![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Mar 6, 2022, 12:40 PM IST
ಕಲಬುರಗಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಸ್ತವವಾಗಿ ಅಭಿವೃದ್ಧಿಗೆ ಆದ್ಯತೆ ನೀಡದೇ ಬರೀ ಪ್ರಚಾರದ ನಿಟ್ಟಿನಲ್ಲಿ ಬಜೆಟ್ ಮಂಡಿಸಿದ್ದನ್ನು ನೋಡಿದರೆ ಅವಧಿ ಮುನ್ನ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆವಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸುಳಿವು ನೀಡಿದರು.
ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು, ಅವಧಿಪೂರ್ವ ಚುನಾವಣೆ ಬಂದರೆ ಅದನ್ನು ಎದುರಿಸಲು ಜೆಡಿಎಸ್ ಸಜ್ಜಾಗಿದೆ ಎಂದು ಹೇಳಿದರು.
ಬಜೆಟ್ ಮಂಡಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ತಾವೇ ನೀರಾವರಿ ತಜ್ಞ, ಪರಿಣಿತ ಎಂದು ಹೇಳಿಕೊಳ್ಳುತ್ತಿದ್ದಾರೆ. ರಾಜ್ಯದ ಜನತೆಗೆ ನೀರಾವರಿ ವಿಷಯದಲ್ಲಿ ಮೂರು ನಾಮ ಹಾಕಲು ತಯಾರಾಗಿದ್ದಾರೆ. ಯುವಕರಿಗೆ ಉದ್ದೋಗ ಕೊಡುವ ನಿಟ್ಟಿನಲ್ಲಿ ಈ ಬಜೆಟ್ ಸಂಪೂರ್ಣ ನಾಶ ಮಾಡಿದ್ದಾರೆ ಎಂದು ಟೀಕಿಸಿದರು.
ಇದನ್ನೂ ಓದಿ:ಬೆಳೆಯುತ್ತಿರುವುದು ಸಹಿಸಲಾಗದೇ ಕೆಲ ಕಿಡಿಗೇಡಿಗಳಿಂದ ಕೊಲೆ : ಹರ್ಷ ನಿವಾಸದಲ್ಲಿ ಬಿಎಸ್ ವೈ
ಜೆಡಿಎಸ್ ಪಕ್ಷ ಕಾಂಗ್ರೆಸ್, ಬಿಜೆಪಿ ಯಾರಿಗೂ ಹತ್ತಿರ ಇಲ್ಲ. ತಮಗೆ ಯಾವಾಗ ಬೇಕೋ ಅವಾಗ ನಮ್ಮನ್ನು ರೈಟು, ಲೆಫ್ಟ್ ಗೆ ಉಪಯೋಗ ಮಾಡಿಕೊಳ್ಳಲು ಹತ್ತಿರ ಬರ ಮಾಡಿಕೊಳ್ಳುತ್ತಾರೆ. ನಮಗೆ ಎರಡೂ ಪಕ್ಷಗಳ ಅನುಭವವಾಗಿದೆ. ನಮಗೀಗ ಲೈಫ್ಟೂ ಬೇಡ, ರೈಟು ಬೇಡ. ನೇರ ಹೋಗೋಣವೆಂಬ ತೀರ್ಮಾನದಲ್ಲಿದ್ದೇವೆ ಎಂದು ಎಚ್ ಡಿಕೆ ವಿವರಣೆ ನೀಡಿದರು.
ಉಕ್ರೇನ್ ನಲ್ಲಿನ ಭಾರತೀಯರ ರಕ್ಷಣೆ ವಿಚಾರ: ದೇಶದಲ್ಲಿ ವೈದ್ಯಕೀಯ ಹಾಗೂ ಇತರ ಕೋರ್ಸುಗಳ ಶಿಕ್ಷಣ ಅವಕಾಶ ವಂಚಿತರಾಗಿ ಉಕ್ರೇನ್‌ಗೆ ಹೋಗುತ್ತಿದ್ದಾರೆ. ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಕ್ಷಣ ಸಿಗುತ್ತಿಲ್ಲ. ನಮ್ಮಲ್ಲೆ ಉನ್ನತ ಶಿಕ್ಷಣ ಕೈಗೆಟಕುವ ದರದಲ್ಲಿ ಸಿಕ್ಕಿದ್ರೆ ಉಕ್ರೇನ್‌ನಲ್ಲಿ ಪ್ರಾಣ ಕಳೆದುಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ. ನೀಟ್ ವ್ಯವಸ್ಥೆಯಿಂದ ಅನೇಕ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತೊಂದರೆಯಾಗ್ತಿದೆ. ಉಕ್ರೇನ್‌ನಲ್ಲಿ ಸಿಲುಕಿರುವ ಎಲ್ಲಾ ವಿದ್ಯಾರ್ಥಿಗಳು ಸುರಕ್ಷಿತವಾಗಿ ಮರಳಿ ಬರಲು ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಮೂರು ತಿಂಗಳು ಹಿಂದೆಯೇ ಭಾರತಕ್ಕೆ ಯುದ್ದದ ಬಗ್ಗೆ ಸೂಕ್ಷ್ಮ ಅರಿವು ಇತ್ತು. ಹೀಗಿದ್ದ ಮೇಲೂ ಭಾರತೀಯ ವಿದ್ಯಾರ್ಥಿಗಳನ್ನು ಮುಂಚೆಯೇ ಕರೆ ತರುವಲ್ಲಿ ಕೇಂದ್ರ ವಿಫಲತೆ ಹೊಂದಿದೆ. ಇನ್ಮುಂದೆಯಾದರೂ ವೈದ್ಯಕೀಯ ವಿದ್ಯಾರ್ಥಿಗಳ ಮುಂದಿನ ಶಿಕ್ಷಣ ಪೂರ್ಣಗೊಳ್ಳಲು ಪರ್ಯಾಯ ಕ್ರಮ ಕೈಗೊಳ್ಳಬೇಕೆಂದು ಮಾಜಿ ಸಿಎಂ ಕುಮಾರಸ್ವಾಮಿ ಒತ್ತಾಯಿಸಿದರು.
ಕಲಬುರಗಿಯ ಪಾಲಿಕೆಯಲ್ಲಿ ಯಾರ ಜತೆ ಮೈತ್ರಿ ಎಂಬುದನ್ನು ಈಗಲೇ ಹೇಳುವುದು ಸರಿಯಲ್ಲ. ಚುನಾವಣೆ ವಿಷಯ ಹೈಕೋರ್ಟ್ ನಲ್ಲಿದೆ. ಅಂತಿಮ ತೀರ್ಪು ಹೊರ ಬಂದ ನಂತರ ಚರ್ಚಿಸಲಾಗುವುದು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಇದೇ ಸಂದರ್ಭದಲ್ಲಿ ಹೇಳಿದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.