ಕುಂದಾಪುರ : ಬೃಹತ್ ಗಾತ್ರದ ಮಾರ್ಬಲ್ ಮೈಮೇಲೆ ಬಿದ್ದು ಓರ್ವ ಸಾವು, ಇನ್ನಿಬ್ಬರಿಗೆ ಗಾಯ
Team Udayavani, Mar 3, 2022, 8:26 PM IST
ಕುಂದಾಪುರ : ತ್ರಾಸಿ ಸಮೀಪದ ಕಂಚುಗೋಡು ಬೀಚ್ ಬಳಿ ಮಾರ್ಬಲ್ ಲಾರಿಯಿಂದ ಇಳಿಸುವ ವೇಳೆ ನಡೆದ ಅವಘಢದಲ್ಲಿ ಓರ್ವ ಸಾವನ್ನಪ್ಪಿದ್ದು, ಇನ್ನಿಬ್ಬರು ಗಾಯಗೊಂಡ ಘಟನೆ ಗುರುವಾರ ಸಂಜೆ 6 ಗಂಟೆ ಸುಮಾರಿಗೆ ಸಂಭವಿಸಿದೆ.
ಪಶ್ಚಿಮ ಬಂಗಾಲ ಮೂಲದ ಗಣಪತಿ ಸಾವನ್ನಪ್ಪಿದವರು ಎಂದು ತಿಳಿದು ಬಂದಿದೆ.
ಇನ್ನಿಬ್ಬರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದ್ದು, ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಹೇಗಾಯಿತು?
ಕಂಚುಗೋಡು ಬೀಚ್ ಸಮೀಪ ನಿರ್ಮಾಣವಾಗುತ್ತಿದ್ದ ಖಾಸಗಿ ರೆಸಾರ್ಟ್‌ವೊಂದರ ಕಾಮಗಾರಿ ಸಲುವಾಗಿ ಪಶ್ಚಿಮ ಬಂಗಾಲದಿಂದ ಲಾರಿಯಲ್ಲಿ ಮಾರ್ಬಲ್‌ಗಳನ್ನು ಬುಧವಾರ ತರಿಸಲಾಗಿದೆ. ಬೃಹತ್ ಸರಕು ಆಗಿರುವುದರಿಂದ ಬುಧವಾರದಿಂದಲೇ 5-6 ಮಂದಿಯ ತಂಡವು ಲಾರಿಯಿಂದ ಮಾರ್ಬಲ್‌ಗಳನ್ನು ಇಳಿಸುತ್ತಿದ್ದರು. ಗುರುವಾರ ಸಂಜೆ ವೇಳೆಗೆ ಅರ್ಧದಷ್ಟು ಇಳಿಸಿ ಆಗಿತ್ತು. ಸಂಜೆ 6 ಗಂಟೆ ಸುಮಾರಿಗೆ ಇಳಿಸುತ್ತಿರುವ ವೇಳೆ ಮೂವರ ಮೇಲೆ ಬೃಹತ್ ಮಾರ್ಬಲ್ ಮೇಲೆ ಬಿದ್ದಿದೆ.
ಇದನ್ನೂ ಓದಿ : ಬಜೆಟ್ ಗಾತ್ರ 2.50 ಲಕ್ಷ ಕೋಟಿಗೆ ಏರಿಕೆಯಾಗಲಿದೆ : ಶಾಸಕ ನಡಹಳ್ಳಿ
ಮಾರ್ಬಲ್ ಅಡಿಗೆ ಬಿದ್ದವರನ್ನು ಕೂಡಲೇ ಸ್ಥಳೀಯರೆಲ್ಲ ರಕ್ಷಿಸಲು ಪ್ರಯತ್ನಿಸಿದ್ದಾರೆ. ತತ್‌ಕ್ಷಣ ಸ್ಥಳಕ್ಕಾಗಮಿಸಿದ 24×7 ಇಬ್ರಾಹಿಂ ಗಂಗೊಳ್ಳಿ ಅವರು ಆಂಬುಲೆನ್ಸ್ ಮೂಲಕ ಮೂವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಆಸ್ಪತ್ರೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಇನ್ನಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಂಗೊಳ್ಳಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
Uppinangady: ಸರಣಿ ಅಪಘಾತ; 19 ಮಂದಿಗೆ ಗಾಯ
Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.