ಫೆಬ್ರವರಿ ಜಿಎಸ್ಟಿ ಸಂಗ್ರಹ 1.33 ಲಕ್ಷ ಕೋ.ರೂ.
Team Udayavani, Mar 2, 2022, 7:00 AM IST
ಹೊಸದಿಲ್ಲಿ: ಕೊರೊನಾದ ಹೊಡೆತದ ನಡುವೆಯೂ ದೇಶದ ಜಿಎಸ್ಟಿ ಸಂಗ್ರಹದಲ್ಲಿ ಗಮನಾರ್ಹ ಸಾಧನೆ ಆಗಿದೆ.
ಫೆಬ್ರವರಿಯಲ್ಲಿ 1.33 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹವಾಗಿದೆ. ಆದರೂ ಜನವರಿಗೆ ಹೋಲಿಸಿದರೆ ಇದು ಕೊಂಚ ಕಡಿಮೆ. ಜನವರಿಯಲ್ಲಿ 1.40 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹವಾಗಿತ್ತು.
ಶೇಕಡವಾರು ಲೆಕ್ಕಾಚಾರದಲ್ಲಿ ಹೇಳುವುದಾದರೆ ಜಿಎಸ್ಟಿ ಸಂಗ್ರಹ ಶೇ. 18 ಏರಿಕೆಯಾಗಿದೆ. ಪ್ರಸಕ್ತ ವಿತ್ತೀಯ ವರ್ಷದಲ್ಲಿ ಸತತ ಐದನೇ ಬಾರಿಗೆ ಜಿಎಸ್ಟಿ ಸಂಗ್ರಹ 1.30 ಲಕ್ಷ ಕೋಟಿ ರೂ. ದಾಟಿದೆ.
ಇದನ್ನೂ ಓದಿ:ಸಾಲ ಕೊಡಿಸುವುದಾಗಿ ಹೇಳಿ ಮಹಿಳೆಯಿಂದ 35 ಸಾವಿರ ಹಣ ಪಡೆದು ವಂಚನೆ
ಸೆಸ್ ಸಂಗ್ರಹ ಇದೇ ಮೊದಲ ಬಾರಿಗೆ 10 ಸಾವಿರ ಕೋಟಿ ರೂ. ದಾಟಿದೆ. ಆಮದಿತ ಸರಕುಗಳಿಂದ ಶೇ. 38, ದೇಶಿಯ ವಹಿವಾಟುಗಳಿಂದ ಶೇ. 12ರಷ್ಟು ಆದಾಯ ಸಂಗ್ರಹವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.