ಉಕ್ರೇನಿನಿಂದ ವಿದ್ಯಾರ್ಥಿಗಳನ್ನು ಕರೆತರಲು ಸರ್ವ ವ್ಯವಸ್ಥೆ: ಸಿ.ಸಿ. ಪಾಟೀಲ್
Team Udayavani, Mar 4, 2022, 6:22 AM IST
ಬೆಂಗಳೂರು: ಯುದ್ದಪೀಡಿತ ಉಕ್ರೇನಿನಲ್ಲಿ ಬಾಗಲಕೋಟೆ ಜಿಲ್ಲೆಯ ಒಟ್ಟು 21 ವಿದ್ಯಾರ್ಥಿಗಳು ಈ ತಾಯ್ನಾಡಿಗೆ ಮರಳುವ ಪ್ರಯತ್ನದಲ್ಲಿ ಸುರಕ್ಷಿತವಾಗಿದ್ದಾರೆ. ಅವರನ್ನು ಉಕ್ರೇನ್ ಗಡಿಯಿಂದಾಚೆಯಿಂದ ಪೋಲೆಂಡ್, ಹಂಗೇರಿ, ರೊಮೇನಿಯಾ ಮತ್ತಿತರ ಕಡೆಗಳಿಂದ ಭಾರತಕ್ಕೆ ಕರೆತರುವ ಪ್ರಯತ್ನ ಕೇಂದ್ರ ಸರಕಾರದಿಂದ ನಿರಂತರವಾಗಿ ಮುಂದುವರೆದಿದ್ದು, ಈಗಾಗಲೇ ಜಿಲ್ಲೆಯ ಪ್ರಜ್ವಲ ಘಟ್ಟದ ಎಂಬ ವಿದ್ಯಾರ್ಥಿಯು ಉಕ್ರೇನಿನಿಂದ ಕರ್ನಾಟಕಕ್ಕೆ ತಲುಪಿದ್ದಾರೆ. ಇತರ ಎಲ್ಲ ಕನ್ನಡಿಗರೂ ಸುರಕ್ಷಿತವಾಗಿ ತಾಯ್ನಾಡಿಗೆ ಮರಳುವ ವಿಶ್ವಾಸವಿದೆ ಎಂದು ಲೋಕೋಪಯೋಗಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ತಿಳಿಸಿದರು.
ಜಿಲ್ಲಾಧಿಕಾರಿಗಳು ಹಾಗೂ ಇತರ ಅಧಿಕಾರಿಗಳೊಂದಿಗೆ ಗುರುವಾರ ವಿಡಿಯೋ ಕಾನ್ಪರೇನ್ಸ್ ಮೂಲಕ ಸಭೆ ನಡೆಸಿದ ಬಳಿಕ ಪತ್ರಿಕಾ ಹೇಳಿಕೆ ನೀಡಿರುವ ಅವರು ಜಿಲ್ಲೆಯಿಂದ ಉಕ್ರೇನಿಗೆ ವಿದ್ಯಾಭ್ಯಾಸಕ್ಕೆ ತೆರಳಿದ್ದ ಒಟ್ಟು 21 ವಿದ್ಯಾರ್ಥಿಗಳ ಪಟ್ಟಿಯನ್ನು ತಯಾರು ಮಾಡಿ ರಾಜ್ಯ ಮತ್ತು ಕೇಂದ್ರ ಸರಕಾರಗಳಲ್ಲಿ ರಚಿಸಲಾದ ಸಹಾಯಕೇಂದ್ರಗಳ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿತ್ತು. ಅದರಂತೆ ರಾಜ್ಯ ಮತ್ತು ಕೇಂದ್ರ ಸರಕಾರಗಳು ಪರಸ್ಪರ ಸೂಕ್ತ ಸಂಯೋಜನೆಯಿಂದ ಕೆಲಸ ಮಾಡುತ್ತಾ ಎಲ್ಲ ವಿದ್ಯಾರ್ಥಿಗಳನ್ನು ಇಲ್ಲಗೆ ಕರೆತರುವ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಮರಳಿದ ವಿದ್ಯಾರ್ಥಿಯೊಂದಿಗೆ ಮಾತನಾಡಿದ ಸಿ.ಸಿ.ಪಾಟೀಲ:
ಉಕ್ರೇನಿನಿಂದ ಗುರುವಾರ ರಾಜ್ಯಕ್ಕೆ ತಲುಪಿರುವ ಬಾಗಲಕೋಟೆ ಜಿಲ್ಲೆಯ ಕೆರೂರಿನ ಪ್ರಜ್ವಲ್ ಘಟ್ಟದ ಅವರೊಂದಿಗೆ ಖುದ್ದಾಗಿ ದೂರವಾಣಿಯಲ್ಲಿ ಮಾತನಾಡಿದ ಸಿ.ಸಿ.ಪಾಟೀಲರು ಆತನ ಯೋಗಕ್ಷೇಮವನ್ನು ವಿಚಾರಿಸಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು ಈಗಾಗಲೇ ಪ್ರಜ್ವಲ್ ಸುರಕ್ಷಿತವಾಗಿ ತಾಯ್ನಾಡಿಗೆ ತಲುಪಿರುವುದು ನಮಗೆಲ್ಲ ಅತ್ಯಂತ ಸಂತಸ ತಂದಿದೆ. ಪ್ರಜ್ವಲ್ ಜೊತೆ ಮಾತನಾಡಿದಾಗ ಆತ ತಾನು ತಾಯ್ನಾಡಿಗೆ ಹೆಚ್ಚಿನ ಆತಂಕವಿಲ್ಲದೇ ಮರಳುವಂತಾಗಿರುವದಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಕಾರ ಮತ್ತು ಪ್ರಯಾಣಕ್ಕೆ ವಿಶೇಷ ವಿಮಾನದ ವ್ಯವಸ್ಥೆ ಕಾರಣವಾಯಿತು. ಇದಕ್ಕಾಗಿ ಆತ ಧನ್ಯವಾದ ಅರ್ಪಿಸಿದ್ದಾರೆ ಎಂದು ತಿಳಿಸಿದ್ದಾರೆ.
ಉಕ್ರೇನ್ನಲ್ಲಿ ಸಂಕಷ್ಟ ಅನುಭವಿಸುತ್ತಿರುವ ಜಿಲ್ಲೆಯ ವ್ಯಕ್ತಿಗಳಿಗೆ ಜಿಲ್ಲಾಡಳಿತವು ನೆರವಾಗಲು ವಿಶೇಷ ಸಹಾಯ ಕೇಂದ್ರ ಸ್ಥಾಪಿಸಿದ್ದು, ಜಿಲ್ಲೆಯ ಸಹಾಯವಾಣಿ ನಂ.08354-235512, 08354-235990 ಆಗಿದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ. ಉಕ್ರೇನ್ನಲ್ಲಿರುವ ವಿದ್ಯಾರ್ಥಿಗಳ ಪಾಲಕರನ್ನು ಭೇಟಿ ಮಾಡಿ ಮಾಹಿತಿ ಸಂಗ್ರಹಿಸಲು ಈಗಾಗಲೇ ಜಿಲ್ಲಾಡಳಿತದಿಂದ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಅವರು ಈಗಾಗಲೇ ಬಹುತೇಕ ಎಲ್ಲ ಪಾಲಕರನ್ನು ಖುದ್ದಾಗಿ ಭೇಟಿಯಾಗಿದ್ದಾರೆ. ಉಳಿದ ಎಲ್ಲ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರವು ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿರುವುದರಿಂದ ಪಾಲಕರು ಯಾವುದೇ ಆತಂಕಕ್ಕೊಳಗಾಗಬಾರದೆಂದು ಸಿ.ಸಿ.ಪಾಟೀಲ ಮನವಿ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.