ಸಚಿವ ಸುಧಾಕರ್ ವಿರುದ್ಧ ಸಿಡಿದೆದ್ದ ದಲಿತ ಸಂಘಟನೆ : ಚಿಕ್ಕಬಳ್ಳಾಪುರದಲ್ಲಿ ಬೃಹತ್ ಪ್ರತಿಭಟನೆ

Team Udayavani, Mar 10, 2022, 8:54 PM IST

ಸಚಿವ ಸುಧಾಕರ್ ವಿರುದ್ಧ ಸಿಡಿದೇಳಿದ ದಲಿತ ಸಂಘಟನೆ : ಚಿಕ್ಕಬಳ್ಳಾಪುರದಲ್ಲಿ ಬೃಹತ್ ಪ್ರತಿಭಟನೆ

ಚಿಕ್ಕಬಳ್ಳಾಪುರ : ಬೌಧ್ಧ ಧರ್ಮದ ಅವಹೇಳನೆ ಮಾಡಿ ನೀಡಿದರೆನ್ನಲಾದ ಹೇಳಿಕೆಯನ್ನು ಖಂಡಿಸಿ ಸಚಿವ ಡಾ.ಕೆ.ಸುಧಾಕರ್ ಅವರು ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ನಗರದಲ್ಲಿ ದಲಿತ ಸಂಘಟನೆಗಳ ಒಕ್ಕೂಟದ ಸದಸ್ಯರು ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭಗವಾನ್ ಬುದ್ದ ಅವರ ವಿಗ್ರಹದೊಂದಿಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ದಲಿತ ಸಂಘಟನೆಗಳ ಒಕ್ಕೂಟದ ಸದಸ್ಯರು ಬೌಧ್ದಧರ್ಮದ ಕುರಿತು ಅವಹೇಳನೆ ಮಾಡಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಕೂಡಲೇ ರಾಜಿನಾಮೆ ನೀಡಬೇಕೆಂದು ಒತ್ತಾಯಿಸಿದರು.
ಬುದ್ಧ ಧರ್ಮ ಜಗತ್ತಿನ ಶ್ರೇಷ್ಠ ಧರ್ಮ ಆಗಿದೆ ಮನುಷ್ಯರೆಲ್ಲರೂ ಸಮಾನರು ಎಂದು ಹೇಳುವ ಜಗತ್ತಿನ ಏಕೈಕ ಧರ್ಮ ಬೌದ್ಧ ಧರ್ಮ ದೇಶದ ಶೋಷಿತ ಸಮುದಾಯದ ಎಲ್ಲರೂ ಬುದ್ಧನ ಅನುಯಾಯಿಗಳಾಗಿದ್ದಾರೆ ಆದರೆ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರು ಚಿಕ್ಕಬಳ್ಳಾಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬೌದ್ಧ ಧರ್ಮದ ಸುಳಿಗೆ ಸಿಕ್ಕ ವಿಶ್ವದ ನಾನಾ ದೇಶಗಳು ಆ ಧರ್ಮಕ್ಕೆ ಮತಾಂತರ ಆಗುತ್ತಿರುವಾಗ ಅದನ್ನು ತಡೆದು ಭಾರತೀಯ ಧರ್ಮವನ್ನು ಉಳಿಸಿದ ಕೀರ್ತಿ ಬ್ರಾಹ್ಮಣ ಸಮುದಾಯದ ಆದಿಶಂಕರಾಚಾರ್ಯ ಸಲ್ಲುತ್ತದೆ ಎಂದು ಹೇಳುವ ಮೂಲಕ ಶೋಷಿತ ಸಮುದಾಯದ ಮನಸ್ಸಿಗೆ ನೋವುಂಟು ಮಾಡಿದ್ದಾರೆ ಈ ಮಾತುಗಳನ್ನು ದಲಿತ ಸಂಘಟನೆಗಳ ಒಕ್ಕೂಟ ಖಂಡಿಸುತ್ತದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

ನಮ್ಮ ಸಂವಿಧಾನವು ಎಲ್ಲ ಧರ್ಮಗಳನ್ನು ಸಮಾನವಾಗಿ ಕಾಣುತ್ತದೆ ಆದರೆ ಸಚಿವ ಸುಧಾಕರ್ ಅವರು ಜನಪ್ರತಿನಿಧಿಗಳಾಗಿ ಆಯ್ಕೆಯಾಗಿದ್ದರು ಒಂದು ಧರ್ಮವನ್ನು ಹೊಗಳುತ್ತಾ ಇನ್ನೊಂದು ಧರ್ಮವನ್ನು ನಿಂದಿಸುವುದು ಸಂವಿಧಾನಕ್ಕೆ ತಂದ ಅಪಚಾರವಾಗಿದೆ ದಮನಿತ ಸಮುದಾಯದ ವೇದಿಕೆಗಳಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಅವರನ್ನು ಹೊಗಳುವ ಮೂಲಕ ಸಚಿವ ಡಾ.ಕೆ.ಸುಧಾಕರ್ ಓಟಿನ ರಾಜಕಾರಣವನ್ನು ಮಾಡುತ್ತಿದ್ದಾರೆ ಸಚಿವರು ಹೊರಗಡೆ ಬುದ್ಧಿವಾದವನ್ನು ಪೂಜಿಸುತ್ತಾ ಒಳಗಡೆ ಮನವನ್ನು ಇಟ್ಟುಕೊಂಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿ ಸಚಿವ ಡಾ.ಕೆ.ಸುಧಾಕರ್ ಬೇಷರತ್ ಕ್ಷೆಮೆಯಾಚಿಸಬೇಕು ಇಲ್ಲದಿದ್ದ ಪಕ್ಷದಲ್ಲಿ ರಾಜ್ಯಾದ್ಯಂತ ಅವರ ವಿರುಧ್ಧ ಹೋರಾಟ ನಡೆಸಲಾಗುವುದೆಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಇದನ್ನೂ ಓದಿ : ಅರಣ್ಯವಾಸಿಗಳ ಸಭೆಯಲ್ಲಿ ಭಾಗಿಯಾಗದ ಅಧಿಕಾರಿಗಳು : ಪಟ್ಟು ಬಿಡದ ಹೋರಾಟಗಾರರು

ಉಪ ವಿಭಾಗಾಧಿಕಾರಿ ಸಂತೋಷ ಕುಮಾರ್ ಅವರ ಮೂಲಕ ಸಿಎಂ ಬಸವರಾಜ್ ಬೊಮ್ಮಯಿ ಮತ್ತು ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ದಲಿತ ಸಂಘಟನೆಗಳ ಒಕ್ಕೂಟ ರಾಜ್ಯಾಧ್ಯಕ್ಷ ಡಾ.ಎಂ.ವೆAಕಟಸ್ವಾಮಿ, ತುಮಕೂರಿನ ತಿಪ್ಪೆರುದ್ರಸ್ವಾಮಿಜೀ, ನಾಗಸೇನೆ ಬುದ್ದವಿವಾಹರದ ಬುದ್ದಮ್ಮ, ತಮ್ಮಚಾರಿ ಡಾ.ಹೆಚ್.ಆರ್.ಸುರೇಂದ್ರ, ದಲಿತ ಸಂಘರ್ಷ ಸಮಿತಿಯ ಮುಖಂಡ ಗಡ್ಡಂ ವೆಂಕಟೇಶ್, ಜಿಪಂ ಮಾಜಿ ಸದಸ್ಯ ಕೆ.ಸಿ. ರಾಜಕಾಂತ್, ಬುದ್ದಿಸ್ಟ್ ಸೊಸೈಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ್ ಬಾಲ್ಕೆ, ಸಮತಾ ಸೈನಿಕದಳದ ಜಿಲ್ಲಾಧ್ಯಕ್ಷ ವೆಂಕಟರವಣಪ್ಪ, ಕದಸಂಸ ಜಿಲ್ಲಾ ಸಂಚಾಲಕ ಮೇಲೂರು ಮಂಜುನಾಥ್, ಶಿಡ್ಲಘಟ್ಟ ನಾಗನರಸಿಂಹ ಮತ್ತಿತರರು ಭಾಗವಹಿಸಿದರು.

ಟಾಪ್ ನ್ಯೂಸ್

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

crimebb

Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

hejjenu 1

Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.