![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Mar 3, 2022, 8:43 AM IST
ಮಾಸ್ಕೋ/ ಕೀವ್: ಯುದ್ಧ ಪೀಡಿತ ಉಕ್ರೇನ್ ನಲ್ಲಿ ಸಿಲುಕಿರುವ ತನ್ನ ನಾಗರಿಕರನ್ನು ಸ್ಥಳಾಂತರಿಸಲು ಭಾರತವು ತನ್ನ ಪ್ರಯತ್ನಗಳನ್ನು ಹೆಚ್ಚಿಸುತ್ತಿದೆ. ಆದರೆ ಈ ನಡುವೆ ರಷ್ಯಾ ಮತ್ತು ಉಕ್ರೇನ್ ಭಾರತೀಯ ವಿದ್ಯಾರ್ಥಿಗಳನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದಾರೆ ಎಂದು ಪರಸ್ಪರ ಆರೋಪಿಸಿದೆ.
ಉಕ್ರೇನ್ ಭಾರತೀಯ ವಿದ್ಯಾರ್ಥಿಗಳನ್ನು ಒತ್ತೆಯಾಳಾಗಿ ಇರಿಸಿದೆ ಎಂದು ರಷ್ಯಾ ಬುಧವಾರ ಹೇಳಿಕೊಂಡಿದೆ. ಖಾರ್ಕಿವ್‌ನಿಂದ ಭಾರತೀಯ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ರಷ್ಯಾ ಪ್ರಯತ್ನಿಸುತ್ತಿರುವಾಗ ಉಕ್ರೇನ್ ಪಡೆಗಳು ಭಾರತೀಯರನ್ನು ಒತ್ತೆಯಾಳಾಗಿ ಇರಿಸಿದೆ ಎಂದು ರಷ್ಯಾದ ರಕ್ಷಣಾ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
“ನಮ್ಮ ಮಾಹಿತಿಯ ಪ್ರಕಾರ, ಖಾರ್ಕಿವ್‌ನಲ್ಲಿ, ಉಕ್ರೇನಿಯನ್ ಅಧಿಕಾರಿಗಳು ಉಕ್ರೇನಿಯನ್ ಪ್ರದೇಶವನ್ನು ತೊರೆದು ಬೆಲ್ಗೊರೊಡ್‌ಗೆ ಹೋಗಲು ಬಯಸುವ ಭಾರತೀಯ ವಿದ್ಯಾರ್ಥಿಗಳ ದೊಡ್ಡ ಗುಂಪನ್ನು ಬಲವಂತವಾಗಿ ಬಂಧಿಸುತ್ತಿದ್ದಾರೆ.” ಎಂದು ಮೇಜರ್ ಜನರಲ್ ಇಗೊರ್ ಕೊನಾಶೆಂಕೋವ್ ಹೇಳಿದ್ದಾರೆ.
ಇದನ್ನೂ ಓದಿ:ಉಕ್ರೇನ್‍ನಲ್ಲಿ ಪಾಕಿಸ್ತಾನಿ ವಿದ್ಯಾರ್ಥಿಗಳ ಜೀವ ಉಳಿಸಿದ ಭಾರತದ ತ್ರಿವರ್ಣ ಧ್ವಜ!
“ಭಾರತೀಯ ನಾಗರಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲು ಸಶಸ್ತ್ರ ಪಡೆಗಳು ಸಿದ್ಧವಾಗಿವೆ. ಭಾರತದ ಹೇಳಿದಂತೆ ಅವರನ್ನು ತಮ್ಮ ಮಿಲಿಟರಿ ಸಾರಿಗೆ ವಿಮಾನಗಳು ಅಥವಾ ಭಾರತೀಯ ವಿಮಾನಗಳೊಂದಿಗೆ ರಷ್ಯಾದ ಪ್ರದೇಶದಿಂದ ಮನೆಗೆ ಕಳುಹಿಸಬೇಕಿದೆ” ಎಂದು ಹೇಳಿದ್ದಾರೆ.
ಈತನ್ಮಧ್ಯೆ ಭಾರತ, ಪಾಕಿಸ್ತಾನ, ಚೀನಾ ಮತ್ತು ಇತರ ದೇಶಗಳ ವಿದ್ಯಾರ್ಥಿಗಳು “ರಷ್ಯಾದ ಸಶಸ್ತ್ರ ಆಕ್ರಮಣದ ಒತ್ತೆಯಾಳುಗಳಾಗಿದ್ದಾರೆ” ಎಂದು ಉಕ್ರೇನ್ ಆರೋಪಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಕರೆ ಮಾಡಿದ ಗಂಟೆಗಳ ನಂತರ ರಷ್ಯಾ ಸಚಿವಾಲಯದ ಹೇಳಿಕೆಯನ್ನು ಬಿಡುಗಡೆ ಮಾಡಲಾಗಿದೆ. ಸಂಘರ್ಷದ ಪ್ರದೇಶಗಳಿಂದ ಭಾರತೀಯ ಪ್ರಜೆಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ ಬಗ್ಗೆ ಅವರು ಚರ್ಚಿಸಿದ್ದಾರೆ ಎಂದು ವರದಿಯಾಗಿದೆ.
“ಉಕ್ರೇನ್‌ನಲ್ಲಿನ ಪರಿಸ್ಥಿತಿಯನ್ನು ಇಬ್ಬರು ನಾಯಕರು ಪರಿಶೀಲಿಸಿದರು. ಅವರು ಸಂಘರ್ಷದ ಪ್ರದೇಶಗಳಿಂದ ಭಾರತೀಯ ಪ್ರಜೆಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ ಬಗ್ಗೆ ಚರ್ಚಿಸಿದರು” ಎಂದು ಪ್ರಧಾನ ಮಂತ್ರಿ ಕಚೇರಿ ಹೇಳಿಕೆ ಬಿಡುಗಡೆ ಮಾಡಿದೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
You seem to have an Ad Blocker on.
To continue reading, please turn it off or whitelist Udayavani.