ಬಜೆಟ್ ಅಧಿವೇಶನ ಹಿನ್ನೆಲೆ: ಮಾ.4ರಿಂದ ಮಾ.30ವರೆಗೆ ನಿಷೇಧಾಜ್ಞೆ
Team Udayavani, Mar 1, 2022, 7:40 AM IST
ಬೆಂಗಳೂರು: ಬಜೆಟ್ ಅಧಿವೇಶನ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮಾ. 4ರಿಂದ ಮಾ.30ರ ವರೆಗೆ ವಿಧಾನಸೌಧ ಹಾಗೂ ಸುತ್ತಮುತ್ತಲಿನ 2 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶಿಸಿದ್ದಾರೆ.
ಬಜೆಟ್ ಅಧಿವೇಶನದ ಅವಧಿಯಲ್ಲಿ ವಿವಿಧ ರಾಜಕೀಯ ಪಕ್ಷಗಳು, ಸಂಘಟನೆಗಳು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮೆರವಣಿಗೆ, ಪ್ರತಿಭಟನೆ, ಧರಣಿ ಸತ್ಯಾಗ್ರಹ, ವಿಧಾನಸೌಧ ಮುತ್ತಿಗೆ ಇತರೆ ಹೋರಾ ಟ ಗಳು ನಡೆ ಯುವ ಸಾಧ್ಯ ತೆ ಯಿದೆ. ಅದರಿಂದ ಅಧಿವೇಶನದ ಕಾರ್ಯಕಲಾಪಗಳಿಗೆ ಅಡಚಣೆ, ಸಾರ್ವಜನಿಕ ನೆಮ್ಮದಿಗೆ ಭಂಗ, ಸುಗಮ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆಯಿದೆ. ಹೀಗಾಗಿ ಅಧಿವೇಶನದ ಕಾರ್ಯಕಲಾಪಗಳು ಸುಗಮವಾಗಿ ನಡೆಯಲು ಅನುವಾಗುವಂತೆ ಅಧಿವೇಶನ ನಡೆಯುವ 26 ದಿನಗಳ ಕಾಲ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ನಿಷೇಧಾಜ್ಞೆ ಜಾರಿಯಾಗುವ ಪ್ರದೇಶಗಳಲ್ಲಿ ಐದು ಅಥವಾ ಅಧಕ್ಕಿಂತ ಹೆಚ್ಚಿನ ಜನರು ಗುಂಪು ಸೇರುವಂತಿಲ್ಲ. ಮೆರವಣಿಗೆ ಮತ್ತು ಸಭೆ ನಡೆಸುವಂತಿಲ್ಲ. ಶಸ್ತ್ರಾಸ್ತ್ರಗಳು, ದೊಣ್ಣೆ, ಕತ್ತಿ, ಕಲ್ಲು ಇಟ್ಟಿಗೆ ಸೇರಿ ಯಾವುದೇ ಮಾರಕಾಸ್ತ್ರಗಳು, ಸ್ಫೋಟಕ ವಸ್ತು ಸಿಡಿಸುವುದು, ಕಲ್ಲು, ಕ್ಷಿಪಣಿಗಳನ್ನು ಎಸೆಯುವ ಸಾಧನೆಗಳ ಅಥವಾ ಉಪಕರಣಗಳನ್ನು ಒಯ್ಯುವಂತಿಲ್ಲ. ವ್ಯಕ್ತಿಗಳ, ಶವಗಳ ಪ್ರತಿಕೃತಿ ಪ್ರದರ್ಶನ, ಭಿತ್ತಿ ಪತ್ರ ಸೇರಿದಂತೆ ಯಾವುದೇ ವಸ್ತುಗಳು ಹಾಗೂ ಪದಾರ್ಥಗಳ ಪ್ರದರ್ಶನ ನಿಷೇಧಿಸಲಾಗಿದೆ. ಒಂದು ವೇಳೆ ಆದೇಶ ಉಲ್ಲಂಘಿ ಸಿದರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಬೇಕಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತರು ಆದೇಶದಲ್ಲಿ ಎಚ್ಚ ರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ:ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶನ
MUST WATCH
ಹೊಸ ಸೇರ್ಪಡೆ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.