ಪಾಕಿಸ್ಥಾನದಲ್ಲೂ ವಿರಾಟ್ ಜಪ; ರಾವಲ್ಪಿಂಡಿಯಲ್ಲಿ ಗಮನಸೆಳೆದ ಅಭಿಮಾನಿಯ ಪೋಸ್ಟರ್
Team Udayavani, Mar 8, 2022, 10:56 AM IST
ರಾವಲ್ಪಿಂಡಿ: ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಕೆಲ ದಿನಗಳ ಹಿಂದಷ್ಟೇ ತಮ್ಮ ನೂರನೇ ಟೆಸ್ಟ್ ಪಂದ್ಯವನ್ನಾಡಿದರು. ಮೊಹಾಲಿ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ನಲ್ಲಿ 8000 ರನ್ ಕೂಡಾ ಪೂರ್ತಿಗೊಳಿಸಿದರು.
ಮೊಹಾಲಿ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ವೇಳೆ ಉತ್ತಮ ಲಯದಲ್ಲಿ ಕಂಡುಬಂದಿದ್ದ ವಿರಾಟ್ 45 ರನ್ ಗಳಿಸಿದ್ದರು. ಈ ವೇಳೆ ಲಸಿತ್ ಎಂಬುಲ್ಡೇನಿಯಾ ಎಸೆತದಲ್ಲಿ ವಿರಾಟ್ ಕ್ಲೀನ್ ಬೌಲ್ಡ್ ಆಗಿ ಪೆವಿಲಿಯನ್ ಸೇರಿದ್ದರು. ಈ ಮೂಲಕ ವಿರಾಟ್ ಕೊಹ್ಲಿಯ 71ನೇ ಶತಕದ ಕಾಯುವಿಕೆ ಮತ್ತಷ್ಟು ಮುಂದುವರಿದಿದೆ.
ಈ ನಡುವೆ ಪಾಕಿಸ್ಥಾನದ ರಾವಲ್ಪಿಂಡಿಯಲ್ಲಿ ನಡೆಯುತ್ತಿರುವ ಪಾಕಿಸ್ಥಾನ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಅಭಿಮಾನಿಗಳಯ ಗಮನ ಸೆಳೆದಿದ್ದಾರೆ. ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ವ್ಯಕ್ತಿಯೋರ್ವ “ನಿಮ್ಮ 71ನೇ ಶತಕ ಪಾಕಿಸ್ತಾನದಲ್ಲಿ ಬೇಕು” ಎಂಬ ಪ್ಲೆಕಾರ್ಡ್ ಹಿಡಿದು ನಿಂತಿದ್ದು ಗಮನ ಸೆಳೆದಿದೆ.
Some Virat Kohli fans have made a wish during Rawalpindi Test at Pindi Cricket Stadium #PAKvAUS pic.twitter.com/mrKEaPFQEe
— Arfa Feroz Zake (@ArfaSays_) March 6, 2022
2019ರ ನವೆಂಬರ್ ಬಳಿಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಶತಕ ಬಾರಿಸಿಲ್ಲ. 2019ರಲ್ಲಿ ಕೋಲ್ಕತ್ತಾದ ಈಡನ್ ಗಾರ್ಡನ್ ನಲ್ಲಿ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ವಿರಾಟ್ ಕೊನೆಯದಾಗಿ ಮೂರಂಕಿ ಮೊತ್ತ ದಾಖಲಿಸಿದ್ದರು.
ಇದನ್ನೂ ಓದಿ:ರಷ್ಯಾ ವಿರುದ್ಧ ಹೋರಾಡಲು ಉಕ್ರೇನ್ ಅರೆಸೈನಿಕ ಪಡೆ ಸೇರಿದ ತಮಿಳುನಾಡಿನ ವಿದ್ಯಾರ್ಥಿ
ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಭಾರತ ತಂಡ ಭಾರೀ ಅಂತರದಿಂದ ಗೆದ್ದುಕೊಂಡು ಸರಣಿಯಲ್ಲಿ ಮುನ್ನಡೆ ಸಾಧಿಸಿದೆ. ಎರಡನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿದ್ದು, ಇದು ಪಿಂಕ್ ಬಾಲ್ ಟೆಸ್ಟ್ ಪಂದ್ಯವಾಗಿರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.