ಪುಣ್ಯಕೋಟಿ ದತ್ತು ಯೋಜನೆ,ಉಚಿತ ಬಸ್ ಪಾಸ್; ಬೊಮ್ಮಾಯಿ ಘೋಷಿಸಿದ ಹೊಸ ಯೋಜನೆಗಳು ಯಾವುವು?
ಹಾವೇರಿಯ ಹಿರೆಕೆರೋರಿನಲ್ಲಿ ಗೋವಿನ ಜೋಳ ಸಂಶೋಧನಾ ಸಂಸ್ಥೆ ಸ್ಥಾಪನೆ
Team Udayavani, Mar 4, 2022, 5:20 PM IST
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2022-23ನೇ ಸಾಲಿನ ಬಜೆಟ್ ಅನ್ನು ಶುಕ್ರವಾರ (ಮಾರ್ಚ್ 04) ಮಂಡಿಸಿದ್ದು, ಪ್ರಸಕ್ತ ಸಾಲಿನಲ್ಲಿ ತೆರಿಗೆಯನ್ನು ಹೆಚ್ಚಳ ಮಾಡದೆ, ಹಲವಾರು ಹೊಸ ಯೋಜನೆಗಳನ್ನು ಘೋಷಿಸಿದ್ದಾರೆ.
ಯಾವೆಲ್ಲಾ ಹೊಸ ಯೋಜನೆ ಘೋಷಿಸಲಾಗಿದೆ:
* ಗೋಶಾಲೆಗಳಲ್ಲಿನ ಗೋವುಗಳನ್ನು ಸಾರ್ವಜನಿಕರು, ಖಾಸಗಿ ಸಂಸ್ಥೆ ದತ್ತು ಪಡೆಯುವುದನ್ನು ಪ್ರೋತ್ಸಾಹಿಸಲು ಪುಣ್ಯಕೋಟಿ ದತ್ತು ಯೋಜನೆ
* ಯಾತ್ರಾಸ್ಥಳ ಶ್ರೀಶೈಲದಲ್ಲಿ 85 ಕೋಟಿ ರೂ ವೆಚ್ಚದಲ್ಲಿ ಯಾತ್ರಿ ನಿವಾಸ ಸಂಕೀರ್ಣ ನಿರ್ಮಾಣ
* ಮೀನುಗಾರರಿಗಾಗಿ ಮತ್ಸ್ಯ ಸಿರಿ ಯೋಜನೆ
*ಕಟ್ಟಡ ಕಾರ್ಮಿಕರಿಗೆ ರಿಯಾಯಿತಿ ಬಸ್ ಪಾಸ್ ಯೋಜನೆ.
*ಕಟ್ಟಡ ಕಾರ್ಮಿಕರಿಗಾಗಿ 100 ಹೈಟೆಕ್ ಸಂಚಾರಿ ಕ್ಲಿನಿಕ್ ಪ್ರಾರಂಭ
*ನಿರಂತರವಾಗಿ ಕೆಲಸಕ್ಕಾಗಿ ವಲಸೆ ಹೋಗುವ ಕಟ್ಟಡ ಕಾರ್ಮಿಕರಿಗಾಗಿ ಸುಸಜ್ಜಿತವಾದ ತಾತ್ಕಾಲಿಕ ವಸತಿ ಗೃಹ ನಿರ್ಮಾಣ
* ಬಳ್ಳಾರಿಯಲ್ಲಿ ನೂತನ ಕೃಷಿ ಕಾಲೇಜು ನಿರ್ಮಾಣ
* ಬೆಳಗಾವಿಯಲ್ಲಿ ನೂತನ ಕೃಷಿ ಕಾಲೇಜು ನಿರ್ಮಾಣ
* ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗದಲ್ಲಿ ಶ್ರೀ ನಾರಾಯಣ ಗುರು ವಸತಿ ಶಾಲೆ ಆರಂಭ
* ಯಾಣದಲ್ಲಿ ರೋಪ್ ವೇ ನಿರ್ಮಾಣಕ್ಕೆ ಕ್ರಮ
* ಯೆಲ್ಲೋ ಬೋರ್ಡ್ ಚಾಲಕರ ಮಕ್ಕಳ ಉನ್ನತ ಶಿಕ್ಷಣಕ್ಕೆ ವಿದ್ಯಾನಿಧಿ ಯೋಜನೆ
* ನೇಕಾರರ ಮಕ್ಕಳಿಗೆ ಶಿಕ್ಷಣಕ್ಕೆ ವಿದ್ಯಾರ್ಥಿ ವೇತನ ಯೋಜನೆ ಆರೋಗ್ಯ ಸೌಲಭ್ಯಕ್ಕೆ ವಿಶೇಷ ಯೋಜನೆ *
* ಹಾವೇರಿಯ ಹಿರೆಕೆರೋರಿನಲ್ಲಿ ಗೋವಿನ ಜೋಳ ಸಂಶೋಧನಾ ಸಂಸ್ಥೆ ಸ್ಥಾಪನೆ
* ಹಾವೇರಿಯಲ್ಲಿ 1 ಲಕ್ಷ ಲೀಟರ್ ಸಾಮರ್ಥ್ಯದ ಮೆಗಾ ಡೈರಿ ಸ್ಥಾಪನೆ
* ಕಟ್ಟಡ ಕಾರ್ಮಿಕರಿಗಾಗಿ 100 ಹೈಟೆಕ್ ಸಂಚಾರಿ ಕ್ಲಿನಿಕ್ ಆರಂಭ
* ರಾಮನಗರದ ಅರ್ಚಕರಹಳ್ಳಿಯಲ್ಲಿ 600 ಕೋಟಿ ರೂ. ವೆಚ್ಚದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಆರಂಭ
* ರಾಷ್ಟ್ರೀಯ ಶಿಕ್ಷಣ ನೀತಿಯನ್ನು ದೇಶದಲ್ಲಿ ಮೊದಲ ಬಾರಿಗೆ ರಾಜ್ಯದಲ್ಲಿ ಆರಂಭ
* ರೈತರಿಗೆ ರಿಯಾಯಿತಿ ದರದಲ್ಲಿ 24 ಸಾವಿರ ಕೋಟಿ ರೂ. ಸಾಲ.
* ಮುಂದಿನ ಎರಡು ವರ್ಷದಲ್ಲಿ 25 ಲಕ್ಷ ಮನೆಗಳಿಗೆ ನಲ್ಲಿಗಳ ಮೂಲಕ ನೀರಿನ ಸಂಪರ್ಕ
* ರಾಜ್ಯ ಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ ಆಯೋಜನೆ
* ಆಳ ಸಮುದ್ರ ಮೀನುಗಾರಿಕೆ ಉತ್ತೇಜನಕ್ಕೆ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಸಂಯೋಜನೆಯೊಂದಿಗೆ ನೂರು ಆಳ ಸಮುದ್ರ ಮೀನುಗಾರಿಕಾ ಹಡಗುಗಳಿಗೆ ನೆರವು ನೀಡಲು ಮತ್ಸ್ಯಸಿರಿ ಯೋಜನೆ ಜಾರಿ
*ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮುಖ್ಯಮಂತ್ರಿ ವಿದ್ಯಾರ್ಥಿ ಮಾರ್ಗದರ್ಶಿನಿ ಎಂಬ ಹೊಸ ಯೋಜನೆ * ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆಹಾರ ಪಾರ್ಕ್ ಸ್ಥಾಪನೆ
* ರಾಜ್ಯದಲ್ಲಿ ರೇಷ್ಮೆ ಬೆಳೆಗಾರರಿಗೆ ಅತ್ಯಾಧುನಿಕ ಮಾರುಕಟ್ಟೆ ಸೌಲಭ್ಯ
* ರಾಯಚೂರಿನಲ್ಲಿ ಗ್ರೀನ್ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ ನಿರ್ಮಾಣ
* ಮೈಸೂರು ವಿಮಾನ ನಿಲ್ದಾಣ ರನ್ ವೇ ವಿಸ್ತರಣೆ
* ದೇಸಿ ಕ್ರೀಡೆ ನಿರ್ಮಾಣ ಉತ್ತೇಜನಕ್ಕೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕ್ರೀಡಾ ಅಂಕಣ ನಿರ್ಮಾಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.