ಜಾತಿ ಗಣತಿ ದತ್ತಾಂಶ ಪರಿಗಣಿಸಲಾಗದು: ಎಜಿ ಅಭಿಪ್ರಾಯ

Team Udayavani, Mar 9, 2022, 3:35 PM IST

ಜಾತಿ ಗಣತಿ ದತ್ತಾಂಶ ಪರಿಗಣಿಸಲಾಗದು : ಎಜಿ ಅಭಿಪ್ರಾಯ

ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲು ವಿವಾದಕ್ಕೆ ಸಂಬಂಧಪಟ್ಟಂತೆ ಜಾತಿ ಗಣತಿ ದತ್ತಾಂಶವನ್ನು ಪರಿಗಣಿಸುವುದು ಕಾನೂನು ಪ್ರಕಾರ ಪರಿಗಣಿಸಲು ಸಾಧ್ಯವಿಲ್ಲ ಎಂದು ಅಡ್ವೊಕೇಟ್ ಜನರಲ್ ಅವರು ಸರಕಾರಕ್ಕೆ ಅಭಿಪ್ರಾಯ ತಿಳಿಸಿದ್ದಾರೆ.

ಸರಕಾರದ ಉನ್ನತ ಮೂಲಗಳಿಂದ ಈ ಮಾಹಿತಿ ಲಭ್ಯವಾಗಿದೆ. ಜಾತಿ ಗಣತಿ ದತ್ತಾಂಶಗಳು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಗೆ ಸಂಬಂಧಪಟ್ಟಂತೆ ಮಾತ್ರ ಇದೆ. ರಾಜಕೀಯ ಮೀಸಲು ವಿಚಾರಕ್ಕೆ ಅನ್ವಯವಾಗುವುದಿಲ್ಲ. ಹೀಗಾಗಿ ಈ ವಿಚಾರವನ್ನು ಆಧಾರವಾಗಿಟ್ಟುಕೊಂಡು ಹಿಂದುಳಿದ ವರ್ಗಗಳ ಮೀಸಲು ನಿಗದಿ ಅಸಾಧ್ಯ ಎಂದು ಅಡ್ವೊಕೇಟ್ ಜನರಲ್ ಅಭಿಪ್ರಾಯ ನೀಡಿದ್ದಾರೆ ಎಂದು ಸರಕಾರದ ಉನ್ನತ ಮೂಲಗಳಿಂದ ತಿಳಿದು ಬಂದಿದೆ.

ಇದನ್ನೂ ಓದಿ:ಇಂದಿರಾ ಗಾಂಧಿ, ನಿಜಲಿಂಗಪ್ಪರನ್ನು ಬಂಗಾರದಲ್ಲಿ ತೂಗಿದ್ದೇವೆ, ಆದರೆ… : ಕಾರಜೋಳ ವಿಷಾದ

ಹಿಂದುಳಿದ ವರ್ಗಗಳಿಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮೀಸಲಿ ನಿಗದಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಅಡ್ಡಿಯಾಗಿ ಪರಿಣಮಿಸಿದ್ದು, ಜಾತಿ ಗಣತಿ ಸಮೀಕ್ಷೆಯನ್ನು ಇದಕ್ಕೆ ಬಳಸಿಕೊಳ್ಳಬಹುದೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸಲಹೆ ನೀಡಿದ್ದರು. ದತ್ತಾಂಶ ಬಳಸಿಕೊಳ್ಳುವ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದರು‌. ಆದರೆ ಎಜಿ ಅಭಿಪ್ರಾಯದಿಂದ ಈ ಪ್ರಯತ್ನಕ್ಕೆ ಹಿನ್ನಡೆಯಾಗಿದೆ.

ಆಯೋಗ ರಚನೆ: ಮೂಲಗಳ ಪ್ರಕಾರ, ಈ ವಿವಾದ ಬಗೆಹರಿಸಲು ಪ್ರತ್ಯೇಕ ಆಯೋಗ ರಚನೆ ಮಾಡಲು ಸರಕಾರ ಚಿಂತನೆ ನಡೆಸಿದೆ. ಆದರೆ ಆಯೋಗದ ವರದಿ ಬರುವುದಕ್ಕೆ ವಿಳಂಬವಾಗುತ್ತದೆ. ಹೀಗಾಗಿ ಹಳೆ ವ್ಯವಸ್ಥೆಯಲ್ಲಿ ಚುನಾವಣೆ ನಡೆಸಲು ಅವಕಾಶ ನೀಡಿ ಎಂದು ಸುಪ್ರೀಂ ಕೋರ್ಟ್ ಗೆ ವಿಶೇಷ ಮೇಲ್ಮನವಿ ಸಲ್ಲಿಸಲು ಸರಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

Belagavi: UT Khader, Basavaraja Horatti visited Suvrana vidhasoudha

Belagavi: ಸುವರ್ಣ ವಿಧಾನಸೌಧಕ್ಕೆ‌ ಯು.ಟಿ.ಖಾದರ್‌, ಬಸವರಾಜ ಹೊರಟ್ಟಿ ಭೇಟಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.