ಮಾವು ಸಂಸ್ಕರಣಾ ಘಟಕ ನಿರ್ಮಾಣಕ್ಕೆ ಪ್ರಸ್ತಾಪ

Team Udayavani, Feb 27, 2022, 3:05 PM IST

ಮಾವು ಸಂಸ್ಕರಣಾ ಘಟಕ ನಿರ್ಮಾಣಕ್ಕೆ ಪ್ರಸ್ತಾಪ

ಕೋಲಾರ: ಜಿಲ್ಲೆಯಲ್ಲಿ ಮಾವು ಸಂಸ್ಕರಣಾ ಘಟಕ ಮತ್ತು ಶೀತಲ ಕೇಂದ್ರ ಸ್ಥಾಪನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿಕೊಂಡಿದ್ದು,ಬಜೆಟ್‌ನಲ್ಲಿ ಪ್ರಸ್ತಾಪಿಸುವುದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌. ಮುನಿರತ್ನ ತಿಳಿಸಿದರು.

ನಗರದ ಹೊರವಲಯದ ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ಶನಿವಾರ ಜನಪರ ಉತ್ಸವ ಮತ್ತು ವಿವಿಧ ಯೋಜನೆಗಳಡಿ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿ, ಹಣ್ಣು, ತರಕಾರಿ ಬೆಳೆಯುವಲ್ಲಿ ಪ್ರಸಿದ್ಧಿ ಪಡೆದಿರುವ ಜಿಲ್ಲೆಯಲ್ಲಿ ರೈತರು ನಷ್ಟ ಹೊಂದುವುದನ್ನು ತಪ್ಪಿಸಬೇಕಿದೆ. ಮಾ. 4ರಂದು ಮಂಡನೆಯಾಗುವ ಬಜೆಟ್‌ನಲ್ಲಿ ಕ್ರಮ ಕೈಗೊಳ್ಳಬೇಕೆಂದು ಪತ್ರ ಬರೆದು ಒತ್ತಾಯಿಸಲಾಗಿದೆ. ಮಾಲೂರಿನಲ್ಲಿ 5 ಕೋಟಿ ವೆಚ್ಚದಲ್ಲಿ ಶೀತಲ ಕೇಂದ್ರ ನಿರ್ಮಾಣಕ್ಕೆ ಅನುಮತಿ ನೀಡಿದ್ದು, ಮುಂದಿನ ದಿನಗಳಲ್ಲಿ ಕೃಷಿಕರಿಗೆ ಹೆಚ್ಚು ಪ್ರಯೋಜನವಾಗಲಿದೆ ಎಂದು ಹೇಳಿದರು.

ಹಲವು ಯೋಜನೆ ಜಾರಿ: ನೆರೆಯ ತಮಿಳುನಾಡು, ಆಂಧ್ರಕ್ಕೆ ಹೋಲಿಸಿದರೆ ನಮ್ಮ ರೈತರಿಗೆ ಸರಕಾರ ಹೆಚ್ಚು ಸವಲತ್ತುಗಳನ್ನು ಕಲ್ಪಿಸುತ್ತಿದೆ. ಹಲವು ಯೋಜನೆಗಳನ್ನುಜಾರಿಗೊಳಿಸಿ, ತೋಟಗಾರಿಕೆ ಬೆಳೆಗಾರರ ಹಿತ ಕಾಪಾಡಲಾಗಿದೆ. ಯೋಜನೆಗಳ ಲಾಭ ಎಲ್ಲರಿಗೆತಲುಪಬೇಕೆಂಬುದು ಸರ್ಕಾರದ ಆಶಯವಾಗಿದೆ. ರೈತರನ್ನ ಪ್ರೋತ್ಸಾಹಿಸುವುದು ಅವರ ನೆರವಿಗೆ ನಿಲ್ಲುವುದು ಕರ್ತವ್ಯವೆಂದು ಬಾವಿಸಿ, ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.

ಬೆಳೆ ಹಾನಿಗೀಡಾದ ರೈತರಿಗೆ ವಿಮೆ ಪಾವತಿ: ಕಳೆದ ವರ್ಷ ಜಿಲ್ಲೆಯಲ್ಲಿ ಹವಾಮಾನ ವೈಪರಿತ್ಯದಿಂದ ಬೆಳೆಹಾನಿಗೀಡಾದ ರೈತರಿಗೆ 2.23 ಕೋಟಿ ರೂ.ವಿಮೆಪಾವತಿಸಲಾಗಿದೆ. ಕೊರೊನಾದಿಂದ ಲಾಕ್‌ಡೈನ್‌ ಆದಾಗ13, 432 ಬೆಳೆಗಾರರಿಗೆ 6.53 ಕೋಟಿ ಪರಿಹಾರವಿತರಿಸಲಾಗಿದೆ. ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ 29 ಕೋಟಿ ಅನುದಾನ ಬಂದಿದ್ದು,13.80 ಕೋಟಿ ಬಿಡುಗಡೆ ಮಾಡಲಾಗಿದೆ. ರಾಷ್ಟ್ರೀಯತೋಟಗಾರಿಕೆ ಮಿಷನ್‌ ಅಡಿಯಲ್ಲಿ 1.70 ಕೋಟಿ ಬಿಡುಗಡೆಯಾಗಿದೆ ಎಂದು ವಿವರಿಸಿದರು.

ರೈತರಿಗೆ ಸೌಲಭ್ಯ ನೀಡಲು ಪ್ರಯತ್ನಿಸಿ: ಶಾಸಕ ಕೆ. ಶ್ರೀನಿವಾಸಗೌಡ ಮಾತನಾಡಿ, ಕಳೆದ ಬಾರಿಸಮರ್ಪಕವಾಗಿ ಮಳೆ ಬಂದಿದ್ದು, ಇದರ ಜತೆಗೆ ಕೆಸಿವ್ಯಾಲಿ ನೀರು ಹರಿದು ಬರುತ್ತಿರುವುದರಿಂದ ಕೆರೆ,ಕುಂಟೆಗಳಲ್ಲಿ ಸಮೃದ್ಧವಾಗಿ ನೀರಿದ್ದು, ಎಲ್ಲ ರೈತರುಒಂದೇ ರೀತಿಯ ಬೆಳೆ ಇಡದೆ ಬೇರೆ ಬೇರೆ ಬೆಳೆಗಳನ್ನುಬೆಳೆಯಬೇಕು. ಇದರಿಂದ ಮಾರುಕಟ್ಟೆಯಲ್ಲಿ ಬೆಲೆ ಸಿಗದೆನಷ್ಟ ಹೊಂದುವುದನ್ನು ತಪ್ಪಿಸಬಹುದು. ಸವಲತ್ತುಪಡೆಯದ ರೈತರಿಗೆ ಸವಲತ್ತು ದೊರಕಿಸಿಕೊಡಲುಅಧಿಕಾರಿಗಳು ಪ್ರಯತ್ನಿಸಬೇಕು. ಆರ್ಥಿಕವಾಗಿದುರ್ಬಲರಾದವರು ಯೋಜನೆಗಳನ್ನು ಸದುಪಯೋಗಮಾಡಿಕೊಂಡಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗುತ್ತದೆ. ರೈತ ಸಹ ಆರ್ಥಿಕ ಸ್ವಾವಲಂಬನೆ ಸಾಧಿಸಲು ಸಾಧ್ಯವಾಗುತ್ತದೆ ಎಂದರು.

ಜಿಲ್ಲಾಧಿಕಾರಿ ವೆಂಕಟ್‌ ರಾಜಾ, ಜಿಪಂ ಸಿಇಒ ಎಸ್‌.ಯು ಕೇಶ್‌ ಕುಮಾರ್‌, ಎಸ್‌ಪಿ ಡಿ.ದೇವರಾಜ್‌, ತೋಟಗಾರಿಕೆ ಉಪ ನಿರ್ದೇಶಕಿ ಎಂ.ಗಾಯತ್ರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕ ಎನ್‌.ನರೇಂದ್ರ,ಕಾರ್ಯಕ್ರಮ ಅಧಿಕಾರಿ ಬಿ.ಎಸ್‌. ಶಿವಪ್ರಕಾಶ್‌, ಹೊನ್ನೇನಹಳ್ಳಿ ಗ್ರಾಪಂ ಅಧ್ಯಕ್ಷ ಎ.ವಿ.ವೆಂಕಟೇಶ್‌, ಕುಡಾಅಧ್ಯಕ್ಷ ವೆಂಕಟಾಚಲಪತಿ, ತೋಟಗಾರಿಕೆ ಮಹಾ ವಿದ್ಯಾಲಯ ಡೀನ್‌ ಡಾ.ಎಚ್‌.ಎಸ್‌ ಶಿವರಾಮ್‌ ಇದ್ದರು.

ಟಾಪ್ ನ್ಯೂಸ್

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.