ಶ್ರಮಿಕರ, ರೈತರ, ಅಭಿವೃದ್ಧಿಪರ ಬಜೆಟ್‌


Team Udayavani, Mar 7, 2022, 4:29 PM IST

Untitled-1

ಹಾಸನ: ರಾಜ್ಯ ಸರ್ಕಾರದ 2022-23ನೇ ಸಾಲಿನ ಬಜೆಟ್‌ ಶ್ರಮಿಕರ, ರೈತರ ಹಾಗೂ ಜನಪರವಾದ ಬಜೆಟ್‌ ಆಗಿದೆ ಎಂದು ಶಾಸಕ ಪ್ರೀತಂಗೌಡ ಹಾಗೂ ಜಿಲ್ಲಾ ಬಿಜೆಪಿ ಮುಖಂಡರು ಹರ್ಷ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ, ಶಾಸಕ ಪ್ರೀತಂಗೌಡ, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್‌.ಕೆ.ಸುರೇಶ್‌ ಇತರೆ ಮುಖಂಡರು, ಶ್ರಮಿಕರ ವರ್ಗಗಳಾದ ಪೌರ ಕಾರ್ಮಿಕರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರ ಮಾಸಿಕ ಗೌರವಧನ ಹೆಚ್ಚಳವನ್ನು ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. ರೈತರ ಕಲ್ಯಾಣ ಕಾರ್ಯಕ್ರಮಗಳಿಗೂ ಮುಖ್ಯಮಂತ್ರಿಯವರು ಆದ್ಯತೆ ನೀಡಿದ್ದಾರೆ ಎಂದರು.

ಹಾಸನ ಜಿಲ್ಲೆಯ ಅಭಿವೃದ್ಧಿ ಯೋಜನೆಗಳಿಗೂ ಬಜೆಟ್‌ನಲ್ಲಿ ಒತ್ತು ನೀಡಲಾಗಿದೆ. ಹಾಸನಕ್ಕೆ ವಿವಿ ಘೋಷಣೆ ಮಾಡಿದ್ದಾರೆ. ಹಾಸನ ನಗರದ ಹೊರ ವಲಯದಲ್ಲಿ ಹೇಮಗಂಗೋತ್ರಿ ಸ್ನಾತಕೋತ್ತರ ಕೇಂದ್ರವನ್ನು ಆಡಳಿತ ಕೇಂದ್ರವಾಗಿ ರಿಸಿಕೊಂಡು ಜಿಲ್ಲೆಯ ಎಲ್ಲ ಕಾಲೇಜುಗಳ ಆಡಳಿತ ಮತ್ತು ಮೇಲ್ವಿಚಾರಣೆ ನಿರ್ವಹಿಸುವ ವಿವಿ ಪ್ರಾರಂಭವಾಗಲಿದೆ. ಇನ್ನು ಮುಂದೆ ಮೈಸೂರು ವಿವಿಯಿಂದ ಜಿಲ್ಲೆಯ ಕಾಲೇಜುಗಳು ಬೇರ್ಪಟ್ಟು ಹಾಸನ ವಿವಿ ವ್ಯಾಪ್ತಿಗೆ ಒಳಪಡಲಿವೆ ಎಂದು ಹೇಳಿದರು.

ಆನೆ ತಡೆ ಯೋಜನೆ ಹಾಸನಕ್ಕೆ ಸಿಂಹಪಾಲು: ಕಾಡಾನೆಗಳ ಹಾವಳಿ ತಡೆಗೆ ಮೂರು ಜಿಲ್ಲೆಗಳಿಗೆ 100ಕೋಟಿ ರೂ.ಅನುದಾನವನ್ನು ಮುಖ್ಯಮಂತ್ರಿ ಅವರು ಘೋಷಣೆ ಮಾಡಿದ್ದಾರೆ. ಹಾಸನ ಜಿಲ್ಲೆಗೂ ಈ ಅನುದಾನದಲ್ಲಿ ಸಿಂಹಪಾಲು ಸಿಗಲಿದ್ದು, ಮಲೆನಾಡುಭಾಗದಲ್ಲಿ ಕಾಡಾನೆಗಳ ಹಾವಳಿ ತಡೆಗೆ ರೈಲ್ವೆ ಕಂಬಿಗಳ ಬೇಲಿ ನಿರ್ಮಾಣವಾಗಲಿದೆ ಎಂದು ತಿಳಿಸಿದರು.

ಹಾಸನ-ಬೇಲೂರು-ಚಿಕ್ಕಮಗಳೂರು ರೈಲು ಮಾರ್ಗದ ನಿರ್ಮಾಣಕ್ಕೆ ಚಾಲನೆ ನೀಡುವುದಾಗಿಯೂ ಬಜೆಟ್‌ನಲ್ಲಿ ಮುಖ್ಯಮಂತ್ರಿ ಪ್ರಸ್ತಾಪಿಸಿದ್ದಾರೆ. ಈ ಎಲ್ಲ ಘೋಷಣೆಗಳು ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗುವುದರ ಜೊತೆಗೆ ರಾಜ್ಯದ ಆರ್ಥಿಕಾಭಿವೃದ್ಧಿಗೆ ಉತ್ತೇಜನಕಾರಿಯಾಗಲಿವೆ ಎಂದರು.

ಜಿಲ್ಲೆಯ ಪ್ರವಾಸೋದ್ಯಮಕ್ಕೆ ಪೂರಕವಾದ ಪ್ರಸ್ತಾಪವನ್ನೂ ಮುಖ್ಯಮಂತ್ರಿ ಘೋಷಣೆ ಮಾಡಿರುವುದು ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ. ಮೈಸೂರು-ಶ್ರೀರಂಗಪಟ್ಟಣ-ಹಾಸನ-ಬೇಲೂರು- ಹಳೆಬೀಡು ಪ್ರವಾಸಿ ವೃತ್ತ ರೂಪಿಸುವುದು ಹಾಗೂ ಬೇಲೂರು, ಹಳೆಬೀಡು, ಸೋಮನಾಥಪುರ ದೇವಾಲಯಗಳನ್ನು ಯುನೆಸ್ಕೋ ವಿಶ್ವ ಪಾರಂಪರಿಕ ಪಟ್ಟಿಗೆ ಸೇರ್ಪಡೆ ಮಾಡುವ ಕೇಂದ್ರ ಸರ್ಕಾರದ ಪ್ರಸ್ತಾವನೆಗೆ ಸಹಕಾರ ನೀಡುವುದಾಗಿ ಮುಖ್ಯಮಂತ್ರಿಯವರು ಘೋಷಣೆ ಮಾಡಿದ್ದಾರೆ.

ಪ್ರವಾಸಿ ಮಾರ್ಗದರ್ಶಿಗಳಿಗೆ 2000 ರೂ. ಗೌರವಧನ ನೀಡುವುದಾಗಿಯೂ ಪ್ರಕಟಿಸಿದ್ದಾರೆ. ಹಾಸನ ಜಿಲ್ಲೆಯ ಸುಮಾರು 200 ಮಂದಿ ಪ್ರವಾಸಿ ಮಾರ್ಗದರ್ಶಿಗಳಿಗೆ ಇದರ ಪ್ರಯೋಜನ ದೊರೆಯಲಿದೆ ಎಂದರು.

ಸಿಎಂ ಬಳಿಗೆ ನಿಯೋಗ: ಕಾಡಾನೆಗಳ ಹಾವಳಿ ತಡೆಯಲು ರೈಲ್ವೆ ಕಂಬಿಗಳ ಬೇಲಿ ನಿರ್ಮಾಣಕ್ಕೆ ಬಜೆಟ್‌ ನಲ್ಲಿ 100ಕೋಟಿ ರೂ. ಅನುದಾನವನ್ನು ಮುಖ್ಯಮಂತ್ರಿಯವರು ಘೋಷಣೆ ಮಾಡಿರುವುದು ಸ್ವಾಗತಾರ್ಹ. ಆದರೆ, 300 ಕೋಟಿ ರೂ. ಅನುದಾನ ಕೇಳಿದ್ದೆವು. ಆದರೆ, 100 ಕೋಟಿ ರೂ. ಮಾತ್ರ ಘೋಷಣೆ ಮಾಡಿದ್ದಾರೆ. ಇನ್ನೂ ಹೆಚ್ಚು ಅನುದಾನಕ್ಕಾಗಿ ಕಾಡಾನೆಗಳ ಹಾವಳಿಯಿರುವ ಜಿಲ್ಲೆಗಳ ಶಾಸಕರ ನಿಯೋಗವು ಶೀಘ್ರದಲ್ಲಿಯೇ ಮುಖ್ಯಮಂತ್ರಿಯವರ ಬಳಿ ನಿಯೋಗ ಹೋಗಲಿದೆ ಎಂದು ಬಿಜೆಪಿ ಮುಖಂಡ, ಮಾಜಿ ಶಾಸಕ ಎಚ್‌. ಎಂ.ವಿಶ್ವನಾಥ್‌ ಅವರು ಹೇಳಿದರು.

ಕಾಡಾನೆಗಳ ಹಾವಳಿ ತಡೆಗೆ ಶಾಶ್ವತ ಕ್ರಮ ಕೈಗೊಳ್ಳ  ಬೇಕು ಎಂಬ ಮನವಿಗೆ ಸ್ಪಂದಿಸಿ, ಬಜೆಟ್‌ನಲ್ಲಿ 100 ಕೋಟಿ ರೂ.ಘೋಷಣೆ ಮಾಡಿರುವ ಮುಖ್ಯಮಂತ್ರಿ ಅವರನ್ನು ಸಕಲೇಶಪುರಕ್ಕೆ ಆಹ್ವಾನಿಸಿ ಸನ್ಮಾನಿಸುವ ಕಾರ್ಯಕ್ರಮ ಹಮ್ಮಿಕೊಂಡು ಆ ಮೂಲಕ ಹೆಚ್ಚು ಅನುದಾನ ಪಡೆಯುವ ಪ್ರಯತ್ನ ಮಾಡಲಾಗುವುದು. ಒಂದು ಕಿ.ಮೀ. ರೈಲ್ವೆ ಹಳಿ ಬೇಲಿ ನಿರ್ಮಾಣಕ್ಕೆ 1.25 ಕೋಟಿ ರೂ. ಅಗತ್ಯವಿದೆ. ಈಗ ಜಿಲ್ಲೆಯ ಮಲೆನಾಡು ಭಾಗದಲ್ಲಿ 90 ಕಾಡಾನೆಗಳ ಹಿಂಡು ಬೀಡು ಬಿಟ್ಟಿದೆ.

ರೈಲ್ವೆ ಕಂಬಿಗಳ ಬೇಲಿ ನಿರ್ಮಿಸಿದ ನಂತರ ಕಾಡಾನೆಗಳನ್ನು ಹಿಡಿದು ಅರಣ್ಯ ಪ್ರದೇಶಕ್ಕೆ ಬಿಟ್ಟರೆ ಕಾಡಾನೆಗಳ ಹಾವಳಿ ಬಹುತೇಕ ನಿವಾರಣೆ ಆಗಲಿದೆ. ಈ ನಿಟ್ಟಿನಲ್ಲಿ ಬಜೆಟ್‌ ನಲ್ಲಿ ಇದೇ ಮೊದಲ ಬಾರಿಗೆ 100 ಕೋಟಿ ರೂ. ಅನುದಾನ ನಿಗದಿಪಡಿಸಿರುವ ಮುಖ್ಯಮಂತ್ರಿಯವರನ್ನು ಅಭಿನಂದಿಸುವುದಾಗಿಯೂ ಹೇಳಿದರು.

ಜಿಲ್ಲಾ ಬಿಜೆಪಿ ವಕ್ತಾರ ಎಚ್‌.ಎಂ.ಸುರೇಶ್‌, ನಗರಸಭಾ ಮಾಜಿ ಸದಸ್ಯ ಪ್ರಸನ್ನಕುಮಾರ್‌, ಜಿಪಂ ಮಾಜಿ ಸದಸ್ಯ ಅಮಿತ್‌ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

banner

Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್

Aaram Aravinda Swamy Movie Review

Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫ‌ನ್‌ರೈಡ್‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

banner

Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್

Aaram Aravinda Swamy Movie Review

Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫ‌ನ್‌ರೈಡ್‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.