ಮೊದಲ ಹೆಜ್ಜೆಯಲ್ಲೇ ಎಡವಿದ ಪ್ರಿಯಾಂಕಾ
Team Udayavani, Mar 11, 2022, 8:00 AM IST
ಸೋನಿಯಾ ಗಾಂಧಿ ಬಿಟ್ಟರೆ ಕಾಂಗ್ರೆಸ್‌ಗೆ ಪ್ರಿಯಾಂಕಾ ವಾದ್ರಾ ಅವರೇ ದೊಡ್ಡ ನಾಯಕಿಯಾಗಬಲ್ಲರು, ಇಂದಿರಾಗಾಂಧಿಯ ವರ್ಚಸ್ಸು ಪ್ರಿಯಾಂಕಾ ಅವರಿಗಿದೆ ಎನ್ನುವ ನಿರೀಕ್ಷೆಯು ದೇಶಾದ್ಯಂತ ಪಕ್ಷದ ಕಾರ್ಯಕರ್ತರಲ್ಲಿ ನೆಲೆಯೂರಿತ್ತು. ಆದರೆ ಉತ್ತರ ಪ್ರದೇಶದ ಚುನಾವಣಾ ಫಲಿತಾಂಶ ಆ ಎಲ್ಲಾ ನಿರೀಕ್ಷೆಯನ್ನು ಧೂಳೀಪಟ ಮಾಡಿದೆ. ಮೊದಲ ಹೆಜ್ಜೆಯಲ್ಲೇ ಪ್ರಿಯಾಂಕಾ ಎಡವಿ ಬಿದ್ದಿದ್ದಾರೆ.
“ಲಡ್ಕೀ ಹೂಂ, ಲಡ್ ಸಕ್ತೀ ಹೂಂ’ ಎಂಬ ಸ್ಲೋಗನ್‌ನೊಂದಿಗೆ ನಾರಿಶಕ್ತಿಯನ್ನೇ ಪ್ರಮುಖವಾಗಿಸಿಕೊಂಡು ಹೆಚ್ಚು ಕ್ಷೇತ್ರಗಳಲ್ಲಿ ಹೆಣ್ಣು ಮಕ್ಕಳನ್ನೇ ಕಣಕ್ಕಿಳಿಸಿ ಗೆಲ್ಲುವ ಅವರ ಯತ್ನವೂ ಫಲ ನೀಡಲಿಲ್ಲ, ಇನ್ನೇನು ಚುನಾವಣೆ ಸಮೀಪಿಸುತ್ತಿದ್ದಂತೆ ಈ ಅಭಿಯಾನದ ಪ್ರಮುಖ ಮುಖಗಳೇ ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿ, ಕಮಲ ಹಿಡಿದರು. ಪ್ರಿಯಾಂಕಾರನ್ನು ನಂಬಿ ಕಣಕ್ಕಿಳಿದ ಹಲವು ಹೆಣ್ಣು ಮಕ್ಕಳು ಠೇವಣಿಯನ್ನೂ ಕಳೆದುಕೊಂಡರು.
ಕುಟುಂಬ ರಾಜಕೀಯ ಹಿನ್ನೆಲೆ ಅಥವಾ ಹೆಣ್ಣೆಂಬ ಕರುಣೆ ಚುನಾವಣೆಯಲ್ಲಿ ನಡೆಯುವುದಿಲ್ಲ ಎನ್ನುವುದನ್ನು ಉತ್ತರ ಪ್ರದೇಶದ ಜನರು ಪ್ರಿಯಾಂಕಾ ಅವರಿಗೆ ತೋರಿಸಿಕೊಟ್ಟಿದ್ದಾರೆ. ಕ್ಷೇತ್ರದಲ್ಲಿ ನಿಂತು ಕೆಲಸ ಮಾಡುವವರಿಗೆ ಮಾತ್ರವೇ ಮಣೆ ಎನ್ನುವುದನ್ನೂ ಮತದಾರರು ಸ್ಪಷ್ಟಪಡಿಸಿದ್ದಾರೆ. ಒಂದು ಕಾಲದಲ್ಲಿ ಕಾಂಗ್ರೆಸ್‌ನ “ಬ್ರಹ್ಮಾಸ್ತ್ರ’ ಎಂದು ಬಿಂಬಿತರಾಗಿದ್ದ ಪ್ರಿಯಾಂಕಾ ವಾದ್ರಾ ಅವರು ಕಾರ್ಯಕರ್ತರ ನಿರೀಕ್ಷೆಯನ್ನು ಹುಸಿಗೊಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ
Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ
MUST WATCH
ಹೊಸ ಸೇರ್ಪಡೆ
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
ನಮ್ಮಲ್ಲಿಗೆ ಬಂದರೆ ಇಸ್ರೇಲ್ ಪ್ರಧಾನಿ ಬಂಧನ: ಬ್ರಿಟನ್!
Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ
Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.