ವೇತನ ತಾರತಮ್ಯ ಸರಿಪಡಿಸುವ ಬಗ್ಗೆ ಬಜೆಟ್‌ನಲ್ಲಿ ಉತ್ತರವಿಲ್ಲ
Team Udayavani, Mar 5, 2022, 9:15 PM IST
ಬೆಂಗಳೂರು: ಶಿಕ್ಷಕರ ಮತ್ತು ಉಪನ್ಯಾಸಕರ ವೇತನ ತಾರತಮ್ಯ ಸರಿಪಡಿಸುವ ಬಗ್ಗೆ ಬಜೆಟ್‌ನಲ್ಲಿ ಉತ್ತರವಿಲ್ಲ ಎಂದು ವಿಧಾನ ಪರಿಷತ್ತಿನ ಮಾಜಿ ಸದಸ್ಯ ಹಾಗೂ ಕೆಪಿಸಿಸಿ ವಕ್ತಾರ ರಮೇಶ್ ಬಾಬು ಹೇಳಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಅವರು ಆಯವ್ಯಯದ ಒಟ್ಟು ಹಣದಲ್ಲಿ ಶೇ.12ರಷ್ಟು ಭಾಗವನ್ನು ಶಿಕ್ಷಣಕ್ಕೆ ನೀಡಿದ್ದರೂ ಇದರಲ್ಲಿ ಶೇ.90ರಷ್ಟು ವೇತನ ಮತ್ತು ಆಡಳಿತದ ವೆಚ್ಚವಾಗಿದೆ ಎಂದು ತಿಳಿಸಿದ್ದಾರೆ.
ಶಿಕ್ಷಣ ಇಲಾಖೆ ಶೇ.15ರಷ್ಟು ಅನುದಾನ ಅಗತ್ಯವಿದ್ದು ಇದನ್ನು ರಾಜ್ಯದ ಅಭಿವೃದ್ದಿಯ ದೃಷ್ಟಿಯಿಂದ ಗಂಭೀರವಾಗಿ ಪರಿಗಣಿಸಿ ಪರಿಷ್ಕೃತ ಅಯವ್ಯಯದಲ್ಲಿ ಅವಕಾಶ ನೀಡಿ ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರರ ಹಿತಾಸಕ್ತಿ ಹಾಗೂ ಶಿಕ್ಷಣ ಇಲಾಖೆಯ ಹಿತಾಸಕ್ತಿಯನ್ನು ಸಂರಕ್ಷಿಸಬೇಕಾಗಿದೆ ಎಂದು ಹೇಳಿದ್ದಾರೆ.
ಹೊಸ ಪಿಂಚಣಿ ಯೋಜನೆ ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರರ ಜೀವನೋಪಾಯಕ್ಕೆ ಮಾರಕವಾಗಿದ್ದು ಸರ್ಕಾರ ಬಜೆಟ್‌ನಲ್ಲಿ ಹಳೆ ಪಿಂಚಣಿ ಯೋಜನೆ ಮರು ಜಾರಿ ಮಾಡುವ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಇದರಿಂದಾಗಿ ರಾಜ್ಯ ಸರ್ಕಾರದ ಅಡಿಯಲ್ಲಿ ಕೆಲಸ ಮಾಡುವ ಶೇ. 50ಕ್ಕೂ ಹೆಚ್ಚು ನೌಕರರು ಅತಂತ್ರ ಪರಿಸ್ಥಿತಿಗೆ ಒಳಗಾಗಿದ್ದಾರೆ ಎಂದು ತಿಳಿಸಿದ್ದಾರೆ.
ಕೈವಾರ ತಾತಯ್ಯ ಅವರ ಜನ್ಮ ದಿನವನ್ನು ಮಾ.27ರಂದು ಪ್ರತಿ ವರ್ಷ ಸರ್ಕಾರದ ವತಿಯಿಂದ ಆಚರಿಸಲಾಗುವುದು ಎಂದು ಸರ್ಕಾರ ಘೋಷಣೆ ಮಾಡಿರುವುದು ಸಂತಸದ ವಿಚಾರವಾಗಿದೆ. ಇದರ ಜತೆಗೆ ಕೈವಾರ ತಾತಯ್ಯನವರ ಅಧ್ಯಯನ ಪೀಠ ಸ್ಥಾಪನೆ ಮಾಡಿ ಅವರ ಪ್ರವಚನ,ಕೀರ್ತನೆ ಮತ್ತು ಗ್ರಂಥಗಳ ಸಂರಕ್ಷಣೆಗೆ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್ ಜಾರಕಿಹೊಳಿ
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.