ಪಚ್ಚನಾಡಿ ಘನತ್ಯಾಜ್ಯ ವಿಲೇವಾರಿ: ಸಿಎಂ ಅನುಮೋದನೆ
Team Udayavani, Mar 10, 2022, 7:30 AM IST
ಬೆಂಗಳೂರು: ಪಚ್ಚನಾಡಿ ಭೂಭರ್ತಿ ಘಟಕದಲ್ಲಿ ಬಹಳ ವರ್ಷಗಳಿಂದ ಸಂಗ್ರಹವಾಗಿರುವ ಘನತ್ಯಾಜ್ಯವನ್ನು ತೆರವುಗೊಳಿಸುವ ಕಾಮಗಾರಿಗೆ ಮುಖ್ಯಮಂತ್ರಿಯವರು ಅನುಮೋದನೆ ನೀಡಿದ್ದಾರೆ ಎಂದು ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.
ಈ ವಿಚಾರವಾಗಿ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು.
ಈ ವೇಳೆ ಮಂಗಳೂರು ಮಹಾನಗರ ಪಾಲಿಕೆ ಪರ ಹೆಚ್ಚುವರಿ ಅಡ್ವೋಕೇಟ್ ಜನರಲ್ ಧ್ಯಾನ್ ಚಿನ್ನಪ್ಪ ಹಾಜರಾಗಿ, ಬಹಳ ವರ್ಷಗಳಿಂದ ಸಂಗ್ರಹವಾಗಿರುವ ಘನತ್ಯಾಜ್ಯ ವಿಲೇವಾರಿ ಕಾಮಗಾರಿಯ 73 ಕೋಟಿ ರೂ.ಗೆ ಮುಖ್ಯಮಂತ್ರಿಯವರು ಘಟನೋತ್ತರ ಅನುಮೋದನೆ ನೀಡಿದ್ದಾರೆ. ಅಲ್ಲದೇ ಮಹಾನಗರ ಪಾಲಿಕೆ ಆಯುಕ್ತರು ಟೆಂಡರ್‌ದಾರರಿಗೆ ಮಾ.8ರಂದು ಒಪ್ಪಿಗೆ ಪತ್ರ ಸಹ ನೀಡಿದ್ದು, ತಕ್ಷಣ ಕಾಮಗಾರಿ ಆರಂಭವಾಗಿದೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ:ಜಮ್ಮು-ಕಾಶ್ಮೀರ: ಉಧಾಂಪುರ್ ನಲ್ಲಿ ಪ್ರಬಲ ಸ್ಫೋಟ, ಓರ್ವ ಸಾವು, 13 ಮಂದಿಗೆ ಗಾಯ
ನಾಲ್ಕು ದಿನಗಳಲ್ಲಿ ಈ ಬಗ್ಗೆ ಪ್ರಮಾಣಪತ್ರ ಸಲ್ಲಿಸಬೇಕು. ಕಾಮಗಾರಿಯ ಪ್ರಗತಿ ವರದಿಯನ್ನು ಕಾಲ ಕಾಲಕ್ಕೆ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಪಾಲಿಕೆಗೆ ನಿರ್ದೇಶನ ನೀಡಿದ ನ್ಯಾಯಪೀಠ ವಿಚಾರಣೆ ಮುಂದೂಡಿತು. ನ್ಯಾಯಾಲಯದ ನಿರ್ದೇಶನದಂತೆ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಬುಧವಾರದ ವಿಚಾರಣೆಗೆ ಖುದ್ದು ಹಾಜರಾಗಿದ್ದರು. ಅರ್ಜಿದಾರರ ಪರ ವಕೀಲ ಶ್ರೀಧರಪ್ರಭು ವಾದ ಮಂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು-HDK ಎ1
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.