ಕೊನೆ ದಿನದ ಪಾದಯಾತ್ರೆ : ಟ್ರಾಫಿಕ್ ಜಾಮ್ ಕಿರಿಕಿರಿ, ವಾಹನ ಸವಾರರ ಆಕ್ರೋಶ
Team Udayavani, Mar 4, 2022, 12:43 PM IST
ಬೆಂಗಳೂರು : ಪಾದಯಾತ್ರೆಯ ಅಂತಿಮ ದಿನವಾದ ಗುರುವಾರ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ ಜಿಲ್ಲೆಗಳಿಂದ ಸಾವಿರಾರು ಕಾರ್ಯಕರ್ತರು ಆಗಮಿಸಿದ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚಾರ ದಟ್ಟಣೆಯ ಬಿಸಿ ವಾಹನ ಸವಾರರರಿಗೆ ಜೋರಾಗಿಯೇ ತಟ್ಟಿತು.
ಅರಮನೆ ಮೈದಾನದಿಂದ ಬಸವನಗುಡಿ ವರೆಗೆ ಅಷ್ಟೇ ಅಲ್ಲದೆ ಬೇರೆ ಬೇರೆ ಊರುಗಳಿಂದ ಹಾಗೂ ನಗರದ ಹಲವು ಭಾಗಗಳಿಂದ ವಾಹನಗಳಲ್ಲಿ ಕಾರ್ಯಕರ್ತರು ಸಮಾವೇಶದಕ್ಕೆ ಪಾಲ್ಗೊಳ್ಳಲು ಬಂದಿದ್ದರಿಂದ ನಗರದ ಬಹುತೇಕ ಕಡೆ ಸಂಚಾರ ದಟ್ಟಣೆ ಉಂಟಾಗಿತ್ತು.
ಮಲ್ಲೇಶ್ವರ ಸುತ್ತಮುತ್ತಲಿನ ಪ್ರದೇಶಗಳು ಬೆಳಗ್ಗೆಯಿಂದ ಮಧ್ಯಾಹ್ನದ ವರೆಗೂ ಸಂಚಾರ ದಟ್ಟಣೆ ಕಂಡು ಬಂತು. ಶೇಷಾದ್ರಿಪುರಂ- ಮಲ್ಲೇಶ್ವರಂ ಸಂಪರ್ಕ ಕಲ್ಪಿಸುವ ರಸ್ತೆ ಬಂದ್
ಆಗಿದ್ದವು. ಆನಂದ್ ರಾವ್ ಸರ್ಕಲ್, ರೇಸ್ ಕೋರ್ಸ್ ರಸ್ತೆ, ಚಾಲುಕ್ಯ ಸರ್ಕಲ್, ರೈಲ್ವೆ ಪ್ಯಾರಲ್ ರೋಡ್ ಸೇರಿದಂತೆ ಹಲವೆಡೆ ಟ್ರಾಫಿಕ್ ಜಾಮ್ ಹಿನ್ನೆಲೆಯಲ್ಲಿ ವಾಹನ ಸವಾರರು ಪರದಾಟ
ನಡೆಸಿದರು. ಸದಾಶಿವನಗರದ ಶಿವಾಜಿ ಸರ್ಕಲ್ ನಲ್ಲಿ ಟ್ರಾಫಿಕ್ ಜಾಮ್ ಆಗಿತ್ತು. ಮೇಕೆದಾಟು ಪಾದ ಯಾತ್ರೆ ಹಿನ್ನೆಲೆಯಲ್ಲಿ ಮಲ್ಲೇಶ್ವರಂದತ್ತ ಸಾಗುವ ಬಿಎಂಟಿಸಿ ಸಂಚಾರ ಮಾರ್ಗದ
ಬದಲಾಗಿತು.¤ ಹೀಗಾಗಿ ಬಸ್ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸಿದರು.
ವಾಣಿಜ್ಯ ಚಟುವಟಿಕೆಗಳು ಹೆಚ್ಚಾಗಿ ನಡೆಯುವ ಮೆಜೆಸ್ಟಿಕ್, ಗಾಂಧಿನಗರ, ಚಿಕ್ಕಪೇಟೆ ಮಾರ್ಗದಲ್ಲಿ ಪಾದಯಾತ್ರೆ ಸಾಗಿದ್ದರಿಂದ ಕಿ.ಮೀ.ಗಟ್ಟಲೆ ವಾಹನಗಳು ರಸ್ತೆಯಲ್ಲಿ ನಿಲ್ಲುವಂತಾಗಿತ್ತು.
ಸಂಚಾರ ದಟ್ಟಣೆ ಬಿಸಿ ಅನುಭವಿಸಿದ ವಾಹನ ಸವಾರರು ಕೆಲವೆಡೆ ಆಕ್ರೋಶ ಹೊರಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ
Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್
Karnataka Lokayukta: ನಾಲ್ವರಿಗೆ ಲೋಕಾ ಶಾಕ್: 27 ಕೋಟಿ ರೂ. ಆಸ್ತಿ ಪತ್ತೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.