7ರಂದು ರಾಯಚೂರು ಬಂದ್‌ಗೆ ಕರೆ

Team Udayavani, Mar 1, 2022, 11:57 AM IST

16band

ರಾಯಚೂರು: ನವೋದಯ ಶಿಕ್ಷಣ ಸಂಸ್ಥೆ 371 ಜೆ ವಿರುದ್ಧ ನ್ಯಾಯಾಲಯದಲ್ಲಿ ದಾಖಲಿಸಿದ ರಿಟ್‌ ಅರ್ಜಿ ಹಿಂಪಡೆಯುವಂತೆ ಆಗ್ರಹಿಸಿ ಮಾ.7ರಂದು ರಾಯಚೂರು ಬಂದ್‌ಗೆ ಕರೆ ನೀಡಲಾಗಿದೆ ಎಂದು ಜೆಡಿಎಸ್‌ ಜಿಲ್ಲಾಧ್ಯಕ್ಷ ಎಂ.ವಿರುಪಾಕ್ಷಿ ಹೇಳಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಂಸ್ಥೆಯ ಮುಖ್ಯಸ್ಥರು ಕೋರ್ಟ್‌ ಸಲ್ಲಿಸಿದ ಅರ್ಜಿಯಲ್ಲಿ 371 ಜೆ ವಿರುದ್ಧದ ಅನೇಕ ಅಂಶಗಳು ಗಮನಕ್ಕೆ ಬಂದಿವೆ. ಈ ಸಂಸ್ಥೆಯ ಪರ ತೀರ್ಪು ಬಂದಲ್ಲಿ ಈ ಭಾಗಕ್ಕೆ ಸಿಕ್ಕಿರುವ ಮೀಸಲಾತಿಗೆ ಕೊಡಲಿ ಪೆಟ್ಟು ಬಿದ್ದಂತಾಗಲಿದೆ. ಅಲ್ಲದೇ, ಇದೇ ವಿಚಾರ ಮುಂದಿಟ್ಟುಕೊಂಡು ಇನ್ನೂ ಅನೇಕರು ನ್ಯಾಯಾಲಯಕ್ಕೆ ಹೋದರೆ ಕಷ್ಟವಾಗಲಿದೆ. ಹೀಗಾಗಿ ಈ ವಿಚಾರವನ್ನು ಆರಂಭಿಕ ಹಂತದಲ್ಲೇ ಮೊಟಕುಗೊಳಿಸಬೇಕಿದೆ ಎಂದರು.

ಪಕ್ಷಾತೀತವಾಗಿ ನಡೆಸಿದ ಹೋರಾಟಕ್ಕೆ ಮಣಿದು ಮೀಸಲಾತಿಯಡಿ 106 ವೈದ್ಯಕೀಯ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲು ಒಪ್ಪಿದ್ದಾರೆ. ಆದರೆ, ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿ ಹಿಂಪಡೆಯುವ ವಿಚಾರ ಮಾತ್ರ ತಿಳಿಸಿಲ್ಲ. ಈ ಕುರಿತು ಚರ್ಚಿಸಲು ರಾಜಕೀಯ ನಾಯಕರ ನೇತೃತ್ವದ ಸಭೆಗೆ ಸಂಸ್ಥೆ ಮುಖ್ಯಸ್ಥ ಎಸ್‌.ಆರ್‌.ರೆಡ್ಡಿ ಅವರಿಗೆ ಆಹ್ವಾನ ನೀಡಿದರೂ ಬಂದಿಲ್ಲ ಎಂದು ದೂರಿದರು.

ಅಂದು ಇಡೀ ರಾಯಚೂರು ಬಂದ್‌ ಮಾಡುವ ಕುರಿತು ಈಗಾಗಲೇ ಎಲ್ಲ ಸಂಘಟನೆಗಳ ಜತೆ ಚರ್ಚಿಸಲಾಗಿದೆ. ಶಾಲಾ-ಕಾಲೇಜುಗಳಿಗೆ ರಜೆ ನೀಡಲು ಮನವಿ ಮಾಡಲಾಗಿದೆ. ಸಾರಿಗೆ ಸಂಚಾರ ನಿಲ್ಲಿಸುವಂತೆಯೂ ಒತ್ತಾಯಿಸಲಾಗುವುದು. ತುರ್ತು ಸೇವೆ, ವೈದ್ಯಕೀಯ ಸೇವೆ ಹೊರತಾಗಿಸಿ ಯಾವುದೇ ರೀತಿ ಸೇವೆ ಇರುವುದಿಲ್ಲ. ಈ ಹೋರಾಟದ ಉದ್ದೇಶ ಸರ್ಕಾರಕ್ಕೆ ನಮ್ಮ ಸ್ಪಷ್ಟ ಸಂದೇಶ ರವಾನಿಸಬೇಕಿದ್ದು, ಮೀಸಲಾತಿಯಲ್ಲಿ ಆಗುವ ಅನ್ಯಾಯ ತಡೆಗಟ್ಟುವುದೇ ಆಗಿದೆ ಎಂದರು.

ಶಾಸಕ ಡಾ| ಶಿವರಾಜ್‌ ಪಾಟೀಲ್‌ ಮಾತನಾಡಿ, ಸರ್ಕಾರ ಸೀಟು ಹಂಚಿಕೆ ಮಾಡಿರುವುದು ಸಂಸ್ಥೆ ಅಪಥ್ಯವಾಗಿದೆ. 2012ರಿಂದ 371 ಜಾರಿಯಲ್ಲಿದ್ದರೂ ಯಾವುದೇ ಸಮಸ್ಯೆ ಆಗಿರಲಿಲ್ಲ. ಈಗ ಈ ಸಮಸ್ಯೆ ಎದುರಾಗಿದೆ. ಈ ಭಾಗದವರಿಗೆ ಮೊದಲು ಪ್ರವೇಶ ಸಿಗಬೇಕು ಎನ್ನುವುದು ನಮ್ಮ ನಿಲುವಾಗಿದೆ. 371 ಜೆ ಕಾಯ್ದೆಯಾಗಿದೆ. ಆದರೆ, ಇದನ್ನು ಒಪ್ಪದ ಎಸ್‌.ಆರ್‌ ರೆಡ್ಡಿ ಕಾನೂನು ಉಲ್ಲಂಘನೆ ಮಾಡಿದ್ದಾರೆ. ಕಾಯ್ದೆಯಡಿ ಗೊಂದಲ ಮೂಡಿಸಿ ಸರ್ಕಾರಕ್ಕೆ ವಂಚಿಸಿದ್ದಾರೆ. ಮಾ.8ರಂದು ಬಜೆಟ್‌ ಅಧಿವೇಶನ ನಡೆಯುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಾಸಕರು ಪಕ್ಷಾತೀತವಾಗಿ ಧ್ವನಿ ಎತ್ತುವರು. ಕಲ್ಯಾಣ ಕರ್ನಾಟಕ ಭಾಗದ ಶಾಸಕರು ಪ್ರಶ್ನೆ ಮಾಡಲು ತಿಳಿಸಲಾಗಿದೆ ಎಂದರು.

ಹೈದ್ರಾಬಾದ್‌ ಕರ್ನಾಟಕ ಹೋರಾಟ ಸಮಿತಿ ಸಂಚಾಲಕ ರಜಾಕ್‌ ಉಸ್ತಾದ್‌ ಮಾತನಾಡಿ, ಈ ಭಾಗದಲ್ಲಿದ್ದುಕೊಂಡು ಮೀಸಲಾತಿ ನೀಡಲು ಒಪ್ಪದಿದ್ದರೆ, ಬೇರೆ ಜಿಲ್ಲೆಯಲ್ಲಿರುವವರು ಮುಂದೆ ಆಕ್ಷೇಪ ಮಾಡುವ ಸಾಧ್ಯತೆ ಇದೆ. ಈಗ ಸರ್ಕಾರ ಮಾತ್ರ ನ್ಯಾಯಾಲಯ ಹೋರಾಟ ನಡೆಸಿದ್ದು, ನಮ್ಮ ಹೋರಾಟ ಸಮಿತಿಯಿಂದಲೂ ನ್ಯಾಯಾಲಯಕ್ಕೆ ಅರ್ಜಿ ಹಾಕಲಾಗುವುದು. ಅಲ್ಲದೇ, ಅನುದಾನ ರಹಿತ ಶಾಲಾ-ಕಾಲೇಜುಗಳ ಒಕ್ಕೂಟದಿಂದಲೂ ನ್ಯಾಯಾಂಗ ಹೋರಾಟ ನಡೆಸುವ ಕುರಿತು ಚಿಂತಿಸಲಾಗುತ್ತಿದೆ ಎಂದರು. ಮಾಜಿ ಶಾಸಕ ಎ.ಪಾಪಾರೆಡ್ಡಿ, ಮುಖಂಡ ರಮಾನಂದ್‌ ಯಾದವ್‌ ಗೋಷ್ಠಿಯಲ್ಲಿ ಇದ್ದರು.

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mosale

Raichur ಡಿ.ರಾಂಪುರದಲ್ಲಿ ಭಾರೀ ಗಾತ್ರದ ಮೊಸಳೆ ಸೆರೆ

10-ns-bosuaju

Raichur: ಬಿಜೆಪಿಯವರು ಮೈಮೇಲೆ ಬಂದಂತೆ ಆಡುತ್ತಿದ್ದಾರೆ: ಸಚಿವ ಎನ್.ಎಸ್.ಭೋಸರಾಜು

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

SIddu-Phone

Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್‌ಪಿಗೆ ಕರೆ 

Medical,Nursing ಕಾಲೇಜು ಹೆಚ್ಚು ಶುಲ್ಕ ಪಡೆದರೆ ಕ್ರಮ: ಡಾ|ಶರಣ ಪ್ರಕಾಶ

Medical,Nursing ಕಾಲೇಜು ಹೆಚ್ಚು ಶುಲ್ಕ ಪಡೆದರೆ ಕ್ರಮ: ಡಾ|ಶರಣ ಪ್ರಕಾಶ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.