ಎಡದಂಡೆ ಕಾಲುವೆ ಕುಸಿತ; ಅಧಿಕಾರಿಗಳ ಪರಿಶೀಲನೆ ತುರ್ತು ದುರಸ್ತಿಗೆ ಕ್ರಮ :ಶಾಸಕ ರಾಜುಗೌಡ

Team Udayavani, Mar 8, 2022, 7:53 PM IST

ಎಡದಂಡೆ ಕಾಲುವೆ ಕುಸಿತ; ಅಧಿಕಾರಿಗಳ ಪರಿಶೀಲನೆ ತುರ್ತು ದುರಸ್ತಿಗೆ ಕ್ರಮ :ಶಾಸಕ ರಾಜುಗೌಡ

ಹುಣಸಗಿ : ತಾಲೂಕಿನ ಅಗ್ನಿ ಗ್ರಾಮದ ಬಳಿ ನಾರಾಯಣಪುರ ಎಡದಂಡೆ ಮುಖ್ಯ ಕಾಲುವೆ ಕುಸಿತ ಸ್ಥಳಕ್ಕೆ ಶಾಸಕ ರಾಜುಗೌಡ ಅವರ ಸಹೋದರ ಬಬ್ಲೂಗೌಡ ಭೇಟಿ ನೀಡಿ ವೀಕ್ಷಿಸಿದರು.

ಅಗ್ನಿ ಗ್ರಾಮದ ಬಳಿ ಎಡದಂಡೆ ಮುಖ್ಯ ಕಾಲುವೆ 80 ಮೀಟರ್ ನಷ್ಟು ಕುಸಿತಗೊಂಡಿದ್ದು, ರೈತರಲ್ಲಿ ಆತಂಕ ಮೂಡಿಸಿದೆ. ಸೋಮವಾರ ನೀರು ಸ್ಥಗಿತಗೊಳಿಸಿದ ನಂತರ ಕಾಲುವೆಯ ಎಸ್‌ಆರ್ ಬಳಿ ಮಂಗಳವಾರ ಮುಂಜಾನೆಯಿಂದ ಕಾಲುವೆ ಕುಸಿತ ವಾಗಿರುವುದು ಕಂಡು ಬಂದಿದೆ. ಕುಸಿತಗೊಂಡ ಸ್ಥಳಕ್ಕೆ ನಿಗಮದ ಮುಖ್ಯ ಎಂಜಿನೀಯರ ಅಶೋಕ ವಾಸನದ ಹಾಗೂ ಎಸ್.ಇ ಶಂಕರ್ ರಾಠೋಡ, ಕರ‍್ಯನಿರ್ವಾಹಕ ಎಂಜಿನೀಯರ ಶಂಕರ್ ನಾಯ್ಕೋಡಿ, ಎಇಇ ವಿ.ಎಲ್.ಕಂಬಾರ್ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ನಂತರ ಇಇ ಶಂಕರ್ ನಾಯ್ಕೋಡಿ ಸುದ್ದಿಗಾರರೊಂದಿಗೆ ಮಾತನಾಡಿ, 2012 ರಲ್ಲಿ ಇಆರ್‌ಎಂ ನಲ್ಲಿ ಈ ಕಾಮಗಾರಿಯನ್ನು ನಿರ್ವಹಿಸಲಾಗಿತ್ತು. ಆ ಬಳಿಕ ಮೂರು ಬಾರಿ ಎಡದಂಡೆಯ ಮುಖ್ಯ ಕಾಲುವೆಯ 61 ನೇ ಕಿ.ಮಿ ಬಳಿ ಪ್ರತಿ ವರ್ಷವೂ ಕಾಲುವೆ ಕುಸಿತ ಆಗುತ್ತಿದೆ. ಈ ಕುರಿತು ತಜ್ಞರಿಗೆ ವರಿದಿ ಸಲ್ಲಿಸಲಾಗುತ್ತಿದ್ದು, ಅವರ ವರದಿಯ ಬಳಿಕ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಇನ್ನು ಉಳಿದಿರುವ ಅವಧಿಗೆ ಕಾಲುವೆಗೆ ನೀರು ಹರಿಸುವಲ್ಲಿ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು, ರೈತರು ಯಾವುದೇ ಕಾಣಕ್ಕೂ ಆತಂಕಗೊಳ್ಳಬಾರದು. ಸದ್ಯ ತಾತ್ಕಾಲಿಕವಾಗಿ ಮರಳು ತುಂಬಿದ ಚೀಲಗಳನ್ನು ಇಟ್ಟು ನೀರು ಒದಗಿಸಲಾಗುವುದು. ನಂತರ ನೀರು ಸ್ಥಗಿತಗೊಳಿಸಿದ ಬಳಿಕ ಕಾಲುವೆ ದುರಸ್ತಿ ಕಾರ್ಯ ನಡೆಸಲಾಗುವುದು ಎಂದು ತಿಳಿಸಿದರು.

ಮುಖ್ಯಕಾಲುವೆ ಪದೇ ಪದೇ ಕುಸಿಯುತ್ತಿದ್ದು, ರೈತರನ್ನು ಚಿಂತೆಗೀಡು ಮಾಡಿದೆ. ಸದ್ಯ ಭತ್ತ ತೆನೆ ಹಿರಿಯುವ ಹಂತಕ್ಕೆ ಬಂದಿವೆ. ರೈತರ ಹಿತದೃಷ್ಟಿಯಿಂದ ಆದಷ್ಟು ಬೇಗ ಮುಖ್ಯಮಂತ್ರಿ ಮತ್ತು ಸಂಬಂಧಿಸಿದ ಸಚಿವರೊಂದಿಗೆ ಮಾತನಾಡಿ ಕಾಲುವೆ ದುರಸ್ತಿಗೆ ಕ್ರಮಕೈಗೊಳ್ಳಲಾಗುವುದು ಎಂದು ಶಾಸಕ ನರಸಿಂಹನಾಯಕ(ರಾಜುಗೌಡ) ತಿಳಿಸಿದ್ದಾರೆ.

ಒತ್ತಾಯ: ಅಗ್ನಿ ಗ್ರಾಮದ ಬಳಿ ನಾರಾಯಣಪುರ ಎಡದಂಡೆ ಮುಖ್ಯ ಕಾಲುವೆ ಪದೆ ಪದೆ ಕುಸಿತ ಇದ್ದರೂ ಕೂಡಾ ಮೇ ಮತ್ತು ಜೂನ್ ತಿಂಗಳಲ್ಲಿ ಶಾಶ್ವತ ದುರಸ್ತಿ ಕೈಗೊಳ್ಳಲು ಸಾಕಷ್ಟು ಬಾರಿ ಮನವಿ ಮಾಡಿದರೂ ಅಧಿಕಾರಿಗಳು ಯಾವುದೇ ಕ್ರಮಕೈಗೊಂಡಿಲ್ಲ. ಸಿಎಂ ಅವರು ಹಾಗೂ ಜಲ ಸಂಪನ್ಮೂಲ ಸಚಿವರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೌರಾಷ್ಟ ಸೋಮನಾಥ ನೀರು ಬಳಕೆದಾರರ ಸಂಘಗಳ ಮಹಾ ಮಂಡಳದ ಅಧ್ಯಕ್ಷ ರಂಗಪ್ಪ ಡಂಗಿ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

sunil-karkala

ಎಎನ್‌ಎಫ್‌ಗೆ ಸಿಗದ ನಕ್ಸಲರು ಸಿಎಂಗೆ ಸಿಕ್ಕಿದ್ದು ಹೇಗೆ?: ಶಾಸಕ ಸುನೀಲ್‌ ಕುಮಾರ್‌

Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ

Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ

Minister-CR-patil

Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

BJP-flag

Election Preperation: ಸ್ಥಳೀಯ ಸಂಸ್ಥೆ ಚುನಾವಣೆ: ಇಂದಿನಿಂದ ಬಿಜೆಪಿ ಸರಣಿ ಸಭೆ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sunil-karkala

ಎಎನ್‌ಎಫ್‌ಗೆ ಸಿಗದ ನಕ್ಸಲರು ಸಿಎಂಗೆ ಸಿಕ್ಕಿದ್ದು ಹೇಗೆ?: ಶಾಸಕ ಸುನೀಲ್‌ ಕುಮಾರ್‌

Minister-CR-patil

Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ

BJP-flag

Election Preperation: ಸ್ಥಳೀಯ ಸಂಸ್ಥೆ ಚುನಾವಣೆ: ಇಂದಿನಿಂದ ಬಿಜೆಪಿ ಸರಣಿ ಸಭೆ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

sunil-karkala

ಎಎನ್‌ಎಫ್‌ಗೆ ಸಿಗದ ನಕ್ಸಲರು ಸಿಎಂಗೆ ಸಿಕ್ಕಿದ್ದು ಹೇಗೆ?: ಶಾಸಕ ಸುನೀಲ್‌ ಕುಮಾರ್‌

Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ

Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ

Minister-CR-patil

Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.