ಮಹಿಳೆ ನೋಡುವ ದೃಷ್ಟಿ ಬದಲಾಗಲಿ

Team Udayavani, Mar 10, 2022, 11:15 AM IST

8women

ಸೊಲ್ಲಾಪುರ: ವರ್ಷಕ್ಕೊಮ್ಮೆ ಮಹಿಳೆಗೆ ಗೌರವ ನೀಡಿದರೆ ಸಾಲದು. ಪ್ರತಿ ನಿತ್ಯವು ಮಹಿಳೆಯರನ್ನು ಸಮಾನತೆಯಿಂದ ಕಾಣಬೇಕು. ಮಹಿಳೆಯನ್ನು ನೋಡುವ ದೃಷ್ಟಿ ಬದಲಾಗಬೇಕು ಎಂದು ಜಿಜಾವು ಬ್ರಿಗೇಡ್‌ನ‌ ಸುನಂದಾ ರಾಜೇಗಾಂವಕರ್‌ ಹೇಳಿದರು.

ಅಕ್ಕಲಕೋಟ ಪಟ್ಟಣದ ಅನ್ನಛತ್ರ ಮಂಡಳಿ ಆವರಣದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚಾರಣೆ ಅಂಗವಾಗಿ ಅನ್ನಛತ್ರ ಮಂಡಳಿ ಅಂಗಸಂಸ್ಥೆಯಾದ ಹಿರಕಣಿ ಮಹಿಳಾ ವಿವಿಧೋದ್ದೇಶ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಸೀರೆ ವಿತರಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಮಾಜದಲ್ಲಿ ಸ್ತ್ರೀ-ಪುರುಷರಿಗೆ ಸಮಾನತೆಯಿದೆ. ಆದರೆ ಹೆಣ್ಣು ಮಗುವಿಗೆ ಜನ್ಮ ನೀಡಿದರೆ ಕೀಳಾಗಿ ಕಾಣುತ್ತಾರೆ. ಗಂಡು ಮಗುವಿಗೆ ಜನ್ಮ ನೀಡಿದರೆ ಸ್ವಾಗತಿಸುತ್ತಾರೆ. ಇಂತಹ ಮನಸ್ಥಿತಿ ಬದಲಾಗಬೇಕು ಎಂದರು.

ಅನ್ನಛತ್ರ ಮಂಡಳಿ ಸಂಸ್ಥಾಪಕ ಅಧ್ಯಕ್ಷ ಜನ್ಮೇಜಯರಾಜೆ ಭೋಸಲೆ, ಪ್ರಮುಖ ಕಾರ್ಯಕಾರಿ ವಿಶ್ವಸ್ತ ಅಮೋಲರಾಜೆ ಭೋಸಲೆ ಮಾರ್ಗದರ್ಶನ, ಅನ್ನಛತ್ರ ಮಂಡಳಿ ಅಂಗಸಂಸ್ಥೆಯಾದ ಹಿರಕಣಿ ಮಹಿಳಾ ವಿವಿಧೋದ್ದೇಶ ಸಂಸ್ಥೆಯ ಸಂಸ್ಥಾಪಕಿ ಅಧ್ಯಕ್ಷೆ ಅಲಕಾತಾಯಿ ಭೋಸಲೆ, ಕಾರ್ಯದರ್ಶಿ ಅರ್ಪಿತಾರಾಜೆ ಭೋಸಲೆ ನೇತೃತ್ವದಲ್ಲಿ 300 ಬಡ ಮಹಿಳೆಯರಿಗೆ ಸೀರೆ ವಿತರಿಸುವ ಮೂಲಕ ವಿಶ್ವ ಮಹಿಳಾ ದಿನ ಆಚರಿಸಿದರು.

ಈ ಸಂದರ್ಭದಲ್ಲಿ ಡಾ| ಅಸಾವರಿ ಪೆಡಗಾಂವಕರ್‌, ಡಾ| ಸಾಯಲಿ ಬಂದಿಛೋಡೆ, ಡಾ| ಗಿರಿಜಾ ರಾಜಿ ಮವಾಲೆ, ಲತಾ ಮೋರೆ, ಮಾಧುರಿ ಬಾಗ್‌, ವಾಗ್ಧರಿ ಸ್ತ್ರೀ ಶಕ್ತಿ ಸಂಘದ ಅಧ್ಯಕ್ಷೆ ವಿಮಲ ಪೋಮಾಜಿ, ಹಿರಕಣಿ ಮಹಿಳಾ ವಿವಿಧೋದ್ದೇಶ ಸಂಸ್ಥೆಯ ಸಂಸ್ಥಾಪಕಿ ಅಧ್ಯಕ್ಷೆ ಅಲಕಾತಾಯಿ ಭೋಸಲೆ, ಕಾರ್ಯದರ್ಶಿ ಅರ್ಪಿತಾರಾಜೆ ಭೋಸಲೆ, ಉಪಾಧ್ಯಕ್ಷೆ ರತ್ನಮಾಲಾ ಮಚಾಲೆ ವೇದಿಕೆಯಲ್ಲಿದ್ದರು. ಮೊದಲಿಗೆ ರಾಷ್ಟ್ರಮಾತಾ ಜಿಜಾವು, ಸಾವಿತ್ರಿಬಾಯಿ ಫುಲೆ, ಶ್ರೀ ಸ್ವಾಮಿ ಸಮರ್ಥರ ಪ್ರತಿಮೆಗೆ ಪೂಜೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಪಲ್ಲವಿ ಕದಂ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಾಧ್ಯಕ್ಷೆ ರತ್ನ ಮಾಲಾ ಮಚಾಲೆ ವಂದಿಸಿದರು.

ಮಹಿಳೆಯರು ಆರ್ಥಿಕವಾಗಿ ಸದೃಢಗೊಳ್ಳುವ ಮೂಲಕ ತನ್ನ ಸ್ವಂತ ಕಾಲ ಮೇಲೆ ನಿಲ್ಲುವಂತಾಗಬೇಕು. ಇನ್ನೊಬ್ಬರಿಗೆ ಆರ್ಥಿಕ ಸಹಾಯಕ್ಕೆ ಕೈ ಚಾಚುವುದನ್ನು ಬಿಡಬೇಕು. ಮಹಿಳೆಯೂ ಎಲ್ಲ ಕ್ಷೇತ್ರಗಳಲ್ಲಿ ಮುಂದಕ್ಕೆ ಬರಬೇಕು. ಅವಳು ಪುರುಷರ ಸರಿಸಮನಾಗಿ ಬೆಳೆಯಬೇಕು. ಅನೇಕ ಸಾಮಾಜಿಕ ಸುಧಾರಕರು ಮಹಿಳೆಯರ ಪ್ರಗತಿಗೆ ಅಡಿಪಾಯ ಹಾಕಿದ್ದಾರೆ. -ಅರ್ಪಿತಾರಾಜೆ ಭೋಸಲೆ, ಕಾರ್ಯದರ್ಶಿ, ಹಿರಕಣಿ ಮಹಿಳಾ ವಿವಿಧೋದ್ದೇಶ ಸಂಸ್ಥೆ

ಟಾಪ್ ನ್ಯೂಸ್

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

2-kalburgi

Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.