5ನೇ ಹಂತದ ಮತದಾನ ಬಹುತೇಕ ಶಾಂತಿಯುತ
ಉ.ಪ್ರದೇಶದ 12 ಜಿಲ್ಲೆಗಳ 61 ಕ್ಷೇತ್ರಗಳಲ್ಲಿ ಹಕ್ಕು ಚಲಾವಣೆ
Team Udayavani, Feb 28, 2022, 7:25 AM IST
ಲಕ್ನೋ: ಉತ್ತರ ಪ್ರದೇಶ ವಿಧಾನಸಭೆಗೆ ನಡೆಯುತ್ತಿರುವ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ, 5ನೇ ಹಂತದ ಮತದಾನ ಬಹುತೇಕ ಶಾಂತಿಯುತವಾಗಿ ನೆರವೇರಿತು. 12 ಜಿಲ್ಲೆಗಳ 61 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸಿದರು.
ಪ್ರತಾಪ್‌ಗ್ಡ ಜಿಲ್ಲೆಯ ಕುಂದಾ ವಿಧಾನಸಭಾ ಕ್ಷೇತ್ರದ ಸಮಾಜವಾದಿ ಪಕ್ಷದ ಅಭ್ಯರ್ಥಿ ಗುಲÒನ್ ಯಾದವ್‌ರವರ ಬೆಂಬಲಿಗರ ಮೇಲೆ ಕೆಲವರು ದಾಳಿ ನಡೆಸಿದರು. ಘಟನೆಯಲ್ಲಿ, ಯಾದವ್‌ರವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಮಣಿಪುರದಲ್ಲಿ ಸ್ಫೋಟ
ಮಣಿಪುರ ವಿಧಾನಸಭೆಯ 38 ಸ್ಥಾನಗಳಿಗೆ ಭಾನುವಾರ ಮತದಾನ ನಡೆಯಿತು. ಒಟ್ಟು 60 ಸ್ಥಾನಗಳಿದ್ದು, ಉಳಿದ 22 ಸ್ಥಾನಗಳಿಗೆ ಮಾ. 7ರಂದು ನಡೆಯಲಿದೆ. ಭಾನುವಾರದಂದು ನಡೆದ ಮತದಾನದಲ್ಲಿ ನಾಗರಿಕರು, ಪೂರ್ವ ಇಂಫಾಲ್, ಪಶ್ಚಿಮ ಇಂಫಾಲ್, ಬಿಷ್ಣುಪುರ್, ಕಾಂಗೊRàಪಿ, ಚುರಾಚಂದ್‌ಪುರ್‌ನ ಒಟ್ಟು 173 ಅಭ್ಯರ್ಥಿಗಳ ಭವಿಷ್ಯವನ್ನು ಮತಯಂತ್ರಗಳಲ್ಲಿ ಭದ್ರವಾಗಿಸಿದರು.
ಭಾರತೀಯರನ್ನು ಕರೆತರುತ್ತೇವೆ: ಮೋದಿ
ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ವಾಪಸ್ ಕರೆತರಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 6ನೇ ಹಂತದ ಮತದಾನಕ್ಕಾಗಿ ಸಜ್ಜಾಗಿರುವ ಉತ್ತರ ಪ್ರದೇಶದ ಬಸ್ತಿಯಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಅವರು, ಉಕ್ರೇನ್‌ನಲ್ಲಿರುವ ಭಾರತದ ಮಕ್ಕಳನ್ನು ಸ್ವದೇಶಕ್ಕೆ ತರುವ ಕಾರ್ಯಾಚರಣೆಗೆ ಆಪರೇಷನ್ ಗಂಗಾ ಎಂದು ಹೆಸರಿಡಲಾಗಿದೆ. ಲಭ್ಯವಿರುವ ಎಲ್ಲಾ ಅವಕಾಶಗಳನ್ನು ಬಳಸಿಕೊಂಡು ನಮ್ಮ ಮಕ್ಕಳನ್ನು ಭಾರತಕ್ಕೆ ಕರೆತರಲಾಗುತ್ತದೆ ಎಂದು ಹೇಳಿದ್ದಾರೆ.
ಆಜಾದ್ ಸ್ಮರಣೆ:
ಫೆ. 27ರಂದು ಆಜಾದ್‌ರವರ ಹುತಾತ್ಮ ದಿನವಾದ ಹಿನ್ನೆಲೆಯಲ್ಲಿ ಮೋದಿ ತಮ್ಮ ಭಾಷಣದಲ್ಲಿ ಅವರನ್ನು ಸ್ಮರಿಸಿದರು. ನಂತರ, ವಿಪಕ್ಷಗಳ ವಿರುದ್ಧ ವಾಗ್ಧಾಳಿ ನಡೆಸಿದ ಅವರು, “”ದೇಶದ ನಾಗರಿಕರು ಜಾತಿ, ಮತ, ಪಂಥಗಳ ಭೇದವನ್ನು ಮರೆತು ದೇಶವನ್ನು ಆತ್ಮನಿರ್ಭರ ಮಾಡುವಲ್ಲಿ ಶ್ರಮಿಸಬೇಕು” ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.