ಇಬ್ಬರು ಎಎಸ್‌ಐ, ಇಬ್ಬರು ಮುಖ್ಯಪೇದೆ ಅಮಾನತು
Team Udayavani, Feb 27, 2022, 2:39 PM IST
ಯಳಂದೂರು: ರಸ್ತೆ ಅಪಘಾತ ಸಂಬಂಧ ಪೊಲೀಸ್ ಠಾಣೆಗೆ ನೀಡಿದ ದೂರನ್ನು ಸರಿಯಾಗಿ ನಿರ್ವಹಿಸಿಲ್ಲ ಹಾಗೂ ಡ್ರೆçವರ್ ಹೆಸರನ್ನು ಬದಲಿಸಲಾಗಿದೆ ಎಂಬವಿಚಾರವಾಗಿ ಯಳಂದೂರು ಪೊಲೀಸ್ ಠಾಣೆಯ ನಾಲ್ವರನ್ನು ಅಮಾನತುಗೊಳಿಸಲಾಗಿದೆ.
ಈ ವೇಳೆ ಕರ್ತವ್ಯದಲ್ಲಿದ್ದ ಎಎಸ್‌ಐಗಳಾದ ಮಧುಸೂದನ್, ನಾಗರಾಜು, ಹೆಡ್ ಕಾನ್ಸ್‌ಸ್ಟೇಬಲ್‌ಗಳಾದ ಪರಶಿವಮೂರ್ತಿ ಹಾಗೂ ಗೋಪಾಲ್ ಅವರನ್ನು ಅಮಾನತು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್‌ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್ ಮಾಹಿತಿ ನೀಡಿದ್ದಾರೆ.
ಏನಿದು ಪ್ರಕರಣ?: ಫೆ.8 ರಂದು ಬೆಳಗ್ಗೆ 10.30 ಕ್ಕೆ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 209 ರ ಬಳಿ ಇರುವ ಭಾರತ್ ಪೆಟ್ರೋಲ್ ಬಂಕ್ ಹತ್ತಿರ ಟಿವಿಎಸ್ ಬೈಕ್‌ನಲ್ಲಿ (ಕೆಎ 10 ಎಲ್ 8210) ಅಂಬಳೆ ಗ್ರಾಮದ ನಾಗಪ್ಪ (76) ಎಂಬುವವರು ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಕಾರು (ಕೆಎ10 ಎಂ5048) ಡಿಕ್ಕಿ ಹೊಡೆದಿತ್ತು. ಆ ವೇಳೆ ನಾಗಪ್ಪ ಗಾಯಗೊಂಡಿದ್ದರು. ಘಟನೆ ಕುರಿತು ಯಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ದೂರುದಾರರು ನೀಡಿದ್ದ ದೂರಿನಲ್ಲಿ ಕಾರ್ ಡ್ರೈವರ್‌ನ ಹೆಸರನ್ನು ಬೇಕೆಂತಲೇ ಬದಲಿಸಲಾಗಿತ್ತು. ಅಲ್ಲದೆ ದೂರುದಾರರಿಗೆ ಇವರು ಸರಿಯಾಗಿ ಸ್ಪಂದಿಸಿಲ್ಲ ಎಂದುನಾಗಪ್ಪ ಅವರ ಪುತ್ರ ಡಾ| ಎನ್. ಲಿಂಗರಾಜು ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು.
ಇದನ್ನು ಪರಿಶೀಲನೆ ನಡೆಸಿದ ಪೊಲೀಸ್ ವರಿಷ್ಠಾಧಿಕಾರಿಗಳು, ದೂರಿನಲ್ಲಿ ಲೋಪ ಕಂಡು ಬಂದಹಿನ್ನೆಲೆಯಲ್ಲಿ ಈ ನಾಲ್ವರನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.