ಉಕ್ರೇನ್‌ನಿಂದ ಬಂದ ವಿದ್ಯಾರ್ಥಿಗಳ ಭವಿಷ್ಯದ ಕುರಿತು ಸರಕಾರ ಚಿಂತಿಸಬೇಕಾಗಿದೆ :ಜಿ.ಪರಮೇಶ್ವರ್
Team Udayavani, Mar 9, 2022, 6:38 PM IST
ಕೊರಟಗೆರೆ : ಉಕ್ರೇನ್‌ನಿಂದ ಸ್ವದೇಶಕ್ಕೆ ವಾಪಸಾದ ಪಟ್ಟಣದ ಇಬ್ಬರು ವಿದ್ಯಾರ್ಥಿಗಳನ್ನು ಶಾಸಕ ಡಾ.ಜಿ.ಪರಮೇಶ್ವರ್ ಅಭಿನಂದಿಸಿ ಪತ್ರಕರ್ತರಾಗಿ ವಿದ್ಯಾರ್ಥಿಗಳನ್ನು ಸಂದರ್ಶನ ಮಾಡಿ ಧೈರ್ಯ ತುಂಬಿದರು.
ಕೊರಟಗೆರೆ ಪಟ್ಟಣದ ಕಾಳಿದಾಸ ಬಡಾವಣೆ ನಿವಾಸಿಗಳಾದ ಜಾವೀದ್, ಫತೀಮಾ ದಂಪತಿ ಮಗನಾದ ತೌಕಿತ್ ಅಹಮದ್ 3ನೇ ವರ್ಷದ ಎಂ.ಬಿ.ಬಿ.ಎಸ್. ಹಾಗೂ ಸೈಯದ್‌ನವಾಜ್, ಶಬಾನಾ ದಂಪತಿ ಮಗನಾದ ಸೈಯ್ಯದ್ ನೋಮನ್ 1ನೇ ವರ್ಷದ ಎಂ.ಬಿ.ಬಿ.ಎಸ್. ಪದವಿಯನ್ನು ರಾಜಧಾನಿ ಕೀವ್‌ನ ಪೊಗೋಮೆಲೆಟ್ ನಗರದ ವಿಶ್ವವಿದ್ಯಾನಿಲಯದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಉಕ್ರೇನ್ ಮೇಲೆ ರಷ್ಯ ಬಾಂಬ್ ದಾಳಿ ನಡೆಸಿದಾಗ ಇವರು ಸುಮಾರು ದಿನಗಳ ಕಾಲ ಬಂಕರ್‌ಗಳಲ್ಲಿದ್ದು ಸುಮಾರು 10 ಕಿ.ಮೀಗಳಷ್ಟು ನಡೆದು ಸ್ಲೋವೇಕಿಯಾ ದೇಶದ ಮುಖಾಂತರ ಭಾರತಕ್ಕೆ ಬಂದಿರುವುದಾಗಿ ತಿಳಿಸಿದರು. ಆ ಸಂಧರ್ಭದಲ್ಲಿ ಆತಂಕಕ್ಕೊಳಗಾಗಿದ್ದರೂ ಭಾರತದ ರಾಯಭಾರಿ ಅಧಿಕಾರಿಗಳ ಸೂಚನೆ ಮೇರೆಗೆ ಧೈರ್ಯದಿಂದ ಹೊರಬಂದು ದೇಶ ತಲುಪಿದೆವು ಎಂದು ಶಾಸಕರು ಅವರನ್ನು ಸಂದರ್ಶಿಸಿದ ವೇಳೆ ತಿಳಿಸಿದರು.
ನಂತರ ಶಾಸಕ ಡಾ.ಜಿ.ಪರಮೇಶ್ವರ್ ಮಾತನಾಡಿ ಕ್ಷೇತ್ರದ ಇಬ್ಬರು ವಿದ್ಯಾರ್ಥಿಗಳು ಉಕ್ರೇನ್ ಯುದ್ಧ ಪೀಡಿತ ಪ್ರದೇಶದಿಂದ ಸುರಕ್ಷಿತವಾಗಿ ತಮ್ಮ ಮನೆಗೆ ಹಿಂತಿರುಗಿರುವುದು ಅತ್ಯಂತ ಸಂತೋಷ ತಂದಿದೆ, ನಾನು ಕೇರಳದ ಪ್ರವಾಸದಲ್ಲಿದ್ದರೂ ಸಹ ಈ ಇಬ್ಬರು ವಿದ್ಯಾರ್ಥಿಗಳ ಜೊತೆಗೆ ತಾಲ್ಲೂಕು ತಹಶಿಲ್ದಾರ್ ರವರಿಂದ ಮಾಹಿತಿಯನ್ನು ಪಡೆಯುತ್ತಿದ್ದೆ. ಇವರಂತೆ ಉಕ್ರೇನ್‌ನಲ್ಲಿ ಸಿಲುಕಿರುವ ರಾಜ್ಯದ ಮತ್ತು ದೇಶದ ನಾಗರೀಕರು ಮತ್ತು ವಿದ್ಯಾರ್ಥಿಗಳು ಭಾರತಕ್ಕೆ ಸುರಕ್ಷಿತವಾಗಿ ವಾಪಸ್ ಮರಳಲಿ ಎಂದು ಕೋರುವುದಾಗಿ ತಿಳಿಸಿದ ಅವರು ಸದ್ಯದ ಪರಿಸ್ಥಿತಿಯಲ್ಲಿ ಉಕ್ರೇನ್‌ನಿಂದ ವಾಪಸ್ ಆಗಿರುವ ಎಂ.ಬಿ.ಬಿ.ಎಸ್. ವಿದ್ಯಾರ್ಥಿಗಳ ಭವಿಷ್ಯ ಆತಂಕದಲ್ಲಿದ್ದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಬಗ್ಗೆ ಶೀಘ್ರವಾಗಿ ನಿರ್ಧಾರ ಕೈಗೊಳ್ಳಬೇಕಿದೆ. ನಮ್ಮ ಕ್ಷೇತ್ರದ ಇಬ್ಬರು ವಿದ್ಯಾರ್ಥಿಗಳನ್ನು ಕೇಂದ್ರ ಸರ್ಕಾರದ ನಿರ್ಧಾರವನ್ನು ಕಾದು ನೊಡಲಾಗುವುದು ಹಾಗೂ ನಮ್ಮ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನಲ್ಲೂ ಸಹ ಈ ವಿದ್ಯಾರ್ಥಿಗಳಿಗೆ ಎಲ್ಲಾ ಅಗತ್ಯವಾದ ನೆರವು ಮತ್ತು ಪ್ರವೇಶವನ್ನು ನೀಡುವುದಾಗಿ ಭರವಸೆ ನೀಡಿದರು.
ಇದನ್ನೂ ಓದಿ : ಸಿಂಧನೂರು ಎಆರ್ ಟಿಓ ಕಚೇರಿ ಮಂಜೂರಿಗೆ ಅಧಿವೇಶನದಲ್ಲಿ ಧ್ವನಿ
ಈ ಸಂಧರ್ಭದಲ್ಲಿ ಶಾಸಕರೊಂದಿಗೆ ತಹಶೀಲ್ದಾರ್ ನಾಹಿದಾ ಜಮ್ ಜಮ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೋಡ್ಲಹಳ್ಳಿ ಅಶ್ವತ್ಥ್ನಾರಾಯಣ, ಕೃಷಿಕ ಸಮಾಜದ ಮಾಜಿ ಅಧ್ಯಕ್ಷ ಹೂಲೀಕುಂಟೆ ಪ್ರಸಾದ್, ಪ.ಪಂ.ಸದಸ್ಯ ನಂದೀಶ್, ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ್ ಕುಮಾರ್, ಮುಖಂಡರಾದ ಮಕ್ತಿಯಾರ್, ರವಿಕುಮಾರ್, ಅರವಿಂದ್, ಮಹಮದ್ ಫಾರೂಕ್ ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
MUST WATCH
ಹೊಸ ಸೇರ್ಪಡೆ
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್ ಕುಮಾರ್
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.