ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಪರೀಕ್ಷೆ: ಕಟ್ಟುನಿಟ್ಟಾಗಿ ನಿಯಮ ಪಾಲನೆಗೆ ಸೂಚನೆ
Team Udayavani, Mar 9, 2022, 10:30 PM IST
ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕ ಹುದ್ದೆ ಗಳ ನೇಮಕಾತಿಗೆ ಮಾ.12ರಿಂದ 16ರವರೆಗೆ ನಡೆಯುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಸೂಚನೆ ನೀಡಿದ್ದಾರೆ.
ಬುಧವಾರ ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಸಚಿವರು, ಪರೀಕ್ಷಾ ಕೊಠಡಿಯಲ್ಲಿ ನಕಲು ಮಾಡುವುದು ಸೇರಿದಂತೆ ಯಾವುದೇ ರೀತಿಯಲ್ಲಿ ಅಕ್ರಮ ನಡೆಯದಂತೆ ಕಟ್ಟೆಚ್ಚರ ವಹಿಸಬೇಕು. ಒಂದು ವೇಳೆ ಪರೀಕ್ಷಾ ವ್ಯವಸ್ಥೆ ಹಾಳುಗೆಡವಿ ನೇಮಕಾತಿ ಪ್ರಕ್ರಿಯೆಗೆ ಕಳಂಕ ಬಂದರೆ, ಡಿಸಿ ಮತ್ತು ಎಸ್ಪಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
1,242 ಹುದ್ದೆಗಳಿಗೆ 33 ಸಾವಿರಕ್ಕೂ ಹೆಚ್ಚಿನ ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಬೆಂಗಳೂರು, ಮೈಸೂರು, ಮಂಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಮತ್ತು ಕಲಬುರಗಿಯಲ್ಲಿ ಪರೀಕ್ಷೆಗಳು ನಡೆಯಲಿವೆ. ಇದಕ್ಕಾಗಿ 1,409 ಕೊಠಡಿ ಮೇಲ್ವಿಚಾರಕರು, 82 ವೀಕ್ಷಕರು, 82 ಕಸ್ಟೋಡಿಯನ್ಸ್ ಮತ್ತು 164 ಮಂದಿಯ ವಿಶೇಷ ಜಾಗೃತ ದಳವನ್ನು ರಚಿಸಲಾಗಿದೆ. 12 ಮತ್ತು 13ರಂದು 82 ಪರೀûಾ ಕೇಂದ್ರಗಳಲ್ಲಿ, 14ರಂದು 22, 15ರಂದು 24 ಮತ್ತು 16ರಂದು 8 ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.