”ಅಸಲಿ ಆಟ ಈಗ ಶುರು” ಎಂದ ವಿಕ್ರಾಂತ್ ರೋಣ; ಇಂಗ್ಲೀಷ್ ವರ್ಷನ್ ಡಬ್ಬಿಂಗ್ ಮುಗಿಸಿದ ಕಿಚ್ಚ
Team Udayavani, Mar 3, 2022, 11:46 AM IST
ದೇಶವೇ ಎದುರು ನೀಡುತ್ತಿರುವ ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಚಿತ್ರವು ಇಂಗ್ಲೀಷ್ ಭಾಷೆಯಲ್ಲೂ ತೆರೆಕಾಣುತ್ತಿದೆ. ರಂಗಿತರಂಗ ಖ್ಯಾತಿಯ ಅನೂಪ್ ಭಂಡಾರಿ ನಿರ್ದೇಶನದ ಚಿತ್ರದ ಒಂದೊಂದೇ ಮಾಹಿತಿ ಹೊರಬರುತ್ತಿದೆ.
ಇದೀಗ ನಿರ್ದೇಶಕ ಅನೂಪ್ ಭಂಡಾರಿ ಹೊಸ ವಿಚಾರವೊಂದನ್ನು ತಿಳಿಸಿದ್ದಾರೆ. ಅದು ವಿಕ್ರಾಂತ್ ರೋಣ ಇಂಗ್ಲೀಷ್ ವರ್ಷನ್ ಡಬ್ಬಿಂಗ್ ಬಗ್ಗೆ. ಈ ಬಗ್ಗೆ ಟ್ವೀಟ್ ಮಾಡಿರುವ ಅನೂಪ್, “ಕಿಚ್ಚ ಸುದೀಪ್ ಸರ್ ಇಂಗ್ಲಿಷ್ ಆವೃತ್ತಿಗೆ ಡಬ್ಬಿಂಗ್ ಪೂರ್ಣಗೊಳಿಸಿದ್ದಾರೆ. ಇಂಗ್ಲೀಷ್‌ನಲ್ಲಿ ಪೂರ್ಣ ಪ್ರಮಾಣದ ಕಮರ್ಷಿಯಲ್ ಚಲನಚಿತ್ರಕ್ಕೆ ಡಬ್ ಮಾಡಿದ ಕನ್ನಡದ ಮೊದಲ ಸೂಪರ್‌ಸ್ಟಾರ್ ಮತ್ತು ಭಾರತದ ಕೆಲವೇ ಕೆಲವು ವ್ಯಕ್ತಿಗಳಲ್ಲಿ ಒಬ್ಬರು” ಎಂದು ಬರೆದುಕೊಂಡಿದ್ದಾರೆ.
ಇಂಗ್ಲೀಷ್ ಭಾಷೆಯಲ್ಲಿ ಸುದೀಪ್ ಡೈಲಾಗ್ಸ್ ಕಂಡು ಕಿಚ್ಚನ ಅಭಿಮಾನಿಗಳು ಸಿಕ್ಕಾಪಟ್ಟೆ ಖುಷಿಯಾಗಿದ್ದಾರೆ. ವಿಕ್ರಾಂತ್ ರೋಣ’ ಸಿನಿಮಾದಲ್ಲಿ ಕಿಚ್ಚ ಸುದೀಪ್, ನಿರೂಪ್ ಭಂಡಾರಿ, ನೀತಾ ಅಶೋಕ್, ರವಿಶಂಕರ್ ಗೌಡ, ಮಧುಸೂದನ್ ರಾವ್, ವಾಸುಕಿ ವೈಭವ್ ಮುಂತಾದವರು ಅಭಿನಯಿಸಿದ್ದಾರೆ. ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಕಾಣಿಸಿಕೊಂಡಿದ್ದಾರೆ.
ಇದನ್ನೂ ಓದಿ:ಹಾಡಿನಲ್ಲಿ ಎಂಟ್ರಿಕೊಟ್ಟ ಕೌಟಿಲ್ಯ; ಕಿರುತೆರೆ ನಟ ಅರ್ಜುನ್ ರಮೇಶ್ ನಾಯಕ
ಜ್ಯಾಕ್ ಮಂಜು- ಶಾಲಿನಿ ಮಂಜು ನಿರ್ಮಾಣದ, ಅಜನೀಶ್ ಲೋಕನಾಥ್ ಸಂಗೀತ ನೀಡಿರುವ ‘ವಿಕ್ರಾಂತ್ ರೋಣ’ ಚಿತ್ರವು 14 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. 3D ವರ್ಷನ್ ನಲ್ಲಿರುವ ‘ವಿಕ್ರಾಂತ್ ರೋಣ’ ಸಿನಿಮಾ, 55 ದೇಶಗಳಲ್ಲಿ ವಿಶ್ವಾದ್ಯಂತ ಬಿಡುಗಡೆಯಾಗಲಿದೆ.
#VikrantRonaInEnglish @KicchaSudeep sir completes dubbing for the English version. First Kannada superstar & one of the few from India to dub for a full fledged commercial movie in English #VikrantRоna pic.twitter.com/xXAvJgAmts
— Anup Bhandari (@anupsbhandari) March 2, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.