ರಸ್ತೆ ಅಪಘಾತ: ಎಂಜಿನಿಯರಿಂಗ್‌ ವಿದ್ಯಾರ್ಥಿ ಸೇರಿ ಇಬ್ಬರು ಸಾವು


Team Udayavani, Feb 28, 2022, 10:00 PM IST

ರಸ್ತೆ ಅಪಘಾತ: ಎಂಜಿನಿಯರಿಂಗ್‌ ವಿದ್ಯಾರ್ಥಿ ಸೇರಿ ಇಬ್ಬರು ಸಾವು

ಸಾಂದರ್ಭಿಕ ಚಿತ್ರ.

ಬೆಂಗಳೂರು: ಎರಡು ಪ್ರತ್ಯೇಕ  ಅಪಘಾತದಲ್ಲಿ ಎಂಜಿನಿಯರಿಂಗ್‌ ವಿದ್ಯಾರ್ಥಿ ಸೇರಿ ಇಬ್ಬರು ಮೃತಪಟ್ಟಿದ್ದು, ಒಬ್ಬರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ.

ಅತೀ ವೇಗವಾಗಿ ಬರುವಾಗ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದುಕೊಂಡ ಪರಿಣಾಮ ಎಂಜಿನಿಯರ್‌ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದು, ಹಿಂಬದಿ ಸವಾರ ಗಾಯಗೊಂಡಿರುವ ಘಟನೆ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ವಿಜಯನಗರದ ಮೂಡಲಪಾಳ್ಯದ ನಿವಾಸಿ ಯತೀಶ್‌ ಕುಮಾರ್‌(23) ಮೃತ ಎಂಜಿನಿಯರಿಂಗ್‌ ವಿದ್ಯಾರ್ಥಿ. ಹಿಂಬದಿ ಸವಾರ ಹರ್ಷಿತ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಗರದ ಖಾಸಗಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಇ ಪದವಿ ವ್ಯಾಸಂಗ ಮಾಡುತ್ತಿದ್ದ ಯತೀಶ್‌ಕುಮಾರ್‌ ಹಾಗೂ ಹರ್ಷಿತ್‌ ಭಾನುವಾರ ಕಲ್ಯಾಣ ನಗರದಲ್ಲಿದ್ದ ಸ್ನೇಹಿತರೊಂದಿಗೆ ಪಾರ್ಟಿ ಮಾಡಿ ರಾತ್ರಿ 10.15ರ ಸುಮಾರಿಗೆ ಮನೆಗೆ ವಾಪಸ್‌ ಹೋಗುತ್ತಿದ್ದರು. ಬೈಕ್‌ ಚಾಲನೆ ಮಾಡುತ್ತಿದ್ದ ಯತೀಶ್‌ ಕುಮಾರ್‌, ಮಾರ್ಗಮಧ್ಯೆ ನಮ್ಮೂರ ತಿಂಡಿ ಹೋಟೆಲ್‌ ಸಮೀಪದ ಸರ್ವಿಸ್‌ ರಸ್ತೆಯಲ್ಲಿ ಅತೀ ವೇಗವಾಗಿ ಹೋಗುವಾಗ ಏಕಾಏಕಿ ಬ್ರೇಕ್‌ ಹಾಕಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದುಕೊಂಡಿದ್ದು, ಇಬ್ಬರು ಕೆಳಗೆ ಬಿದ್ದಿದ್ದಾರೆ. ಆಗ ಯತೀಶ್‌ ಕುಮಾರ್‌ ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಿಂಬದಿ ಸವಾರ ಹರ್ಷಿತ್‌ಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಸಂಚಾರ ಪೊಲೀಸರು ಹೇಳಿದರು.

ವಾಹನ ಚಾಲನೆ ವೇಳೆ ಇಬ್ಬರು ಮದ್ಯ ಸೇವಿಸಿದ್ದರು ಎಂಬುದು ಗೊತ್ತಾಗಿದೆ. ಜತೆಗೆ ಇಬ್ಬರೂ ಹೆಲ್ಮೆಟ್‌ ಕೂಡ ಹಾಕಿರಲಿಲ್ಲ ಎಂದು ಸಂಚಾರ ಪೊಲೀಸರು ಹೇಳಿದರು. ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಕಾಫಿರ್ ರನ್ನು ಕೊಂದರೆ ಸ್ವರ್ಗ ಪ್ರಾಪ್ತಿ?: ಮುಸ್ಲಿಂ ವಿದ್ವಾಂಸರಿಗೆ ಸಿ.ಟಿ.ರವಿ ಪ್ರಶ್ನೆ

ಟಾಟಾ ಏಸ್‌ ಚಾಲಕ ಸಾವು:
ಮತ್ತೊಂದು ಪ್ರಕರಣದಲ್ಲಿ ಟಾಟಾ ಏಸ್‌ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದುಕೊಂಡು ಉರುಳಿಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಎಲೆಕ್ಟ್ರಾನಿಕ್‌ ಸಿಟಿ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ನಾಗನಾಥಪುರದ ನಿವಾಸಿ ಮಾರಪ್ಪ(28) ಮೃತ ಚಾಲಕ. ಭಾನುವಾರ ಮಧ್ಯರಾತ್ರಿ 2.15ರ ಸುಮಾರಿಗೆ ಹೊಸೂರು ರಸ್ತೆಯ ವೀರಸಂದ್ರ ಜಂಕ್ಷನ್‌ನಲ್ಲಿ ವೇಗವಾಗಿ ಟಾಟಾ ಏಸ್‌ ಚಾಲನೆ ಮಾಡಿಕೊಂಡು ಹೋಗುತ್ತಿದ್ದರು. ಈ ವೇಳೆ ವಾಹನ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ವಾಹನ ನಾಲ್ಕೈದು ಪಲ್ಟಿಯಾಗಿದೆ. ಪರಿಣಾಮ ಮಾರಪ್ಪನಿಗೆ ಗಂಭೀರ ಗಾಯವಾಗಿದೆ. ಸ್ಥಳೀಯರು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫ‌ಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಸಂಚಾರ ಪೊಲೀಸರು ಹೇಳಿದರು. ಎಲೆಕ್ಟ್ರಾನಿಕ್‌ ಸಿಟಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್‌. ಸಂತೋಷ್‌

Karnataka: ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್‌. ಸಂತೋಷ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

robbers

Pakistan; ಡಕಾಯಿತರಿಂದ 3 ಹಿಂದೂ ಯುವಕರ ಅಪಹರಣ

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.