ನವಲಿ ಡ್ಯಾಂ ನಿರ್ಮಾಣಕ್ಕೆ 1000 ಕೋಟಿ ಶೀಘ್ರ ಟೆಂಡರ್ ಗೆ ಅಂತರರಾಜ್ಯ ಸಭೆ: ಶಾಸಕ ದಡೇಸೂಗೂರು
Team Udayavani, Mar 5, 2022, 5:30 PM IST
ಗಂಗಾವತಿ: ತುಂಗಭದ್ರಾ ಡ್ಯಾಂನಲ್ಲಿ ತುಂಬಿರುವ ಸುಮಾರು 37 ಟಿಎಂಸಿ ಹೂಳಿನಿಂದಾಗಿ ಡ್ಯಾಂ ನಲ್ಲಿ ಹೆಚ್ಚು ನೀರು ಸಂಗ್ರಹವಾಗದೇ ನದಿಯ ಮೂಲಕ ಸಮುದ್ರ ಸೇರುತ್ತಿದೆ. ಇದನ್ನು ತಪ್ಪಿಸಲು ನವಲಿ ಹತ್ತಿರ ಸಮನಾಂತರ ಜಲಾಶಯ ನಿರ್ಮಿಸುವ ಯೋಜನೆ ರೂಪಿಸಲಾಗಿದ್ದು ಶೀಘ್ರ ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯಗಳ ಜತೆ ಒಪ್ಪಂದ ಮಾಡಿಕೊಂಡು ಕೇಂದ್ರ ಸರಕಾರದ ನಿರಾಪೇಕ್ಷಣಾ ಪತ್ರ ಪಡೆದು ಇದೇ ಸರಕಾರದ ಅವಧಿಯಲ್ಲಿ ಜಾಗತಿಕ ಮಟ್ಟದ ಟೆಂಡರ್ ಕರೆಯಲಾಗುತ್ತದೆ ಎಂದು ಕನಕಗಿರಿ ಶಾಸಕ ದಡೇಸೂಗೂರು ಬಸವರಾಜ ಹೇಳಿದರು.
ಅವರು ನಗರದ ಅಶೋಕ ಹೊಟೇಲ್ ನಲ್ಲಿ ಮರಳಿ, ಸಿದ್ದಾಪೂರ ಹೋಬಳಿಯ ಬಿಜೆಪಿ ಕಾರ್ಯಕರ್ತರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ತುಂಗಭದ್ರಾ ಡ್ಯಾಂನಲ್ಲಿ ತುಂಬಿರುವ ಹೂಳು ತೆಗೆಯುವುದು ಅವೈಜ್ಞಾನಿಕ ಎಂದು ತಜ್ಞರು ವರದಿ ಕೊಟ್ಟ ನಂತರ ಮಳೆಗಾಲದಲ್ಲಿ ನದಿ ಮೂಲಕ ಸಮುದ್ರ ಸೇರುವ ನೀರನ್ನು ಉಳಿತಾಯ ಮಾಡಿ ಕೊಪ್ಪಳ ರಾಯಚೂರು ಜಿಲ್ಲೆಯ ಅಚ್ಚುಕಟ್ಟು ರೈತರಿಗೆ ನೀರೊದಗಿಸಲು ನವಲಿ ಸಮನಾಂತರ ಜಲಾಶಯ ನಿರ್ಮಾಣದ ಡಿಪಿಆರ್ ಸಿದ್ದ ಮಾಡಲಾಗಿದ್ದು ಸದ್ಯ ರಾಜ್ಯ ಬಜೆಟ್ ನಲ್ಲಿ 1000 ಕೋಟಿ ಅನುದಾನ ಮೀಸಲಿರಿಸಲಾಗಿದೆ. ಅಂತರರಾಜ್ಯ ಒಪ್ಪಿಗೆ ನಂತರ ಕಾಮಗಾರಿಗೆ ವೇಗ ಸಿಗಲಿದೆ. ರೈತರ ದಶಕಗಳ ಕನಸು ನನಸು ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿಗೆ ಸ್ಪಂದಿಸಿ 1000 ಕೋಟಿ ರೂ. ಕೊಟ್ಟಿರುವುದು ಇಡೀ ಕ್ಷೇತ್ರ ಮತ್ತು ಅಚ್ಚುಕಟ್ಟು ರೈತರಿಗೆ ಉಪಯೋಗವಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿ.ಪಂ. ಮಾಜಿ ಸದಸ್ಯ ಪರಶುರಾಮ ಜಂತಗಲ್, ವೀರನಗೌಡ, ಚನ್ನಬಸವ, ಬರಗೂರು ನಾಗರಾಜ ಸೇರಿ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.