡಗರ ಇರಬೇಕಿದ್ದ ಮನೆಯಲ್ಲಿ ನೀರವ ಮೌನ ಆವರಿಸಿದೆ. ಶನಿವಾರ ಮತ್ತೋರ್ವ ಗಾಯಾಳು ಗಂಗಮ್ಮ (45) ಮೃತಪಟ್ಟಿದ್ದಾರೆ. ಒಟ್ಟು 23 ಜನರು ಗಾಯಗೊಂಡಿದ್ದು, 4 ಜನರು ಸ್ಥಳೀಯ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಮನೆಯಲ್ಲಿ ಉಳಿದಿದ್ದಾರೆ. 4 ಜನರು ಮೃತಪಟ್ಟಿದ್ದು, 15 ಜನರು ಕಲ್ಬುರ್ಗಿಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಲ್ಲಿ ಇನ್ನೂ 5 ಜನರ ಸ್ಥಿತಿ ಗಂಭೀರವಾಗಿದೆ.
ದೋರನಹಳ್ಳಿ ಘಟನೆಯಲ್ಲಿ ಗಾಯಗೊಂಡು ಬಸವೇಶ್ವರ ಆಸ್ಪತ್ರೆಗೆ ದಾಖಲಾದ ಸಾವು ನೋವಿನ ಮಧ್ಯ ಹೋರಾಟ ನಡೆಸುತ್ತಿರುವ ಗಾಯಾಳುಗಳನ್ನು ಶಾಸಕ ಶರಣಬಸಪ್ಪಗೌಡ ದರ್ಶನಾಪುರ, ಮಾಜಿ ಸಚಿವ ಮಾಲಕರಡ್ಡಿ, ಶಾಸಕ ವೆಂಕಟರಡ್ಡಿ ಮುದ್ನಾಳ ಸೇರಿದಂತೆ ಯಾದಗಿರಿ ಡಿಎಚ್‌ಒ ಡಾ| ಕಾಮರಡ್ಡಿ ಭೇಟಿ ನೀಡಿ ಸಾಂತ್ವನ ಹೇಳಿದರು. ಶಾಸಕ ದರ್ಶನಾಪುರ ಗಾಯಾಳುಗಳನ್ನು ಮಾತನಾಡಿಸಿ ಧೈರ್ಯ ತುಂಬುವ ಕೆಲಸ ಮಾಡಿದರು. ಅಲ್ಲದೆ ಆರೋಗ್ಯ ಅಧಿಕಾರಿಗಳಿಗೆ ಸೂಕ್ತ ಚಿಕಿತ್ಸೆ ವ್ಯವಸ್ಥೆ ಕಲ್ಪಿಸಲು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ
Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.