ಅಲ್ ಖೈದಾ ಸಂಪರ್ಕ: ಅಸ್ಸಾಂನಲ್ಲಿ ಬಾಂಗ್ಲಾ ಪ್ರಜೆ ಸೇರಿ ಐವರ ಬಂಧನ
Team Udayavani, Mar 5, 2022, 2:45 PM IST
ದಿಸ್ಪುರ : ಅಸ್ಸಾಂನ ಬಾರ್ಪೇಟಾ ಜಿಲ್ಲೆಯಲ್ಲಿ ಅಲ್-ಖೈದಾ ಉಗ್ರ ಗುಂಪಿನೊಂದಿಗೆ ಸಂಪರ್ಕ ಹೊಂದಿದ್ದ ಬಾಂಗ್ಲಾದೇಶಿ ಪ್ರಜೆ ಸೇರಿದಂತೆ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕ ಭಾಸ್ಕರ್ ಜ್ಯೋತಿ ಮಹಾಂತ ಶನಿವಾರ ಹೇಳಿದ್ದಾರೆ.
ರಾಜ್ಯ ಪೊಲೀಸರ ವಿಶೇಷ ವಿಭಾಗವು ಹಂಚಿಕೊಂಡ ಗುಪ್ತಚರ ವರದಿಯನ್ನು ಆಧರಿಸಿ, ಬಾರ್ಪೇಟಾ ಪೊಲೀಸರು ಹೌಲ್ಯಾಂಡ್ ಕಲ್ಗಾಚಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರದೇಶಗಳಿಂದ ಐವರನ್ನು ಬಂಧಿಸಿದ್ದಾರೆ ಎಂದು ಮಹಾಂತ ಹೇಳಿದ್ದಾರೆ.
ಪೊಲೀಸರ ಪ್ರಕಾರ, ಬಾಂಗ್ಲಾದೇಶದ ಪ್ರಜೆ, ಎಂಡಿ ಸುಮನ್ ಅಲಿಯಾಸ್ ಸೈಫುಲ್ ಇಸ್ಲಾಂ ಎಂದು ಗುರುತಿಸಲಾಗಿದ್ದು, ಎಕ್ಯೂಐಎಸ್ಗೆ ಜೆಹಾದಿ ಕೆಲಸಕ್ಕೆ ಬರ್ಪೇಟಾವನ್ನು ಬೇಸ್ ಆಗಿ ಅಭಿವೃದ್ಧಿಪಡಿಸುವ ಪ್ರಯತ್ನದಲ್ಲಿ ಇತರ ನಾಲ್ವರಿಗೆ ದುಷ್ಪ್ರೇರಣೆ ನೀಡಿದ್ದ ಎಂದು ತಿಳಿದು ಬಂದಿದೆ.
ಬಂಧಿತರ ಬಳಿ ಇದ್ದ ದಾಖಲೆಗಳು ಮತ್ತು ಎಲೆಕ್ಟ್ರಾನಿಕ್ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಜಿಪಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.