![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Mar 11, 2022, 10:02 AM IST
ಹುಮನಾಬಾದ: ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ದಾಖಲೆಗಳಿರುವ ಕೊಠಡಿಗೆ ಗುರುವಾರ ಸಂಜೆ ಅನುಮಾನಸ್ಪದವಾಗಿ ಬೆಂಕಿ ಬಿದ್ದಿರುವ ಘಟನೆ ನಡೆದಿದೆ.
ಮುಖ್ಯ ಕಚೇರಿಯ ಪಕ್ಕದಲ್ಲಿಯೇ ದಾಖಲೆಗಳು ಸಂಗ್ರಹಿಸಿರುವ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಕೆಲ ದಾಖಲೆಗಳು ಬೆಂಕಿಗೆ ಆಹುತಿಯಾಗಿ ಇರುವುದು ಕಂಡುಬರುತ್ತಿದೆ. ಕೊಠಡಿಯ ಕಿಟಕಿಗಳು ತೆರೆದಿದ್ದು ದಾಖಲೆ ಪುಸ್ತಕಗಳು ಕಣ್ಣಿಗೆ ಕಾಣುವಂತಿವೆ. ಕಿಟಕಿ ಬಾಗಿಲುಗಳಿಗೆ ಯಾವುದೇ ಭದ್ರತೆ ಇಲ್ಲದ ಕಾರಣಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರಬೇಕೆಂದು ಹೇಳಲಾಗುತ್ತಿದೆ.
ಬೆಂಕಿ ಅವಘಡದ ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಗಿರೀಶ್ ರಂಜೋಳಕರ್ ಮಾಹಿತಿ ನೀಡಿದ್ದಾರೆ.
ಕಳೆದ ಕೆಲ ವರ್ಷಗಳ ಹಿಂದೆ ಕೂಡ ಅದೇ ದಾಖಲೆಗಳಿರುವ ಕೋಣೆಗೆ ಬೆಂಕಿ ಬಿದ್ದಿತ್ತು. ಅನೇಕ ದಾಖಲೆಗಳು ಬೆಂಕಿಗೆ ಆಹುತಿಯಾಗಿದ್ದವು. ಇದೀಗ ಮತ್ತೆ ಅದೇ ಕೋಣೆಗೆ ಬೆಂಕಿ ಕಾಣಿಸಿಕೊಂಡಿದ್ದು ಅನೇಕ ಅನುಮಾನಕ್ಕೆ ಎಡೆ ಮಾಡಿ ಕೊಡುವಂತಾಗಿದೆ.
Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್ ಪ್ರಕರಣದ ಆರೋಪಿಗಳ ಗುರುತು ಪತ್ತೆ
Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ
Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು
Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ
Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ
You seem to have an Ad Blocker on.
To continue reading, please turn it off or whitelist Udayavani.