ಮಾರ್ಚ್ 13 ಕ್ಕೆ ಮಂಜುಗುಣಿಯಲ್ಲಿ ನೌಕಾ ವಿಹಾರೋತ್ಸವ,ಅಶ್ವ ರಥೋತ್ಸವ
Team Udayavani, Mar 7, 2022, 3:06 PM IST
ಶಿರಸಿ: ಕರ್ನಾಟಕದ ತಿರುಪತಿ ಎಂದೇ ಹೆಸರಾದ ತಾಲೂಕಿನ ಮಂಜುಗುಣಿಯ ಶ್ರೀ ವೆಂಕಟರಮಣ ದೇವರ ನೌಕಾ ವಿಹಾರೋತ್ಸವ, ಅಶ್ವ ರಥೋತ್ಸವ, ಭಕ್ತರಿಂದ ಸಾಮೂಹಿಕ ಸತ್ಯನಾರಾಯಣ ವೃತ ಕಥಾ ಪೂಜೆ ಹಾಗೂ ಈ ವರ್ಷ ವಿಶೇಷವಾಗಿ ಜಯ ವಿಜಯರ ಪಂಚ ಲೋಹದ ಮೂರ್ತಿ ಅನಾವರಣ ಕಾರ್ಯಕ್ರಮ ಮಾರ್ಚ್ 13ರಂದು ನಡೆಯಲಿದೆ.
ಅಂದು ಬೆಳಿಗ್ಗೆ 9:30 ವೆಂಕಟೇಶ ದೇವರಲ್ಲಿ ಪೂಜೆ, 10ಕ್ಕೆಭಕ್ತರಿಂದ ಸಾಮೂಹಿಕ ಸತ್ಯನಾರಾಯಣ ವೃತ ಕಥಾ ಪೂಜೆ ಆರಂಭವಾಗಲಿದೆ. ದೇವಸ್ಥಾನದ ದ್ವಾರ ನಿಯಮಕ್ಕೆ ಹೊಂದುವಂತೆ ಪಂಚಲೋಹದಿಂದ ನಿರ್ಮಿಸಿದ ಜಯ ವಿಜಯರ ಮೂರ್ತಿ ಅನಾವರಣ ಇದೇ ವೇಳೆ ಆಗಲಿದೆ.
ಸಂಜೆ 5ಕ್ಕೆ ಸಾಮೂಹಿಕ ಪ್ರಾರ್ಥನೆಯೊಂದಿಗೆ ಕ್ಷೇತ್ರದ ಪವಿತ್ರ ಚಕ್ರತೀರ್ಥ ಕೆರೆಯಲ್ಲಿ ಸಾಲಂಕೃತಗೊಂಡ ದೋಣಿಯಲ್ಲಿ ತಿರುಮಲಯೋಗಿಗಳಿಂದ ಪೂಜಿಸಲ್ಪಟ್ಟ ಶ್ರೀ ಭೂ ಸಹಿತನಾದ ಶ್ರೀ ವೆಂಕಟರಮಣ ದೇವರ ನೌಕಾ ವಿಹಾರೋತ್ಸವ ನಡೆಯಲಿದೆ. ಕೆರೆಯ ದಡದಲ್ಲಿ ರಜತಮಯ ಅಶ್ವ ರಥದಲ್ಲಿ ಶ್ರೀ ಭೂ ರಮಣನಾದ ಶ್ರೀನಿವಾಸ ದೇವರ ತೀರ್ಥ, ತೀರ, ವಿಹಾರ ಉತ್ಸವಗಳು ನಡೆಯಲಿವೆ.
ಉತ್ಸವ ಮೂರ್ತಿಗಳ ವೈಭವ ಮಹೋತ್ಸವ ದೀಪಾಲಕೃಂತ ಕೆರೆಯಲ್ಲಿ ತೀರ್ಥಾರತಿಯೊಂದಿಗೆ ಸಂಪನ್ನ ಆಗಲಿದೆ.
ದೇವಸ್ಥಾನದ ಎದುರಿನ ಕಲ್ಯಾಣ ವೇದಿಕೆಯಲ್ಲಿ ಉತ್ಸವ ಮೂರ್ತಿಗಳೊಂದಿಗೆ ರಾಜ ಭೋಗಾರ್ಪಣೆ, ಪಟ್ಟಗಾಣಿಕೆ ಸಮರ್ಪಣೆ, ತೀರ್ಥ ಪ್ರಸಾದ ವಿತರಣೆ, ಮಧ್ಯಾಹ್ನ ಪ್ರಸಾದ ಭೋಜನ ಕೂಡ ನಡೆಯಲಿದೆ.
ಭಕ್ತಾದಿಗಳು ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಳ್ಳಲು ಅವಕಾಶ ಇದ್ದು, ಅಕ್ಕಿ, ಕಾಯಿ, ಬೆಲ್ಲ, ತುಪ್ಪ, ತರಕಾರಿ ಇತರ ಸುವ ವಸ್ತುಗಳನ್ನು ನೀಡಬಹುದು. ವಿವರಗಳಿಗೆ 8277419657 ಗೆ ಸಂಪರ್ಕ ಮಾಡಬಹುದಾಗಿದೆ ಎಂದು ದೇವಸ್ಥಾನದ ಪ್ರಧಾನ ಅರ್ಚಕ ವಿ.ಶ್ರೀನಿವಾಸ ಭಟ್ಟ ಮಂಜುಗುಣಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Karinja: ಅಪಾಯಕಾರಿ ವಿದ್ಯುತ್ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.