ರಾಜಕೀಯ ಲಾಭಕ್ಕಾಗಿ ಪಾದಯಾತ್ರೆ: ಸಿಎಂ ಬೊಮ್ಮಾಯಿ
CM Bommai,ಸಿಎಂ ಬೊಮ್ಮಾಯಿ
Team Udayavani, Mar 1, 2022, 6:35 AM IST
ಹುಬ್ಬಳ್ಳಿ: ಮೇಕೆದಾಟು ಯೋಜನೆಯ ವಸ್ತು ಸ್ಥಿತಿಯ ಅರಿವಿದ್ದರೂ ಕಾಂಗ್ರೆಸ್ ನಾಯಕರು ರಾಜಕೀಯ ಲಾಭಕ್ಕಾಗಿ ಪಾದಯಾತ್ರೆ ಕೈಗೊಂಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಾದಯಾತ್ರೆಗೆ ಬಹಳ ಮಹತ್ವ ಕೊಡುವ ಆವಶ್ಯಕತೆ ಇಲ್ಲ. ಕಾಂಗ್ರೆಸ್ ಆಡಳಿತವಿದ್ದ ಸಂದರ್ಭ ಯೋಜನೆಗೆ ಡಿಪಿಆರ್ ಕೂಡ ಸಿದ್ಧಪಡಿಸಲು ಸಾಧ್ಯವಾಗಲಿಲ್ಲ. ಈ ಯೋಜನೆಗೆ ಅವರ ಕೊಡುಗೆ ಏನೆಂದು ಜನತೆ ಪ್ರಶ್ನಿಸುತ್ತಿದ್ದಾರೆ ಎಂದರು.
ಹೊರಟ್ಟಿ ಅನುಭವಸ್ಥರು
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು ಬಹಳ ಹಿರಿಯರು ಹಾಗೂ ಅನುಭವಸ್ಥರು. ಅವರ ರಾಜಕೀಯ ನಡೆ ಬಗ್ಗೆ ಮಾತನಾಡುವುದು ಸರಿಯಲ್ಲ. ಅವರು ಬಿಜೆಪಿ ಸೇರುವ ಬಗ್ಗೆ ಸೂಕ್ತ ಸಮಯದಲ್ಲಿ ತಮ್ಮ ನಿರ್ಧಾರ ಕೈಗೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದರು.
ಸಾರಿಗೆ ಚಿತ್ರಣ ಬದಲು
ರಾಜ್ಯದಲ್ಲಿ ಚಾಲನೆ ಸಿಗಲಿರುವ ಮಹತ್ವಾಕಾಂಕ್ಷಿ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಂದ ಮುಂದಿನ ದಿನ ಗಳಲ್ಲಿ ಕರ್ನಾಟಕದ ಸಾರಿಗೆ ಚಿತ್ರಣವೇ ಬದಲಾಗಲಿದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳ ಅಭಿವೃದ್ಧಿ ಪರವಾದ ಯೋಜನೆಗಳಿಂದ ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರಕ್ಕೆ ಭದ್ರ ಬುನಾದಿಯಾಗಲಿದೆ.
ಕೇಂದ್ರ ಸಚಿವ ನಿತಿನ ಗಡ್ಕರಿ ಅವರ ನೇತೃತ್ವದಲ್ಲಿ ಕರ್ನಾಟಕದಲ್ಲಿ ರಾಷ್ಟ್ರೀಯ ಹೆದ್ದಾರಿ ಯೋಜನೆಗಳು, ರಾಜ್ಯ ಹೆದ್ದಾರಿಗಳ ಉನ್ನತೀಕರಣದ ಯೋಜನೆಗಳು ಜಾರಿಯಾಗುತ್ತಿವೆ ಎಂದು ಹೇಳಿದ್ರು.
ಇದನ್ನೂ ಓದಿ:ಪುರಸಭೆ ಸಾಮಾನ್ಯ ಸಭೆಯಲ್ಲಿ ಸದಸ್ಯೆಯಿಂದ ವಿಡಿಯೋ ಚಿತ್ರಿಕರಣ : ವಿಪಕ್ಷ ಸದಸ್ಯರಿಂದ ಸಭಾತ್ಯಾಗ
ಸದ್ದು ಮಾಡಲು ಸಿದ್ದು, ಡಿಕೆಶಿ ಯತ್ನ:
ಹೊನ್ನಾಳಿ: ಕಾಂಗ್ರೆಸ್ ನಾಯಕರು ಕೈಗೊಂಡಿರುವ ಮೇಕೆದಾಟು ಪಾದಯಾತ್ರೆಯಿಂದ ಯಾವುದೇ ಪ್ರಯೋಜನವಿಲ್ಲ. ಖಾಲಿ ಡಬ್ಬ ಹೆಚ್ಚು ಸದ್ದು ಮಾಡುವಂತೆ ಸಿದ್ದರಾಮಯ್ಯ, ಡಿ.ಕೆ. ಶಿವ ಕುಮಾರ್ ಶಬ್ದ ಮಾಡುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಟೀಕಿಸಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರಕಾರ ತುಂಬಿದ ಕೊಡ. ಹಾಗಾಗಿ ಹೆಚ್ಚು ಶಬ್ದ ಮಾಡುವುದಿಲ್ಲ. ಈ ಹಿಂದೆ ಕೋವಿಡ್ ಇದ್ದಾಗ ಪಾದಯಾತ್ರೆ ಮಾಡಿ ರಾಜ್ಯಾದ್ಯಂತ ಕೊರೊನಾ ಹೆಚ್ಚಾಗುವಂತೆ ಮಾಡಿದರು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.