ಮಹಿಳೆ ನಾಯಕತ್ವ ಗುಣ ಬೆಳೆಸಿಕೊಳ್ಳಲಿ; ಡಾ| ಕಿರಣ ಬೇಡಿ

ಆತ್ಮನಿರ್ಭರ ಸಮಾಜ ನಿರ್ಮಾಣ ಮಾಡುವಲ್ಲಿ ಶರಣರ ಪಾತ್ರ ಬಹು ಮುಖ್ಯವಾಗಿದೆ.

Team Udayavani, Mar 5, 2022, 6:06 PM IST

ಮಹಿಳೆ ನಾಯಕತ್ವ ಗುಣ ಬೆಳೆಸಿಕೊಳ್ಳಲಿ; ಡಾ| ಕಿರಣ ಬೇಡಿ

ಗೋಕಾಕ: ಮಹಿಳೆಯರು ಜೀವಿಸುವ ಕಲೆಯನ್ನು ಕರಗತ ಮಾಡಿಕೊಳ್ಳುವುದೇ ನಾಯಕತ್ವವಾಗಿದೆ. ಮಹಿಳೆಯರು ಅಂತಹ ನಾಯಕತ್ವವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಾಧಕರಾಗಬೇಕು ಎಂದು ದೇಶದ ಮೊದಲ ಮಹಿಳಾ ಐಪಿಎಸ್‌ ಅಧಿಕಾರಿ ಡಾ| ಕಿರಣ ಬೇಡಿ ಹೇಳಿದರು.

ಶುಕ್ರವಾರ ನಗರದ ಶೂನ್ಯ ಸಂಪಾದನ ಮಠದ ಕಾಯಕಯೋಗಿ ಲಿಂ| ಬಸವ ಮಹಾ ಸ್ವಾಮೀಜಿಗಳವರ 17ನೇ ಪುಣ್ಯಸ್ಮರಣೋತ್ಸವದ ನಿಮಿತ್ತ ಮಠದ ವತಿಯಿಂದ ಹಮ್ಮಿಕೊಂಡ ಮಹಿಳಾ ಸಮಾವೇಶ ಸಮಾರಂಭದಲ್ಲಿ ಶ್ರೀ ಮಠದ ವತಿಯಿಂದ ನೀಡಲಾದ ಕಾಯಕಶ್ರೀ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.

ವಿದ್ಯಾರ್ಥಿ ಜೀವನದಲ್ಲಿ ತಂತ್ರಜ್ಞಾನದ ಸದು ಪಯೋಗ ಪಡೆದುಕೊಂಡರೆ ಮುಂದೆ ಒಳ್ಳೆಯ ಅವಕಾಶಗಳು ದೊರೆಯುತ್ತವೆ. ಪಾಲಕರು ಸಹ ಮಕ್ಕಳ ಭವಿಷ್ಯದ ಬಗ್ಗೆ ಕಾಳಜಿ ವಹಿಸಿ, ಉನ್ನತ ವ್ಯಾಸಂಗ ಮಾಡಿಸಿ ಸಮಾಜದಲ್ಲಿ ಸ್ವಾವಲಂಬಿ ಯಾಗಿ ಬದುಕಲು ಪ್ರೋತ್ಸಾಹಿಸಬೇಕು ಎಂದರು. ಸ್ತ್ರೀಯರ ಬೆಳವಣಿಯು ಪುರಷರ ಬೆಳೆವಣಿ ಗೆಗಿಂತ ಕಡಿಮೆ ಇರುವುದರಿಂದ ಸ್ತ್ರೀಯರು ಇಂದು ಹಿಂದೆ ಉಳಿದಿದ್ದಾರೆ. ಇದನ್ನು ಹೊಗಲಾಡಿಸಲು ಶಿಕ್ಷಕರು ಮತ್ತು ಪೋಷಕರು ಮುಂದಾಗಬೇಕು.

ಸ್ತ್ರೀಯರು ಎಲ್ಲಾ ರಂಗದಲ್ಲಿ ಸಾಧನೆ ಮಾಡುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಅದನ್ನು ಅವರಿಗೆ ತೋರಿಸಿಕೊಡುವ ಕಾರ್ಯ ಶಿಕ್ಷಕ ಮತ್ತು ಪಾಲಕರಿಂದ ಆಗಬೇಕು ಅಂದಾಗ ಮಾತ್ರ ಮಹಿಳೆಯರು ಮುಂದೆ ಬರಲು ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಮಾನವೀಯತೆಯ ಧರ್ಮ ಸಮಾಜದಲ್ಲಿ ದೊಡ್ಡ ಧರ್ಮವಾಗಿದೆ. ಆತ್ಮನಿರ್ಭರ ಸಮಾಜ ನಿರ್ಮಾಣ ಮಾಡುವಲ್ಲಿ ಶರಣರ ಪಾತ್ರ ಬಹು ಮುಖ್ಯವಾಗಿದೆ. ಬಸವಣ್ಣನವರಂತ ಶರಣರು ಕಾಯಕವೇ ಕೈಲಾಸ ಎಂದು ಸಾರಿದ್ದಾರೆ. ಅಂತಹ ಶರಣರ ತತ್ವಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಮಾಜ ಸುಧಾಕರಾಗಬೇಕು ಎಂದರು. ಮಹಿಳಾ ಸಮಾವೇಶವನ್ನು ಸಂಸದೆ ಮಂಗಲ ಅಂಗಡಿ ಉದ್ಘಾಟಿಸಿ, ಮಾತನಾಡಿದರು.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಹಾಗೂ ವಿದ್ಯಾರ್ಥಿಗಳನ್ನು ಸತ್ಕರಿಸಿ, ಗೌರವಿಸಲಾಯಿತು. ಓಲೆಮಠ ಜಮಖಂಡಿಯ ಡಾ.ಅಭಿನವಕುಮಾರ ಚೆನ್ನಬಸವ ಸ್ವಾಮಿಗಳು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ವೇದಿಕೆಯ ಮೇಲೆ ಕಾರ್ಯಕ್ರಮದ ನೇತೃತ್ವ  ವಹಿಸಿದ್ದ ಶೂನ್ಯ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ಸ್ವಾಮಿಗಳು, ಡಾ| ವಿಶ್ವನಾಥ್‌  ಶಿಂದೋಳಿಮಠ, ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ, ಸೇವಂತಾ ಮುಚ್ಚಂಡಿಹಿರೇಮಠ, ಸುಸ್ಮಿತಾ ಭಟ್ಟ್ ಉಪಸ್ಥಿತರಿದ್ದರು.ಶಿಕ್ಷಕರಾದ ಆರ್‌.ಎಲ್‌.ಮಿರ್ಜಿ, ಎಸ್‌.ಕೆ ಮಠದ ನಿರೂಪಿಸಿ, ವಂದಿಸಿದರು. ಕೊನೆಯಲ್ಲಿ ಧಾರವಾಡದ ರತಿಕಾ ನೃತ್ಯ ನಿಕೇತನ ತಂಡದವರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.

ಟಾಪ್ ನ್ಯೂಸ್

Bangladesh:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Bangla:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bangladesh:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Bangla:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

10

Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ

9

Udupi: ಬಿಎಸ್ಸೆನ್ನೆಲ್‌ ಟವರ್‌ ನಿರ್ವಹಣೆ ಹೊಣೆ ಪಂಚಾಯತ್‌ ಹೆಗಲಿಗೆ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

8

Hampankatte: ಸಿಟಿ ಮಾರ್ಕೆಟ್‌ ರಸ್ತೆಗೆ ಬೇಕಿದೆ ಕಾಯಕಲ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.