ರಣಜಿ ಟ್ರೋಫಿ: ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಕರ್ನಾಟಕ
Team Udayavani, Mar 7, 2022, 6:30 AM IST
ಚೆನ್ನೈ: ಪುದುಚೇರಿಗೆ ಫಾಲೋಆನ್ ಹೇರುವ ಮೂಲಕ ಇನ್ನಿಂಗ್ಸ್ ಗೆಲುವು ಸಾಧಿಸಿದ ಕರ್ನಾಟಕ, “ಎಲೈಟ್ ಸಿ’ ವಿಭಾಗದ ಅಗ್ರಸ್ಥಾನಿಯಾಗಿ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದೆ.
ಕರ್ನಾಟಕ 3 ಪಂದ್ಯಗಳಿಂದ ಒಟ್ಟು 16 ಅಂಕ ಗಳಿಸಿತು.ನೇರವಾಗಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಉಳಿದ ತಂಡಗಳೆಂದರೆ ಮಧ್ಯಪ್ರದೇಶ, ಬಂಗಾಲ, ಮುಂಬಯಿ, ಉತ್ತರಾಖಂಡ, ಪಂಜಾಬ್ ಮತ್ತು ಉತ್ತರಪ್ರದೇಶ. ಉಳಿದಂತೆ ಜಾರ್ಖಂಡ್ ಮತ್ತು ನಾಗಾಲ್ಯಾಂಡ್ ಪ್ರೀ-ಕ್ವಾರ್ಟರ್ ಫೈನಲ್‌ನಲ್ಲಿ ಸೆಣಸಲಿವೆ.
ಪುದುಚೇರಿ ವಿರುದ್ಧ ಕರ್ನಾಟಕ ಇನ್ನಿಂಗ್ಸ್ ಹಾಗೂ 20 ರನ್ನುಗಳಿಂದ ಗೆದ್ದು ಬಂದಿತು. ಕರ್ನಾಟಕದ 453ಕ್ಕೆ ಉತ್ತರವಾಗಿ ಪುದುಚೇರಿ 241ಕ್ಕೆ ಆಲೌಟ್ ಆಯಿತು. ಫಾಲೋಆನ್ ಬಳಿಕ 192ಕ್ಕೆ ಕುಸಿಯಿತು. ಶ್ರೇಯಸ್ ಗೋಪಾಲ್ 5, ಪ್ರಸಿದ್ಧ್ ಕೃಷ್ಣ 3 ವಿಕೆಟ್ ಉರುಳಿಸಿದರು. ಮೂಲತಃ ಕರ್ನಾಟಕದವರಾದ ಪವನ್ ದೇಶಪಾಂಡೆ ಅಜೇಯ 54 ರನ್ ಹೊಡೆದು ಪುದುಚೇರಿಯ ದ್ವಿತೀಯ ಸರದಿಯ ಟಾಪ್ ಸ್ಕೋರರ್ ಎನಿಸಿದರು.
ಸಂಕ್ಷಿಪ್ತ ಸ್ಕೋರ್: ಕರ್ನಾಟಕ 8 ವಿಕೆಟಿಗೆ 453 ಡಿಕ್ಲೇರ್. ಪುದುಚೇರಿ-241 ಮತ್ತು 192 (ಪವನ್ ದೇಶಪಾಂಡೆ ಅಜೇಯ 54, ಸುಬೋತ್ ಭಾಟಿ 37, ಶ್ರೇಯಸ್ ಗೋಪಾಲ್ 82ಕ್ಕೆ 5, ಪ್ರಸಿದ್ಧ್ ಕೃಷ್ಣ 38ಕ್ಕೆ 3). ಪಂದ್ಯಶ್ರೇಷ್ಠ: ಪಡಿಕ್ಕಲ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Singapore: ಇಂದಿನಿಂದ ವಿಶ್ವ ಚೆಸ್: ಗುಕೇಶ್-ಲಿರೆನ್ ಮುಖಾಮುಖಿ
Australia: ಪರ್ತ್‌ಗೆ ಆಗಮಿಸಿದ ರೋಹಿತ್ ಶರ್ಮ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.