ಬೇಡಿಕೆ ಈಡೇರಿಸಲು ಸರ್ಕಾರ ಬದ್ಧ: ಬಸವರಾಜ ಬೊಮ್ಮಾಯಿ
ನಗರದಲ್ಲಿ ಸಂಚಾರ ದಟ್ಟಣೆ ನೀಗಿಸಲು 4 ಕಿ.ಮೀ ನಷ್ಟು ರಸ್ತೆ ಮೇಲ್ಸೇತುವೆ ನಿರ್ಮಿಸಬೇಕು
Team Udayavani, Feb 28, 2022, 6:08 PM IST
ಬೆಳಗಾವಿ: ಜಿಲ್ಲೆಯಲ್ಲಿ ರಾಜ್ಯ ಸರ್ಕಾರ ಕೈಗೊಳ್ಳಬೇಕಾದ ಅಭಿವೃದ್ಧಿ ಕೆಲಸಗಳು ಹಾಗೂ ಜಿಲ್ಲೆಯ ಖ್ಯಾತ ಸಾಹಿತಿಗಳು, ಕಲಾವಿದರ ಹೆಸರಿನಲ್ಲಿ ಟ್ರಸ್ಟ್‌ಗಳನ್ನು ರಚಿಸಬೇಕೆಂಬ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಮತ್ತು ಹಿರಿಯ ಸಾಹಿತಿಗಳು ಸೇರಿ ಸಲ್ಲಿಸಿದ ಬೇಡಿಕೆಗಳು ತಮ್ಮ ಗಮನದಲ್ಲಿದ್ದು ಅವುಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಬದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.
ರವಿವಾರ ಬೆಳಗ್ಗೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ಭೇಟಿ ಮಾಡಿದ ಕನ್ನಡ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ನೇತೃತ್ವದ ಹೋರಾಟಗಾರರ ಮತ್ತು ಹಿರಿಯ ರಂಗಕರ್ಮಿ ಬಿ.ಎಸ್. ಗವಿಮಠ ನೇತೃತ್ವದ ಸಾಹಿತಿಗಳ ನಿಯೋಗದ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಬೆಳಗಾವಿ ಜಿಲ್ಲಾ ಮಟ್ಟದ ಕಚೇರಿಗಳನ್ನು ಒಂದೇ ಕಟ್ಟಡದಲ್ಲಿ ಸ್ಥಾಪಿಸಲು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಯೇ ಬಹುಮಹಡಿ ಕಟ್ಟುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ನಗರದಲ್ಲಿ ಸಂಚಾರ ದಟ್ಟಣೆ ನೀಗಿಸಲು 4 ಕಿ.ಮೀ ನಷ್ಟು ರಸ್ತೆ ಮೇಲ್ಸೇತುವೆ ನಿರ್ಮಿಸಬೇಕು, ರಾಮದುರ್ಗ ತಾಲೂಕಿನ ಶಬರಿಕೊಳ್ಳ ಅಭಿವೃದ್ಧಿಪಡಿಸಿ ಪ್ರವಾಸಿ ಕೇಂದ್ರವನ್ನಾಗಿ ಮಾಡಬೇಕು. ಖ್ಯಾತ ರಂಗಕರ್ಮಿ ದಿ. ಏಣಗಿ ಬಾಳಪ್ಪ, ಖ್ಯಾತ ಕಾದಂಬರಿಕಾರ ದಿ. ಕೃಷ್ಣಮೂರ್ತಿ ಪುರಾಣಿಕ, ಖ್ಯಾತ ಸಾಹಿತಿಗಳಾದ ದಿ. ಡಿ.ಎಸ್. ಕರ್ಕಿ, ದಿ. ಎಸ್.ಡಿ. ಇಂಚಲ ಹಾಗೂ ಖ್ಯಾತ ಹಿಂದುಸ್ತಾನಿ ಗಾಯಕ ದಿ. ಕುಮಾರ ಗಂಧರ್ವ ಅವರುಗಳ ಹೆಸರಿನಲ್ಲಿ ಟ್ರಸ್ಟ್‌ಗಳನ್ನು ರಚಿಸಿ ಅವೆಲ್ಲವೂ ಒಂದೇ ಸೂರಿನಡಿ ಕಾರ್ಯ ನಿರ್ವಹಿಸುವಂತೆ ಮಾಡಬೇಕು ಎಂದು ನಿಯೋಗದ ಸದಸ್ಯರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಬೆಂಗಳೂರಿನ ಕನ್ನಡ ಪರ ಹೋರಾಟಗಾರರಾದ ಸಿ.ಕೆ. ರಾಮೇಗೌಡ, ಶಂಕರ ಹೂಗಾರ,ಬೆಳಗಾವಿ ಹೋರಾಟಗಾರಾದ ರಮೇಶ ಸೊಂಟಕ್ಕಿ, ಮೈನೋದ್ದೀನ್ ಮಕಾನದಾರ, ಶಿವಪ್ಪ ಶಮರಂತ, ವೀರೇಂದ್ರ ಗೋಬರಿ, ಸಾಹಿತಿಗಳಾದ ಬಸವರಾಜ ಗಾರ್ಗಿ, ಸುಭಾಷ ಏಣಗಿ, ಡಾ| ಬಸವರಾಜ ಏಣಗಿ, ಬೆಂಗಳೂರಿನ ವಿನಯಕುಮಾರ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸವದತ್ತಿ:ರೈಲು ಮಾರ್ಗ- ಸವದತ್ತಿಗೇ ಜಾಸ್ತಿ ಲಾಭ! ಆರ್ಥಿಕ ಅಭಿವೃದ್ಧಿಗೆ ನೆರವು…
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.