ಕೆಜಿಎಫ್-2 ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್; ಅಧಿಕೃತ ಘೋಷಣೆ ಮಾಡಿದ ಹೊಂಬಾಳೆ ಫಿಲಂಸ್
Team Udayavani, Mar 3, 2022, 1:00 PM IST
ಬಹುನಿರೀಕ್ಷೆಯ ದೇಶದ ಚಿತ್ರ ಪ್ರೇಮಿಗಳೆಲ್ಲಾ ಎದುರು ನೋಡುತ್ತಿರುವ ಕೆಜಿಎಫ್-2 ಚಿತ್ರದ ಟ್ರೇಲರ್ ಬಿಡುಗಡೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ರಾಕಿಂಗ್ ಸ್ಟಾರ್ ಯಶ್ ನಟನೆಯ, ಪ್ರಶಾಂತ್ ನೀಲ್ ನಿರ್ದೇಶನದ ‘ಕೆಜಿಎಫ್-2’ ಚಿತ್ರದ ಟ್ರೇಲರ್ ಇದೇ ಮಾರ್ಚ್ 27ರಂದು ಬಿಡುಗಡೆಯಾಗಲಿದೆ.
ಈ ಬಗ್ಗೆ ಚಿತ್ರ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಘೋಷಣೆ ಮಾಡಿಕೊಂಡಿದೆ. “ಬಿರುಗಾಳಿಗಿಂತ ಮೊದಲು ಯಾವಾಗಲೂ ಗುಡುಗು ಬರುತ್ತದೆ. ಕೆಜಿಎಫ್ 2 ಚಿತ್ರದ ಟ್ರೇಲರ್ ಮಾರ್ಚ್ 27ರ ಸಂಜೆ 6.40ಕ್ಕೆ ಬಿಡುಗಡೆಯಾಗಲಿದೆ” ಎಂದು ಮಾಹಿತಿ ನೀಡಿದೆ.
ವಿಜಯ್ ಕಿರಗಂದೂರು ನಿರ್ಮಾಣದ ಕೆಜಿಎಫ್ ಚಿತ್ರವನ್ನು ಪ್ರಶಾಂತ್ ನೀಲ್ ನಿರ್ದೇಶನ ಮಾಡಿದ್ದಾರೆ. ಚಿತ್ರದ ಮೊದಲ ಭಾಗ ಬ್ಲಾಕ್ ಬಾಸ್ಟರ್ ಹಿಟ್ ಆಗಿದ್ದು, ಹೀಗಾಗಿ ಎರಡನೇ ಭಾಗಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ.
ಇದನ್ನೂ ಓದಿ:”ಅಸಲಿ ಆಟ ಈಗ ಶುರು” ಎಂದ ವಿಕ್ರಾಂತ್ ರೋಣ; ಇಂಗ್ಲೀಷ್ ವರ್ಷನ್ ಡಬ್ಬಿಂಗ್ ಮುಗಿಸಿದ ಕಿಚ್ಚ
ರಾಕಿಂಗ್ ಸ್ಟಾರ್ ಯಶ್ ಜೊತೆಗೆ, ಶ್ರೀನಿಧಿ ಶೆಟ್ಟಿ, ಸಂಜಯ್ ದತ್, ರವೀನಾ ಟಂಡನ್, ಪ್ರಕಾಶ್ ರೈ ಮುಂತಾದ ನಟರು ತಾರಾಂಗಣದಲ್ಲಿದೆ. ಚಿತ್ರಕ್ಕೆ ರವಿ ಬಸ್ರೂರು ಸಂಗೀತವಿದ್ದು, ಚಿತ್ರವು ಎಪ್ರಿಲ್ 14ರಂದು ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ.
There is always a thunder before the storm ⚡#KGFChapter2 Trailer on March 27th at 6:40 pm.
Stay Tuned: https://t.co/QxtFZcv8dy@Thenameisyash @prashanth_neel@VKiragandur @hombalefilms @HombaleGroup @duttsanjay @TandonRaveena @SrinidhiShetty7
#KGF2TrailerOnMar27 pic.twitter.com/4TBuGaaUKh— Hombale Films (@hombalefilms) March 3, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.